45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಲಸಿಕೆ ನೀಡಲು ಆದ್ಯತೆ! | ಜನತಾ ನ್ಯೂಸ್
ಬೆಂಗಳೂರು : ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಲಭವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ ಶೇ.70 ರಷ್ಟು ಲಸಿಕೆಯನ್ನು 2ನೇ ಡೋಸ್ ಹಾಕಿಸಿಕೊಳ್ಳಲು ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಶೀಲ್ಡ್ ಲಸಿಕೆಯಲ್ಲಿ ಶೇ.30 ರಷ್ಟನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುತ್ತದೆ ಎಂದಿದ್ದಾರೆ.
ರಾಜ್ಯದಲ್ಲಿ ಲಭ್ಯವಿರುವ ಕೋವಿಶೀಲ್ಡ್ ಲಸಿಕೆಯಲ್ಲಿ 70%ರಷ್ಟನ್ನು 2ನೇ ಡೋಸ್ ಬಾಕಿಯಿರುವ 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು. ಉಳಿದ 30% ಲಸಿಕೆಯನ್ನು 45 ವರ್ಷ ಮೇಲ್ಪಟ್ಟವರಿಗೆ 1ನೇ ಡೋಸ್ ನೀಡಲು ಬಳಸಲಾಗುವುದು.
— Dr Sudhakar K (@mla_sudhakar) May 8, 2021
ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು. pic.twitter.com/JhBFtuqXZ1