Wed,May15,2024
ಕನ್ನಡ / English

ಲಸಿಕೆ ವಿಚಾರ: ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು | ಜನತಾ ನ್ಯೂಸ್

29 Apr 2021
2268

ಬೆಂಗಳೂರು : ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಫಲ್ಯದ ಬಗ್ಗೆ ಟ್ವೀಟ್ ಮಾಡಿರುವ ಅವರು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೇ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಲಭ್ಯವಿರುವ ಮಾಹಿತಿ ಪ್ರಕಾರ ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಏದುಸಿರು ಬಿಡುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಹೆಣಗಾಡುತ್ತಿದೆ ಎಂದಿದ್ದಾರೆ.

18 ವರ್ಷ ಮೇಲ್ಪಟ್ಟ ದೇಶದ ಕೋಟ್ಯಾಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೊಣೆಗೇಡಿತನ ಮತ್ತು ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು ಎಂದಿದ್ದಾರೆ.

ದೇಶದ ಕೋಟ್ಯಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೊಣೆಗೇಡಿತನ ಮತ್ತು ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು. ಆತುರಗಾರನಿಗೆ ಬುದ್ಧಿ ಕಡಿಮೆ ಎಂಬಂತೆ ಕೇವಲ ಮಾತಿನಲ್ಲಿ ಜನರನ್ನು ಓಲೈಸುವ ಇಂತಹ ಬೂಟಾಟಿಕೆಯನ್ನು ಸರ್ಕಾರ ಬಿಡಬೇಕು ಎಂದು ಹೆಚ್​​ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ ಎನ್ನುವ ಸರ್ಕಾರ ಇದ್ದರೇನು? ಇಲ್ಲದಿದ್ದರೇನು?. ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಲಸಿಕೆ ಹಾಕಲಾಗಿದೆ? ಅವರಲ್ಲಿ ಎಷ್ಟು ಮಂದಿಗೆ ಎರಡನೇ ಹಂತದಲ್ಲಿ ಲಸಿಕೆ ಕೊಡಲಾಗಿದೆ? ಎಂಬ ಅಂಕಿ - ಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿ ಎಂದು ಆಗ್ರಹಿಸಿದ್ದಾರೆ.

ದೇಶದಾದ್ಯಂತ ಕೊರೊನಾ ಸೋಂಕಿತರು ಬೆಡ್, ಆಕ್ಸಿಜನ್, ಆ್ಯಂಬುಲೆನ್ಸ್​​​​, ಔಷಧಗಳಿಲ್ಲದೆ ಪರದಾಡುತ್ತಿದ್ದಾರೆ. ಸತ್ತವರ ಅಂತ್ಯಸಂಸ್ಕಾರಕ್ಕೂ ಪಾಳಿಯಲ್ಲಿ ನಿಲ್ಲಬೇಕಾದ ವ್ಯವಸ್ಥೆ ಸೃಷ್ಟಿಸಿದ ಕೇಂದ್ರ - ರಾಜ್ಯ ಸರ್ಕಾರಗಳ ದಯನೀಯ ವೈಫಲ್ಯದ ಬಗ್ಗೆ ದೇಶದ ಜನತೆ ಹಿಡಿಶಾಪ ಹಾಕುತ್ತಿದ್ದಾರೆ.

ಅರಿವುಗೇಡಿಗಳಂತೆ ಪುಕ್ಕಟೆ ಪ್ರವಚನ ನೀಡುತ್ತಿರುವ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರುಗಳು ಕನಿಷ್ಠ ಸಾಮಾನ್ಯ ರೀತಿ ಪ್ರತಿಕ್ರಿಯಿಸುವುದನ್ನು, ಇಂತಹ ದುರಿತ ಕಾಲದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಯನ್ನು ಜವಾಬ್ದಾರಿಯಿಂದ ನಿಭಾಯಿಸುವುದು ಒಳಿತು ಎಂದು ವಾಗ್ದಾಳಿ ನಡೆಸಿದ್ದಾರೆ.

18 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಯಾವತ್ತಿನಿಂದ ಲಸಿಕೆ ಹಾಕುವ ಅಭಿಯಾನ ಶುರು ಮಾಡುವಿರಿ? ಎಂಬುದನ್ನು ಸ್ಪಷ್ಟವಾಗಿ ದೇಶದ ಜನತೆಗೆ ಮಾಹಿತಿ ಕೊಡಿ. ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತೆ ವರ್ತಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತನ ದೇಶದ ಜನತೆ ಮೂರ್ಖರು ಎಂದು ಭಾವಿಸಿದಂತಿದೆ ಎಂದಿದ್ದಾರೆ.

ಲಸಿಕೆ ನೀಡುವ ವಿಷಯದಲ್ಲಿ ಜನತೆ ಸಿನಿಕರಾಗದಂತೆ ಎಚ್ಚರವಹಿಸುವುದು ಸರ್ಕಾರಗಳ ಜವಾಬ್ದಾರಿ. ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಸರ್ಕಾರ ಉಡಾಫೆಯ ಧೋರಣೆ ತಳೆಯುವುದು ಸರಿಯಲ್ಲ ಎಂದು ಹೇಳಿದ್ದಾರೆ.

RELATED TOPICS:
English summary :HD Kumaraswamy

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...