Sun,May19,2024
ಕನ್ನಡ / English

ಬಿಬಿಎಂಪಿ ಕರ್ಮಕಾಂಡ ಬಯಲಿಗೆಳೆದ ಸಂಸದ ತೇಜಸ್ವಿ ಸೂರ್ಯ : ಕೋವಿಡ್ ರೋಗಿಗಳ ಹಾಸಿಗೆ ಹಂಚಿಕೆಯಲ್ಲಿ ಭಾರಿ ಅವ್ಯವಹಾರ | ಜನತಾ ನ್ಯೂಸ್

04 May 2021
1417

ಬೆಂಗಳೂರು : ಕೋವಿಡ್-19 ಸಮಯದಲ್ಲಿ ಸಾವಿನ ಮನೆಯಾಗುತ್ತಿರುವ ಬೆಂಗಳೂರಿನಲ್ಲಿ ಬೆಡ್ ಬುಕಿಂಗ್ ದಂಧೆ ನಡೆಸುತ್ತಿರುವ ಬಿಬಿಎಂಪಿ ಅಧಿಕಾರಿಗಳ ಕರ್ಮಕಾಂಡವನ್ನು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಬಯಲಿಗೆ ಎಳೆದಿದ್ದಾರೆ.

ಬೆಂಗಳೂರು ನಗರದಲ್ಲಿ ಸಾಕಷ್ಟು ಹಾಸಿಗೆಗಳಿವೆ, ಆದರೆ ಯುದ್ಧ ಕೊಠಡಿ ಸಿಬ್ಬಂದಿಗಳು ಸುಳ್ಳು ಹಾಸಿಗೆ ಬುಕಿಂಗ್ ದಂಧೆಯನ್ನು ನಡೆಸುತ್ತಿದ್ದಾರೆ ಮತ್ತು ನಂತರ ಅವರಿಗೆ ಇಷ್ಟವಾದವರಿಗೆ ಹಂಚಿಕೆ ಮಾಡುತ್ತಿರುವುದರಿಂದ ಅವುಗಳಲ್ಲಿ ಯಾವುದೂ ಜನರಿಗೆ ಲಭ್ಯವಾಗುತ್ತಿಲ್ಲ, ಎಂದು ಸಂಸದ ತೇಜಸ್ವಿ ಸೂರ್ಯ ಇಂದು ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಕೋಪಗೊಂಡ ಸೂರ್ಯ ಈ ದಂಧೆಯಲ್ಲಿ ಭಾಗಿಯಾಗಿರುವವರು ಕೊಲೆಗಾರರು ಎಂದು ಕಿಡಿಕಾರಿದ್ದು, ಖಂಡಿತವಾಗಿಯೂ ಇಂತವರು ಹುಳಬಿದ್ದು ಸಾಯುತ್ತಾರೆ, ಎಂದು ಹೇಳಿದ್ದಾರೆ. ಏಕೆಂದರೆ ಅವರು ಸಾಕಷ್ಟು ಲಭ್ಯವಿದ್ದರೂ ಹಾಸಿಗೆಗಳು ಸಿಗದೇ ಮರಣ ಹೊಂದಿದ ನೂರಾರು ಜನರ ಜೀವನದೊಂದಿಗೆ ಅವರು ಆಡಿದ್ದಾರೆ, ಎಂದಿದ್ದಾರೆ.

ವಿವಿಧ ಆಸ್ಪತ್ರೆಗಳಲ್ಲಿ ಬೀಡುಬಿಟ್ಟಿರುವ ಆರೋಗ ಮಿತ್ರಗಳು, ವಾರ್ ರೂಂ ನಿರ್ವಹಿಸುತ್ತಿರುವ ಏಜೆನ್ಸಿಯ ಸಿಬ್ಬಂದಿಗಳು, ಕೆಲವು ಬಿಬಿಎಂಪಿ ಅಧಿಕಾರಿಗಳು, ಜನರ ಜೀವದ ಜೊತೆ ಆಟವಾಡಿದ ಮತ್ತು ಬೆಂಗಳೂರಿನಲ್ಲಿ ಈ ಹಾಸಿಗೆಗಳ ನಕಲಿ ಕೊರತೆಗೆ ಕಾರಣವಾದ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಹಾಸಿಗೆಯ ವಿತರಣೆ, ಕಾರ್ಯವಿಧಾನ, ಪ್ರೋಟೋಕಾಲ್, ಬುಕಿಂಗ್ ಸಮಯಕ್ಕೆ ಸಂಬಂಧಿಸಿದ 10,000 ಕ್ಕೂ ಹೆಚ್ಚು ರೋಗಿಗಳನ್ನು ಒಳಗೊಂಡ ಡೇಟಾವನ್ನು ತನಿಖೆ ಮಾಡಿರುವುದಾಗಿ ಸೂರ್ಯ ಹೇಳಿದರು, ಮನೆಯಲ್ಲಿ ಪ್ರತ್ಯೇಕತೆಯಲ್ಲಿದ್ದ ರೋಗಿಗಳ ಹೆಸರುಗಳನ್ನು ಬಳಸಿ ಹಾಸಿಗೆಗಳನ್ನು ಬುಕ್ ಮಾಡಲಾಗುತ್ತಿದೆ ಮತ್ತು ಹಾಸಿಗೆ ಬೇಡಿಕೆಯಿಟ್ಟವರಿಗೆ 50 ಸಾವಿರ ರೂಪಾಯಿಗಳ ವರೆಗೆ ಹಣ ಪಡೆದು ಮರುಹಂಚಿಕೆ ಮಾಡಲಾಗಿದೆ, ಎಂದು ಹೇಳಿದ್ದಾರೆ. ಶಾಸಕರಾದ ಸತೀಶ್ ರೆಡ್ಡಿ, ಉದಯ್ ಗರುಡಾಚಾರ್ ಮತ್ತು ರವಿ ಸುಬ್ರಮಣ್ಯ ಅವರು ಸಂಸದರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಇಂತಹ ಭ್ರಷ್ಟ ಪದ್ಧತಿಗಳಿಂದ ಪ್ರಾಣ ಕಳೆದುಕೊಂಡ ಎಲ್ಲರಿಗೂ ಕ್ಷಮೆಯಾಚಿಸಿದ ಸಂಸದರು, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ಗಮನಕ್ಕೆ ಈ ವಿಷಯ ತಂದಿದ್ದು, ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ, ಎಂದು ತಿಳಿಸಿದ್ದಾರೆ.

ಇದಲ್ಲದೇ, ಈ ಅಂಕಿಅಂಶಗಳನ್ನು ಸಂಸದನಾದ ನನಗೆ ನೀಡಲು ಅಧಿಕಾರಿಗಳು ನೀಡಲು ನಿರಾಕರಿಸಿದ್ದು, ಭಾರಿ ಹರಸಾಹಸ ಪಡುವುದರ ಮೂಲಕ ಈ ಮಾಹಿತಿ ಗಳಿಸಿರುವುದಾಗಿ, ಸಂಸದರು ಹೇಳಿದ್ದಾರೆ.

RELATED TOPICS:
English summary :MP Tejasvi Surya reveals BBMP scam in alloting bed for COVID patients

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...