Mon,May13,2024
ಕನ್ನಡ / English

ಈ ಸಾವುಗಳಿಗೆ ಯಾರು ಹೊಣೆ? ಇದು ಸೋಂಕಿನಿಂದಾದ ಸಾವುಗಳಲ್ಲ, ಅವ್ಯವಸ್ಥೆಯ ಸರ್ಕಾರದಿಂದಾದ ಕೊಲೆ.. | ಜನತಾ ನ್ಯೂಸ್

03 May 2021
1113

ಬೆಂಗಳೂರು : ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ 24 ರೋಗಿಗಳು ಸಾವಪ್ಪಿರುವುದಕ್ಕೆ ಕಾಂಗ್ರೆಸ್​ ಪಕ್ಷ, ಬಿಜೆಪಿ ಸರ್ಕಾರವೇ ಹೊಣೆ ಎಂದು ಟ್ವೀಟ್​ ಮಾಡಿದೆ.

ಆಕ್ಸಿಜನ್ ಕೊರತೆಯಿಂದ ಸಂಭವಿಸಿದ 24 ಜನರ ಸಾವಿಗೆ ಹೊಣೆ ಯಾರು? ಇವರನ್ನು ಕಳೆದುಕೊಂಡಿರುವ ಕುಟುಂಬಕ್ಕೆ ಹೇಗೆ ಧೈರ್ಯ ತುಂಬಬೇಕು ಎಂಬುದೇ ತೋಚುತ್ತಿಲ್ಲ. ಈ ಸರ್ಕಾರ ನಂಬಿಕೆ ಕಳೆದುಕೊಂಡಿದ್ದು, ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಜನರಿಗೆ ವಾಸ್ತವಾಂಶ ತಿಳಿಸಿ ಎಂದು ಮಾಡಿಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಇದು ಪ್ರಚಾರ ಪ್ರಿಯ ಸರ್ಕಾರ. ಆಕ್ಸಿಜನ್ ವಿಚಾರದಲ್ಲಿ ಯಾರೂ ಮೇಲ್ವಿಚಾರಣೆ ಮಾಡುತ್ತಿಲ್ಲ. ನಮ್ಮ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕು ಎಂದು ಹೇಳಿದ್ದರು. ಅವರಿಗೆ ಮುಖ್ಯಮಂತ್ರಿಗಳು ಸಮಯಾವಕಾಶ ಕೊಟ್ಟಿದ್ದಾರೋ ಇಲ್ಲವೋ ಗೊತ್ತಿಲ್ಲ.

ಈ ಸರ್ಕಾರದಿಂದಾಗಲಿ ಮುಖ್ಯಮಂತ್ರಿಗಳಿಂದಾಗಲಿ, ಮಂತ್ರಿಗಳಿಂದಾಗಲಿ ಈ ಪರಿಸ್ಥಿತಿ ನಿಭಾಯಿಸಲು ಆಗುತ್ತಿಲ್ಲ. ಅವರ ಆದ್ಯತೆಗಳೇ ಬೇರೆ. ನಮ್ಮ ಮರ್ಯಾದೆ ಹೋದರೂ ಪರವಾಗಿಲ್ಲ, ಶಾಸಕಾಂಗ ಪಕ್ಷದ ಸಭೆ ನಂತರ ನಾನೇ ಮುಖ್ಯಕಾರ್ಯದರ್ಶಿಗಳ ಸಮಾಯಾವಕಾಶ ಕೇಳಿ ಅವರು ಎಲ್ಲಿರುತ್ತಾರೋ ಅಲ್ಲಿಗೇ ಹೋಗಿ ಭೇಟಿ ಮಾಡಿ ಈ ರಾಜ್ಯದ ಜನತೆಗೆ ವಾಸ್ತವಾಂಶ ಏನಿದೆ ಎಂದು ತಿಳಿಸಲು ಕೇಳಿಕೊಳ್ಳುತ್ತೇನೆ ಎಂದರು.

ನನಗೆ ಬರುತ್ತಿರುವ ಕರೆಗಳನ್ನು ಸ್ವೀಕರಿಸಲು ನನಗೆ ಸಾಧ್ಯವಾಗುತ್ತಿಲ್ಲ. ಅವರನ್ನು ಎಲ್ಲಿಗೆ ಕಳುಹಿಸಬೇಕು, ಯಾರನ್ನು ಸಂಪರ್ಕಿಸಬೇಕು ಎಂಬುದು ತೋಚುತ್ತಿಲ್ಲ. ಜನ ಆಕ್ಸಿಜನ್ ಮಟ್ಟದ ಕುಸಿತದಿಂದ ಆತಂಕಕ್ಕೆ ಸಿಲುಕಿದ್ದಾರೆ. ನಮಗೆ ಮುಖ್ಯಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಕಾರ್ಯದರ್ಶಿಗಳ ಬದ್ಧತೆ ಬಗ್ಗೆ ಪ್ರಶ್ನೆ ಇಲ್ಲ. ಆದರೆ ಜನರಿಗೆ ವಾಸ್ತವಾಂಶವನ್ನು ನೀವಾದರೂ ತಿಳಿಸಿ. ತಜ್ಞರು ಎಂದು ಇಟ್ಟುಕೊಂಡಿರುವವರು ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಪರಿಸ್ಥಿತಿ ನಿಭಾಯಿಸಲು ಆಗದಿದ್ದರೆ ಅಧಿಕಾರ ಬಿಟ್ಟು ಹೋಗಿ ಎಂದು ಒತ್ತಾಯಿಸಿದರು.

ಈ ಸಾವುಗಳ ಹೊಣೆಯನ್ನು ಯಾರು ಹೊತ್ತುಕೊಳ್ಳುತ್ತೀರಿ ? ಇದು ಸೋಂಕಿನಿಂದಾದ ಸಾವುಗಳಲ್ಲ, ಅವ್ಯವಸ್ಥೆಯ ಸರ್ಕಾರದಿಂದಾದ ಕೊಲೆ. ಸುಧಾಕರ್ ಅವರೇ, ಸಿಡಿಗೆ ತಡೆಯಾಜ್ಞೆ ತರುವಲ್ಲಿ ತಾವು ತೋರಿದ ತುರಾತುರಿಯನ್ನು ಆಕ್ಸಿಜನ್ ವಿಚಾರದಲ್ಲಿ ತೋರದಿದ್ದಿದ್ದು ಏಕೆ? ಈ ಸಾವುಗಳ ಹೊಣೆ ನಿಮ್ಮದಲ್ಲದೆ ಇನ್ಯಾರದ್ದು? ಎಂದು ರಾಜ್ಯ ಕಾಂಗ್ರೆಸ್, ಆರೋಗ್ಯ ಸಚಿವ ಸುಧಾಕರ್ ಅವರ ಮೇಲೆ ಹರಿಹಾಯ್ದಿದೆ.

RELATED TOPICS:
English summary :DKShivakumar

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...