Sun,May19,2024
ಕನ್ನಡ / English

ಜಿಂದಾಲ್​ಗೆ 3667 ಎಕರೆ ಭೂಮಿ ಕದ್ದುಮುಚ್ಚಿ ಮಾರುವುದು ಬಿಜೆಪಿ ಸಂಸ್ಕೃತಿನಾ? : ಬಿಎಸ್ ವೈ ಸರ್ಕಾರದ ವಿರುದ್ಧ ಕಿಡಿಕಾರಿದ HDK | ಜನತಾ ನ್ಯೂಸ್

27 Apr 2021
1289

ಬೆಂಗಳೂರು : ಬಿಜೆಪಿ ಸರ್ಕಾರ ಜಿಂದಾಲ್‌ ಮುಂದೆ ಏಕಾಏಕಿ ಮಂಡಿಯೂರಲೂ ಒಂದು ಕಾರಣವಿದೆ. ಅದೇನೆಂದು ಯಡಿಯೂರಪ್ಪರಿಗೆ ಚನ್ನಾಗಿ ಗೊತ್ತಿದೆ. ಅದನ್ನು ಅವರೇ ಬಹಿರಂಗಪಡಿಸಲಿ. ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ನಾವು ಭೂಮಿ ಮಾರಾಟಕ್ಕೆ ನಿರ್ಧರಿಸಿದ್ದೆವು. ಆಗ ಬಿ.ಎಸ್.ಯಡಿಯೂರಪ್ಪರಿಂದ ಅಹೋರಾತ್ರಿ ಧರಣಿ ನಡೆಯಿತು. ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗಿತ್ತು. ಮೈತ್ರಿ ಸರ್ಕಾರದ ಮೇಲೆ ಕಿಕ್‌ಬ್ಯಾಕ್ ಆರೋಪ ಮಾಡಿದ್ದರು. ಭೂಮಿಯ ಮಾರಾಟವನ್ನು ವಿರೋಧಿಸಿ ಹೋರಾಟ ಮಾಡಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಸದ್ದಿಲ್ಲದೆ ಭೂಮಿ ಮಾರಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ವಿರೋಧ ಪಕ್ಷದಲ್ಲಿದ್ದಾಗ ಭೂಮಿ ಮಾರಾಟಕ್ಕೆ ವಿರೋಧಿಸಿದ್ರೆ ಆಡಳಿತಕ್ಕೆ ಬಂದಾಗ ನೀವು ಭೂಮಿ ಮಾರಾಟ ಮಾಡಿದ್ದೀರಿ. ಕದ್ದುಮುಚ್ಚಿ ಭೂಮಿ ಮಾರುವುದು ಬಿಜೆಪಿ ಸಂಸ್ಕೃತಿನಾ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ.

ಬಿಎಸ್‌ವೈ ಅಹೋರಾತ್ರಿ ಧರಣಿ, ಬಿಜೆಪಿ ಯುವ ಮೋರ್ಚಾದಿಂದ ವಿಧಾನಸೌಧ ಮುತ್ತಿಗೆ, ಮೈತ್ರಿ ಸರ್ಕಾರದ ಮೇಲೆ ಕಿಕ್‌ ಬ್ಯಾಕ್‌ ಆರೋಪ... ಜಿಂದಾಲ್‌ಗೆ 3,677 ಎಕರೆ ಭೂಮಿ ಮಾರಾಟ ಮಾಡಲು ನಿರ್ಧರಿಸಿದ್ದ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟಗಳಿವು. ಆದರೆ ಇಂದು ಬಿಜೆಪಿ ಅದೇ ಜಿಂದಾಲ್‌ಗೆ ಅದೇ ಭೂಮಿಯನ್ನು ಸದ್ದಿಲ್ಲದೇ ಮಾರಿದೆ ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ವಿರೋಧಕ್ಕಾಗಿಯೇ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ಸಂಸ್ಕೃತಿ. ಜಿಂದಾಲ್‌ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ, ನನ್ನ ವಿರುದ್ಧ ಸಲ್ಲದ ಆರೋಪ ಮಾಡಿದ್ದ ಬಿಎಸ್‌ವೈ ಇಂದು ಅದೇ ಆರೋಪಗಳನ್ನು ತಮ್ಮ ಮೇಲೆ ಹೊತ್ತುಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.

ಆಗ ಕಾಂಗ್ರೆಸ್‌ ಶಾಸಕರಾಗಿದ್ದ, ಈಗ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಆನಂದ್‌ ಸಿಂಗ್‌ ಜಿಂದಾಲ್‌ ಅನ್ನು ಈಸ್ಟ್‌ ಇಂಡಿಯಾ ಕಂಪನಿ ಎಂದಿದ್ದರು. ಜಿಂದಾಲ್‌ ವಿರುದ್ಧ ಅಂದಿನ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಅವರೇ ಇರುವ ಈಗಿನ ಸಂಪುಟ ಸಭೆ ಜಿಂದಾಲ್‌ಗೆ ಭೂಮಿ ನೀಡಿದೆ. ಆನಂದ್‌ ಸಿಂಗ್‌ ಈಗ ಈಸ್ಟ್‌ ಇಂಡಿಯಾ ಕಂಪನಿ ಪರವಾಗಿದ್ದಾರಾ?. ಜಿಂದಾಲ್‌ಗೆ ಭೂಮಿ ನೀಡುವ ವಿಚಾರವಾಗಿ ಅಂದು ಮೈತ್ರಿ ಸರ್ಕಾರದ ಭಾಗವಾಗಿದ್ದುಕೊಂಡೇ ಟೀಕೆ ಮಾಡಿದ್ದ, ದಾಖಲೆ, ಪತ್ರಗಳನ್ನು ಬಿಡುಗಡೆ ಮಾಡಿದ್ದ ಎಚ್‌.ಕೆ ಪಾಟೀಲ್‌ ಅವರು ಈಗ ಏನು ಮಾಡುತ್ತಿದ್ದಾರೆ. ಅವರ ದಾಖಲೆ ಪತ್ರಗಳೆಲ್ಲವೂ ಎಲ್ಲಿ ಅಡಗಿಕೊಂಡಿವೆ? ಈಗ ಅವುಗಳನ್ನು ಮತ್ತೊಮ್ಮೆ ಬಿಡುಗಡೆ ಮಾಡಲು ಯಾರು ಅಡ್ಡ ಇದ್ದಾರೆ? ಎಂದು ದೂರಿದ್ದಾರೆ.

ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿ ಮಾರಾಟ ಮಾಡಲು ಬಿಜೆಪಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಆದರೆ, ಎಕರೆವಾರು ಶುದ್ಧ ಕ್ರಯಕ್ಕೆ ನಿಗದಿ ಮಾಡಿದ ಮೊತ್ತವೆಷ್ಟು ಎಂಬ ಪ್ರಶ್ನೆಗೆ ಗೃಹ ಸಚಿವರೇ ಗೊತ್ತಿಲ್ಲ ಎಂಬ ಉತ್ತರ ನೀಡಿದ್ದಾರೆ. ಸ್ವತಃ ಗೃಹ ಸಚಿವರಿಗೇ ಮಾಹಿತಿ ಇಲ್ಲ ಎಂದರೆ ಏನು ಅರ್ಥ? ಇದನ್ನು ನಂಬಲು ಸಾಧ್ಯವೇ ಎಂದಿರುವ ಅವರು, ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಶುದ್ಧ ಕ್ರಯ ಮಾಡಿಕೊಡಬೇಕಾದ್ದು ಕಾನೂನು. ಅದನ್ನೇ ನನ್ನ ಸರ್ಕಾರ ಮಾಡಲು ಹೊರಟಿತ್ತು. ಆದರೆ ಬಿಜೆಪಿ ಕಿತಾಪತಿ ಮಾಡಿತ್ತು. ಜನರಲ್ಲಿ ಮೂಡಬಹುದಾದ ಸಂಶಯ ನಿವಾರಣೆ ಮಾಡಿ ನಂತರ ಭೂಮಿ ನೀಡುವ ನಿರ್ಧಾರಕ್ಕೆ ಬಂದ ನನ್ನ ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ನಿಲ್ಲಿಸಿತ್ತು. ಬಿಜೆಪಿಗೆ ಈಗ ಜ್ಞಾನೋದಯವಾಗಿದೆ ಎಂದಿದ್ದಾರೆ.

ಲೀಸ್‌ ಕಂ ಸೇಲ್‌ ಆಧಾರದ ಭೂಮಿಯನ್ನು ಅಂತಿಮವಾಗಿ ಕ್ರಯ ಮಾಡಿಕೊಡಲೇಬೇಕಾದ ಕಾನೂನು ಬಿಜೆಪಿಗೆ ಈಗಲಾದರೂ ಅರಿವಿಗೆ ಬಂದಿದ್ದರೆ ಸಾಕು. ಇನ್ನಾದರೂ ಬಿಜೆಪಿ ಸಲ್ಲದ ಕಿತಾಪತಿ ಮಾಡದಿರಲಿ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...