Sun,May12,2024
ಕನ್ನಡ / English

ರಾಜ್ಯಕ್ಕೆ ಇಂಡಿಯನ್ ಆಯಿಲ್ ಹಾಗೂ ಬಹರೈನ್ ನಿಂದ 80ಮೆ.ಟ. ಎಲ್‌ಎಂ ಆಕ್ಸಿಜನ್ ಹಂಚಿಕೆ | ಜನತಾ ನ್ಯೂಸ್

05 May 2021
2417

ಬೆಂಗಳೂರು : ಬಹರೈನ್ ನಿಂದ ನವ ಮಂಗಳೂರು ಬಂದರಿಗೆ ಆಕ್ಸಿಜನ್ ಕಂಟೇನರ್ ಹೊತ್ತು ಆಗಮಿಸಿದ ಭಾರತೀಯ ನೌಕಾಪಡೆಯ ಐಏನ್ಎಸ್ ತಲ್ವಾರ್ ಯುದ್ಧನೌಕೆಯನ್ನು ಬರಮಾಡಿಕೊಳ್ಳಲಾಗಿದೆ. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಹಂಚಿಕೆಯಾದ ಒಟ್ಟು 80 ಮೆ.ಟನ್ ಗಳ ಪೈಕಿ, 20 ಮೆಟ್ರಿಕ್ ಟನ್ ಸಾಮರ್ಥ್ಯದ ದ್ರವ ವೈದ್ಯಕೀಯ ಆಮ್ಲಜನಕದ 2 ಕಂಟೇನರ್(40ಮೆಟ್ರಿಕ್ ಟನ್)ಗಳನ್ನು ಹೊತ್ತುತಂದ ಐಏನ್ಎಸ್ ತಲ್ವಾರ್ ನ್ನು ಜಿಲ್ಲಾ ವಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದರಾದ ನಳಿನಕುಮಾರ್ ಕಟಿಲ್ ಹಾಗೂ ಶಾಸಕರು, ಜಿಲ್ಲಾಧಿಕಾರಿಗಳೊಂದಿಗೆ ಬರಮಾಡಿಕೊಳ್ಳಲಾಯಿತು.

ಇದಲ್ಲದೇ, ಇಂಡಿಯನ್ ಆಯಿಲ್ ಕಾರ್ಪೋರೇಶನ್ ಲಿಮಿಟೆಡ್(ಐಒಸಿಎಲ್) ಮೂಲಕ 20 ಮೆಟ್ರಿಕ್ ಟನ್ ಸಾಮರ್ಥ್ಯದ ದ್ರವ ವೈದ್ಯಕೀಯ ಆಮ್ಲಜನಕದ 2 ಕಂಟೇನರ್(40ಮೆಟ್ರಿಕ್ ಟನ್)ಗಳನ್ನು ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ತಲಾ ಹಂಚಿಕೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ತುರ್ತು ಆಕ್ಸಿಜನ್ ಸರಬರಾಜು ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಶೇಷ ಪ್ರಯತ್ನದಿಂದ ಇಂದು ಕೊಲ್ಲಿ ರಾಷ್ಟ್ರವಾದ ಬಹರೈನ್ ಭಾರತೀಯ ನೌಕಾಪಡೆಯ ಐಏನ್ಎಸ್ ತಲ್ವಾರ್ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ 40 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜು ಮಾಡಿದೆ, ಎಂದು ಸಚಿವ ಶ್ರೀನಿವಾಸ್ ಪೂಜಾರಿ ಟ್ವೀಟ್ ಮಾಡಿದ್ದಾರೆ.

ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸುವ ನಿರಂತರ ಪ್ರಯತ್ನಗಳ ಭಾಗವಾಗಿ, ಪ್ರಧಾನಿ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ ತಲಾ 20 ಮೆ.ಟನ್ ಸಾಮರ್ಥ್ಯದ 4 ಟ್ಯಾಂಕರ್‌ಗಳನ್ನು(80ಮೆಟ್ರಿಕ್ ಟನ್) ಹಂಚಿಕೆ ಮಾಡಿದೆ. ಆಸ್ಪತ್ರೆಗಳಿಗೆ ಆಮ್ಲಜನಕದ ಕೊನೆಯ ಮೈಲಿ ವಿತರಣೆಯಲ್ಲಿ ವ್ಯವಸ್ಥಾಪಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅಡಚಣೆಗಳನ್ನು ತೆರವುಗೊಳಿಸಲು ಇದು ನಮಗೆ ಸಹಾಯ ಮಾಡುತ್ತದೆ, ಎಂದು ರಾಜ್ಯದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ದೇಶದ ಸ್ಟೀಲ್ ಪ್ಲಾಂಟ್‌ಗಳು 2021ರ ಮೇ 4ರಂದು ಒಟ್ಟು 4076 ಮೆ.ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು(ಎಲ್‌ಎಂಒ) ಪೂರೈಸಿದೆ. ಹಾಗೂ ಏಪ್ರಿಲ್ ಮಧ್ಯದಲ್ಲಿ, ದಿನಕ್ಕೆ ಸರಾಸರಿ 1500-1700 ಮೆಟ್ರಿಕ್ ಟನ್ ಎಲ್ಎಂಒ ಗಳು ರವಾನೆಯಾಗಿವೆ ಎಂದು ಪಿಐಬಿ ಪ್ರಕಟಿಸಿದೆ.

RELATED TOPICS:
English summary :Central Govt allots 80MT L.M. Oxygen from Indian Oil & Bahrain

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...