Wed,May15,2024
ಕನ್ನಡ / English

ಆಕ್ಸಿಜನ್ ಉಸ್ತುವಾರಿಯಾಗಿ ಜಗದೀಶ್ ಶೆಟ್ಟರ್ ನೇಮಕ | ಜನತಾ ನ್ಯೂಸ್

06 May 2021
2321

ಶಿವಮೊಗ್ಗ : ಹೈಕೋರ್ಟ್‌ ಕೂಡ ಈ ಘಟನೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಆಕ್ಸಿಜನ್‌ ಕೊರತೆಯಾಗದಂತೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಆಕ್ಸಿಜನ್‌ ಕೊರತೆಯ ಮೇಲ್ವಿಚಾರಣೆ ನಡೆಸುವ ಸಂಬಂಧ ಆಕ್ಸಿಜನ್ ಉಸ್ತುವಾರಿಯಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಸರ್ಕಾರ ನೇಮಿಸಿದೆ.

ನಮ್ಮ ರಾಜ್ಯದಲ್ಲಿ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ. ಅದರ ಬಳಕೆಗೆ ನಮಗೆ ಅವಕಾಶ ಮಾಡಿಕೊಡಿ ಎಂದು ಕೇಂದ್ರದ ಬಳಿ ಮನವಿ ಮಾಡಿಕೊಂಡಿದ್ದೇವೆ. ಈ ಕುರಿತು ಕೇಂದ್ರ ಸಚಿವ ಪಿಯೂಶ್​ ಗೊಯಲ್​ ಜೊತೆ ದೂರವಾಣಿ ಮೂಲಕ ಮಾತನಾಡಲಾಗಿದೆ ಎಂದರು

ರಾಜ್ಯದಲ್ಲಿನ ಆಕ್ಸಿಜನ್​ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಸಿದ್ದಾರೆ. , ಇನ್ನು ಆಕ್ಸಿಜನ್ ಟ್ರಾನ್ಸ್‌ಪೋರ್ಟ್‌ ಸಮಸ್ಯೆ ವಿಚಾರ ಕುರಿತು ತಿಳಿಸಿದ ಅವರು, ಆಮ್ಲಜನಕವನ್ನು ಟ್ಯಾಂಕರ್‌ ಮೂಲಕ ಕಳಿಸುವ ಕೆಲಸ ಮಾಡುತ್ತಿದ್ದೇವೆ. ಪ್ರತಿ ದಿನ ಕೆಲಸ ಮಾಡಿ ಸಮಸ್ಯೆ ಸರಿಪಡಿಸಬೇಕು, ನಾಲ್ಕು ದಿನ ಎಂದು ಹೇಳಿದರೆ ಸಮಸ್ಯೆ ಬಗೆಹರಿಯಲ್ಲ. ಪ್ರಾಮಾಣಿಕ ಕೆಲಸ ಮಾಡುತ್ತೇವೆ
ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನೇಮಕವಾಗಿರುವ ತಕ್ಷಣ ಆಕ್ಸಿಜನ್ ಉತ್ಪಾದನೆ ಸಂಬಂಧ ಪರಿಶೀಲನೆಗೆ ಶಿವಮೊಗ್ಗಕ್ಕೆ ಶೆಟ್ಟರ್‌ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ವಿಐಎಸ್‌ಎಲ್ ಘಟಕದ ಪರಿಶೀಲನೆಗೆ ಭೇಟಿ ಕೊಡಲಿರುವ ಸಚಿವರು, ವಿಐಎಸ್‌ಎಲ್ ನ ಆಕ್ಸಿಜನ್ ಘಟಕದಲ್ಲಿ ಅದರ ಉತ್ಪಾದನೆ ಮಾಡಲು ಕ್ರಮ ತೆಗೆದುಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಈ ಘಟಕದಲ್ಲಿ ಪ್ರತಿನಿತ್ಯ 320 ಕೆ ಎಲ್ ಡಿ ಉತ್ಪಾದನಾ ಸಾಮರ್ಥ್ಯವಿದ್ದು, ಇಲ್ಲಿ ಮುಂದಿನ ಕ್ರಮದ ಕುರಿತು ಚಿಂತನೆ ನಡೆಸಲಾಗುವುದು.

ಕಳೆದ ಎರಡು ವರ್ಷದ ಹಿಂದೆ ಘಟಕದ ಅವಧಿ ಮುಗಿದ ಕಾರಣ ಅದು ಸ್ಥಗಿತಗೊಂಡಿದೆ. ಈ ಸಂಬಂಧ ಈ ಹಿಂದೆ ಗುತ್ತಿಗೆ ಪಡೆದಿದ್ದ ಎಂಎಸ್ಪಿಎಲ್ ಕಂಪೆನಿ ಜತೆ ಜಿಲ್ಲಾಡಳಿತದಿಂದ ಮಾತುಕತೆ ನಡೆಯಲಿದ್ದು, ಮತ್ತೆ ಆಕ್ಸಿಜನ್ ಉತ್ಪಾದನೆ ಮಾಡುವ ಸಂಬಂಧ ಒಪ್ಪಂದ ಸಾಧ್ಯತೆ ಇದೆ.

ರಾಜ್ಯದಲ್ಲಿ ಪ್ರಸ್ತುತ 170 ಆಮ್ಲಜನಕ ಸಾಗಾಣಿಕಾ ಟ್ಯಾಂಕರ್‌ ಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ 68 ಟ್ಯಾಂಕರ್‌ಗಳು ಬೇರೆ ರಾಜ್ಯಕ್ಕೆ ಪೂರೈಕೆ ಮಾಡುವ ಕಾರ್ಯದಲ್ಲಿವೆ. ರಾಜ್ಯಕ್ಕೆ ಇನ್ನಷ್ಟು ಟ್ಯಾಂಕರ್‌ಗಳ ಅವಶ್ಯಕತೆ ಇದ್ದು, ಇನ್ನೂ ಹೆಚ್ಚಿನ ಟ್ಯಾಂಕರ್‌ ಗಳನ್ನು ಮಾರ್ಪಾಡಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

RELATED TOPICS:
English summary :JagadishShettar

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...