ಕಾರುಚಾಲನೆ ವೇಳೆ ಮೊಬೈಲ್ನಲ್ಲಿ ಮಾತು: ಪ್ರಶ್ನಿಸಿದ ಪೊಲೀಸರಿಗೆ ಆವಾಜ್! ವಿಡಿಯೋ ವೈರಲ್ | ಜನತಾ ನ್ಯೂಸ್
ಉಡುಪಿ : ಮೊಬೈಲ್ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ಯುವತಿಯನ್ನು ನಿಲ್ಲಿಸಿದ ಟ್ರಾಫಿಕ್ ಪೊಲೀಸರಿಗೆ ಮಹಿಳೆಯೊಬ್ಬರು ಅವಾಜ್ ಹಾಕಿರುವ ವಿಡಿಯೋ ವೈರಲ್ ಆಗಿದೆ.
ಶನಿವಾರ ಬೆಳಗ್ಗೆ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪ ಚೆಕ್ಪೋಸ್ಟ್ನಲ್ಲಿ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸಾಮಾಜಿಕ ಕಾರ್ಯಕರ್ತೆ ನೀತಾ ಕಾಮತ್ ಎಂಬುವರು ಮೊಬೈಲ್ನಲ್ಲಿ ಮಾತನಾಡಿಕೊಂಡೇ ಕಾರು ಚಾಲನೆ ಮಾಡುತ್ತಿದ್ದರು.
ಅವರ ಕಾರನ್ನು ಅಡ್ಡಗಟ್ಟಿದ ಸಂಚಾರ ಪೊಲೀಸ್ ಠಾಣೆ ಎಸ್ಐ ಖಾದರ್, ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ದಂಡ ಕಟ್ಟುವಂತೆ ಸೂಚಿಸಿದ್ದಾರೆ. ಈ ಹಿನ್ನಲೆ ಪೊಲೀಸರಿಗೆ ಆವಾಜ್ ಹಾಕಿದ ಯುವತಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತೀರಾ ಎಂದಿದ್ದಾಳೆ.
ಟ್ರಾಫಿಕ್ ಪೊಲೀಸರು 3 ಸಾವಿರ ರೂ. ದಂಡ ಕಟ್ಟಿಸಿಕೊಂಡು ಮಹಿಳೆಗೆ ರಶೀದಿ ನೀಡಿದ್ದಾರೆ.