Sun,May19,2024
ಕನ್ನಡ / English

ಶವ ಸಂಸ್ಕಾರಕ್ಕೆ ಕ್ಯೂ, ಲಂಚ ಕೊಡಬೇಕಾದ ಪರಿಸ್ಥಿತಿ, ಇದು ಸುಳ್ಳಾ? : ಬಿಎಸ್‌ವೈ ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆ | ಜನತಾ ನ್ಯೂಸ್

29 Apr 2021
1590

ಬೆಂಗಳೂರು : ಕೋವಿಡ್ ನಿರ್ವಹಣೆಯಲ್ಲಿ ಬಿಎಸ್‌ಯಡಿಯೂರಪ್ಪ ನೇತ್ರತ್ವದ ರಾಜ್ಯ ಸರ್ಕಾರ ವೈಪಲ್ಯವನ್ನು ಎತ್ತಿಹಿಡಿಯುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರಿಗೆ, ರಾಜ್ಯ ಬಿಜೆಪಿ ನಾಯಕರು ಟೀಕೆ ಮಾಡುತ್ತಾರೆ ಎಂದಿದ್ದಕ್ಕೆ ಸಿದ್ದರಾಮಯ್ಯ ಇಂದು ತಿರುಗೇಟು ನೀಡಿದ್ದಾರೆ.

ರೋಗಿಗಳಿಗೆ ಆಕ್ಸಿಜನ್, ಐಸಿಯು ಹಾಸಿಗೆಗಳು, ಆಂಬುಲೆನ್ಸ್ ಗಳು ಅಗತ್ಯ ಸಮಯದಲ್ಲಿ ಸಿಗುತ್ತಿಲ್ಲ ಎಂದು ಸತ್ಯ ಹೇಳಿದರೆ ರಾಜ್ಯ ಬಿಜೆಪಿ ನಾಯಕರು ನಾನು ಟೀಕೆ ಮಾಡುತ್ತಿದ್ದೇನೆ ಅಂತಾರೆ. ಶವ ಸಂಸ್ಕಾರ ಮಾಡಲು ಕ್ಯೂನಲ್ಲಿ ನಿಲ್ಲಬೇಕಾದ, ಲಂಚ ಕೊಡಬೇಕಾದ ಪರಿಸ್ಥಿತಿ ಇದೆ. ಇದು ಸುಳ್ಳಾ? ಇದನ್ನು ಹೇಳಿದ್ರೆ ಟೀಕೆಯಾಗುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಸರ್ಕಾರ ಕೊರೊನಾ ಇಂದ ಸಾವಿಗೀಡಾದ ಜನರ ನಿಜ ಲೆಕ್ಕವನ್ನು ಮುಚ್ಚಿಟ್ಟು, ಜನರಿಗೆ ಸುಳ್ಳು ಹೇಳುತ್ತಿದೆ. ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಬಿಡುಗಡೆ ಮಾಡುವ ಮೃತರ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಬಿಜೆಪಿ ಸರ್ಕಾರ ಅಗತ್ಯ ವೈದ್ಯಕೀಯ ಸೌಲಭ್ಯ ನೀಡಿದ್ದರೆ ಜನ ಹೀಗೆ ಸಾಯುವ ಸನ್ನಿವೇಶ ಬರುತ್ತಿತ್ತಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಬಡ ರೈತನೊಬ್ಬನಿಗೆ ಹೊಟ್ಟೆಗಿಲ್ಲದಿದ್ದರೆ ಸಾಯೋದೆ ಒಳ್ಳೆಯದು, ಎಂಬ ಉಡಾಫೆ ಉತ್ತರ ನೀಡಿರುವ ಉಮೇಶ್ ಕತ್ತಿ ಸಚಿವನಾಗಿ ಮುಂದುವರೆಯಲು ನಾಲಾಯಕ್. ಕತ್ತಿ ಪರವಾಗಿ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸುವ ಬದಲು ಮಂತ್ರಿಮಂಡಲದಿಂದ ಕೈಬಿಡಬೇಕಿತ್ತು. ಇಂತಹ ಅಯೋಗ್ಯರನ್ನು ಇಟ್ಟುಕೊಂಡು ಸರ್ಕಾರ ಬಡವರ ಪರವಾಗಿ ಕೆಲಸ ಮಾಡಲು ಆಗುತ್ತಾ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಲಾಕ್‌ಡೌನ್ ನಿಂದಾಗಿ ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ, ಅಗತ್ಯ ವಸ್ತುಗಳನ್ನು ಕೊಳ್ಳಲು ಅವರ ಬಳಿ ಹಣವಿಲ್ಲ. ಹಾಗಾಗಿ ರಾಜ್ಯ ಬಿಜೆಪಿ ಸರ್ಕಾರ ಪ್ರತೀ ವ್ಯಕ್ತಿಗೆ ತಲಾ ಹತ್ತು ಕೆ.ಜಿ ಅಕ್ಕಿ ಸೇರಿದಂತೆ ಅಗತ್ಯ ದಿನಸಿ ವಸ್ತುಗಳನ್ನು ತಕ್ಷಣ ವಿತರಿಸಬೇಕು ಎಂದು ಬಿಎಸ್‌ವೈ ಅವರನ್ನು ಒತ್ತಾಯಿಸುತ್ತೇನೆ, ಎಂದು ಹೇಳಿದ್ದಾರೆ.

RELATED TOPICS:
English summary :Queue for cremation, bribing situation, is it false? : Siddaramaiah asks series question to BSY govt

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...