Sun,May19,2024
ಕನ್ನಡ / English

ಪ್ರಧಾನಿ ಜೊತೆಗಿನ ಅಂತರಿಕ ಸಭೆಯ ನೇರ ಪ್ರಸಾರ ಮಾಡಿದಕ್ಕೆ ಕ್ಷಮೆಯಾಚಿಸಿದ ದೆಹಲಿ ಸಿಎಂ ಕೇಜ್ರಿವಾಲ್ | ಜನತಾ ನ್ಯೂಸ್

23 Apr 2021
1524

ನವದೆಹಲಿ : ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಕೇಂದ್ರ ಸರ್ಕಾರದ ಪ್ರೋಟೋಕಾಲ್ ಉಲ್ಲಂಘಿಸಿ ಆಂತರಿಕ ಸಭೆಗಳ ನೇರ ಪ್ರಸಾರ ಮಾಡಿ, ಬಳಿಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಕ್ಷಮೆ ಯಾಚಿಸಿರುವ ಘಟನೆ ಇಂದು ವರ್ಚುಯಲ್ ಸಭೆಯ ಸಂದರ್ಭದಲ್ಲಿ ನಡೆದಿದೆ.

ವಿವಿಧ ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿಯವರು ತಮ್ಮ ಅಧ್ಯಕ್ಷತೆಯಲ್ಲಿ ಕೋವಿಡ್-19 ಅನ್ನು ನಿಭಾಯಿಸುವ ಕುರಿತು ಆಂತರಿಕ ಸಭೆ ನಡೆಸುತ್ತಿದ್ದರು. ಪ್ರೋಟೋಕೋಲ್ ಉಲ್ಲಂಘಿಸಿ ಈ ಸಭೆಯ ನೇರ ಪ್ರಸಾರವನ್ನು ಮಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ, ಸರ್ಕಾರಿ ಪ್ರೋಟೋಕಾಲ್ ಅನುಸರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದರು.

ಸಿಎಂ ಕೇಜ್ರಿವಾಲ್ ಮಾತಿನ ಮಧ್ಯ ಪ್ರವೇಶಿಸಿದ ಪ್ರಧಾನಿ ಮೋದಿ ಯವರು, ನಮ್ಮ ಪರಂಪರೆ ಹಾಗೂ ಪ್ರೋಟೋಕಾಲ್ ಗಳ ಬಹಳ ಉಲ್ಲಂಘನೆಯಾಗುತ್ತಿದೆ, ಏಕೆಂದರೆ, ಯಾರೋ ಒಬ್ಬ ಮುಖ್ಯಮಂತ್ರಿ ಈ ರೀತಿಯ ಆಂತರಿಕ ಸಭೆಯ ನೇರಪ್ರಸಾರ ಮಾಡುತ್ತಿದ್ದಾರೆ. ಇದು ಉಚಿತವಲ್ಲ. ನಾವು ಯಾವಾಗಲೂ ಈ ವಿಷಯದಲ್ಲಿ ಸಂಯಮ ಪಾಲಿಸಬೇಕಾಗುತ್ತದೆ, ಎಂದು ಪ್ರಧಾನಿ ಮೋದಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಬಳಿಕ ತಮ್ಮ ಮಾತು ಮುಂದುವರಿಸಿದ ಕೇಜ್ರಿವಾಲ್ ಅವರು ತಮ್ಮಿಂದ ತಪ್ಪಾಗಿದ್ದಲ್ಲಿ ಕ್ಷಮೆಯಿರಲಿ ಎಂದು ಕ್ಷಮೆಯಾಚಿಸಿದರು.

RELATED TOPICS:
English summary :Delhi CM Kejriwal apologizes for live telecasting internal meeting with PM

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...