Wed,May08,2024
ಕನ್ನಡ / English

BBMP ಭ್ರಷ್ಟಾಚಾರ: ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ, ಅವರನ್ನು ಕಿತ್ತು ಹಾಕಿ: ಸಿದ್ದರಾಮಯ್ಯ | ಜನತಾ ನ್ಯೂಸ್

05 May 2021
1781

ಬೆಂಗಳೂರು : ಬಿಬಿಎಂಪಿ ಪೋರ್ಟಲ್ ಮೂಲಕ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಕೊವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿ ಅಧಿಕಾರಿಗಳ ವಿರುದ್ಧವಲ್ಲ. ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ಸಂಸದರ ವಿರುದ್ಧ ಗುಪ್ತ ಕಾರ್ಯಾಚರಣೆ‌ ನಡೆಸಬೇಕು ಎಂದ ಟ್ವೀಟ್ ಮಾಡಿದ್ದಾರೆ.

ಬೆಡ್‌ ದಂಧೆ ಹಗರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಬೇಕಾಗಿರುವುದು ವಿಧಾನಸೌಧದಲ್ಲಿ ಕುಳಿತುಕೊಂಡ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಹಾಗೂ ಸಂಸದರ ವಿರುದ್ಧ ಎಂದು ಸಂಸದ ತೇಜಸ್ವಿ ಸೂರ್ಯಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಕುರಿತಾಗಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ತೇಜಸ್ವಿಸೂರ್ಯ, ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ, ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿಯಲ್ಲಿರುವ ಅಧಿಕಾರಿಗಳ ವಿರುದ್ಧ ಅಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿಗಳು,‌ ಸಚಿವರು ಮತ್ತು ಬಿಜೆಪಿ‌ ಶಾಸಕರು‌ ಮತ್ತು ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ? ಎಂದು ಪ್ರಶ್ನಿಸಿದ್ದಾರೆ.

ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ‌ ಹೈಕೋರ್ಟ್ ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ‌ ಮೇಲೆ ಒತ್ತಡ ಹೇರಿ ಎಂದು ಆಗ್ರಹಿಸಿದ್ದಾರೆ.

ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು.

ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿರುವವರು ಒಂದೇ ಕೋಮಿನವರೆಂಬಂತೆ ಹೆಸರು ಓದಿದ ಸಂಸದ ತೇಜಸ್ವಿ ಅವರೇ.. ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿ, ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿ ಬಿಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜೊತೆಗೆ ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತದೆ ಎಂದರು. ಮತದಾರರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ. ಸ್ಮಶಾನದಲ್ಲಿ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ಪ್ರಧಾನಿ ಮೋದಿಯವರ ಉತ್ತಮ ದಿನಗಳು? ಎಂದು ಕೇಳಿದ್ದಾರೆ.

ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ, ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಯಾಕೆ ಬಳಸಿಕೊಳ್ಳುತ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ಳುತ್ತೀರಿ.

ರಾಜ್ಯದ ಕೊರೊನಾ ಸೋಂಕಿತರಿಗೆ ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊಡಿ ಎಂದು ಪ್ರಧಾನಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಭಿಕ್ಷುಕರ ರೀತಿ ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಏಕೆ? ಎಂದು ಟ್ವೀಟ್ನಲ್ಲಿ ಸಿದ್ದರಾಮಯ್ಯ ಕೇಳಿದ್ದಾರೆ.

RELATED TOPICS:
English summary :Siddaramaiah

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...