Wed,May15,2024
ಕನ್ನಡ / English

ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ: ಕುಮಾರಸ್ವಾಮಿ | ಜನತಾ ನ್ಯೂಸ್

02 May 2021
1264

ಬೆಂಗಳೂರು : ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜೊತೆಗೇ, 5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿವೆ. ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್‌ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಬಸವಕಲ್ಯಾಣ ಅಸೆಂಬ್ಲಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ ವಿಜೇತರಾಗಿದ್ದಾರೆ. ಇವರು, ಕಾಂಗ್ರೆಸ್ಸಿನ ಪ್ರತಿಸ್ಪರ್ಧಿ ಮಲ್ಲಮ್ಮ ಬಿ ನಾರಾಯಣರಾವ್‌ರನ್ನು 20,448 ಮತಗಳ ಭಾರೀ ಅಂತರದಿಂದ ಸೋಲುಣಿಸಿದ್ದಾರೆ.

ಕಣದಲ್ಲಿದ್ದ ಜೆಡಿಎಸ್ ಅಭ್ಯರ್ಥಿ ಸೈಯದ್ ಯಾಸ್ರಬ್ ಖಾದ್ರಿಗೆ ಕೇವಲ 11,390 ಮತಗಳು ಮಾತ್ರ ಲಭಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಬಸವಕಲ್ಯಾಣದಲ್ಲಿ ಜೆಡಿಎಸ್‌ ಅಭ್ಯರ್ಥಿಗೆ ಮತ ನೀಡಿದ ಎಲ್ಲರಿಗೂ ಧನ್ಯವಾದ. ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರು, ಮುಖಂಡರ ಪರವಾಗಿ ನಾನು ಇರಲಿದ್ದೇನೆ. ಅಪಪ್ರಚಾರ, ಹಣಬಲ ನಮ್ಮ ಗೆಲುವು ಕಸಿದಿರಬಹುದು. ನಮ್ಮ ಅಸ್ತಿತ್ವವನ್ನಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಣಸಲು ನಾವು ಶಕ್ತರೆಂಬ ಸಂದೇಶ ರವಾನಿಸಿದ ಕಾರ್ಯಕರ್ತರಿಗೆ ನಾನು ಋಣಿ ಎಂದು ಟ್ವೀಟ್ ಮಾಡಿದ್ದಾರೆ.

ಅಧಿಕಾರ, ಹಣ, ಒತ್ತಡ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗಟ್ಟಿತನ ನಮಗೆ ಮಾದರಿಯಾಗಲಿದೆ. ಜೆಡಿಎಸ್‌ ನಂತೆಯೇ ದಶಕಗಳ ಕಾಲ ರಾಜಕೀಯ ವನವಾಸ ಅನುಭವಿಸಿದ, ಸಂಕಷ್ಟ ಅನುಭವಿಸಿದ, ಕಠಿಣ ಸಂದರ್ಭದಲ್ಲು ಮುಂದಡಿ ಇಡುತ್ತಲೇ ಮುಂದೆ ಸಾಗಿದ ಡಿಎಂಕೆ ಮತ್ತು ಅದರ ನಾಯಕರ ತಾಳ್ಮೆ ನಮಗೆ ಪಾಠವಾಗಲಿದೆ.

ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿಹಾಕಲಾರವು. ಜನಮನಗೆದ್ದ ಪ್ರಾದೇಶಿಕ ಪಕ್ಷದ ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

ಜೆಡಿಎಸ್‌ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

RELATED TOPICS:
English summary :HD Kumaraswamy

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...