Sun,May19,2024
ಕನ್ನಡ / English

ಮುಂಬೈ ಮಾದರಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಿದ್ದರೆ ಹೆಚ್ಚಿನ ಸಾವು, ನೋವು ಸಂಭವಿಸುವ ಸಾಧ್ಯತೆ | ಜನತಾ ನ್ಯೂಸ್

08 May 2021
2014

ಹಾಸನ : ರಾಜ್ಯ ಸರ್ಕಾರ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ದಿನ 50 ರಿಂದ 55 ಸಾವಿರ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿವೆ. ಅದಕ್ಕಿಂತ ಕೆಟ್ಟ ಸುದ್ದಿ ಅಂದ್ರೆ ಪ್ರತಿ ದಿನ 250 ರಿಂದ 300 ಜನ ಸಾಯುತ್ತಿದ್ದಾರೆ.

ಕಾಟಾಚಾರದ ಲಾಕ್‍ಡೌನ್ ಘೋಷಿಸಿದರೆ ಯಾವುದೇ ಕಾರಣಕ್ಕೂ ಕೋವಿಡ್‌ ನಿಯಂತ್ರಣ ಸಾಧ್ಯವಿಲ್ಲ. ಮುಂಬೈ ಮಾದರಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಿದ್ದರೆ ಇನ್ನೂ ಹೆಚ್ಚಿನ ಸಾವು, ನೋವು ಸಂಭವಿಸುವ ಸಾಧ್ಯತೆ ಇದೆ. ಜಿಲ್ಲೆಗೆ ವೈದ್ಯಕೀಯ ಪರಿಕರ ಕಳುಹಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದೇನೆ.

ಕೊರೊನಾ ಲಸಿಕೆ ಅಭಾವ ಉಂಟಾಗಿದ್ದು, ಕೂಡಲೇ ಲಸಿಕೆ ಪೂರೈಸುವಂತೆ ಪ್ರಧಾನಿಗೆ ಮನವಿ ಮಾಡುತ್ತೇನೆ. ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿರುವುದರಿಂದ ರಾಜಕೀಯ ಬದಿಗಿಟ್ಟು ಕೆಲಸ ಮಾಡಬೇಕು ಎಂದರು.

ದಿನ ನಿತ್ಯ 6 ರಿಂದ 12 ಗಂಟೆ ಓಡಾಡಡಲು ಬಿಟ್ಟು ಸಂಜೆಯಿಂದ ಲಾಕ್‍ಡೌನ್ ಮಾಡ್ತೀವಿ ಅಂತಿದ್ದಾರೆ. ಈಗ ಇರುವ ಕೊರೊನಾ ಕರ್ಫ್ಯೂವನ್ನೇ ಲಾಕ್‍ಡೌನ್ ಅಂತಿದ್ದಾರೆ. ಇಲ್ಲಿ ಹೆಸರು ಬದಲಾವಣೆ ಬಿಟ್ರೆ ಕಾರ್ಯ ರೀತಿ ಸೇಮ್ ಇದೆ. ಈ ಲಾಕ್‍ಡೌನ್ ಫಲ ತರುವುದಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯದ ಜನರಿಗೆ ತೊಂದರೆ ಆದರೆ ಸರ್ಕಾರವೇ ಹೊಣೆ.

₹3,500 ಬೆಲೆಯ ರೆಮ್‍ಡೆಸಿವಿರ್ ಚುಚ್ಚುಮದ್ದನ್ನು ₹18 ರಿಂದ 25 ಸಾವಿರಕ್ಕೆ ಮಾರಾಟ ಮಾಡಲಾಗುತ್ತಿದೆ.ಖಾಸಗಿ ಆಸ್ಪತ್ರೆ ವೈದ್ಯರೂ ಇದರಲ್ಲಿ ಭಾಗಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಹಣಕ್ಕಾಗಿ ಜನರ ಜೀವದೊಂದಿಗೆ ಚೆಲ್ಲಾಟವಾಡುವುದು ಸರಿಯಲ್ಲ ಎಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಸ್ವರ್ಗ ಸೃಷ್ಟಿಯಾಗುತ್ತದೆ ಎಂದರು. ಅದೇ ಕಾರಣಕ್ಕೆ ಉಪ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ಮತ ನೀಡಿದರು. ಆದರೆ, ಈಗ 25 ಬಿಜೆಪಿ ಸಂಸದರು ಸುಮ್ಮನಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

RELATED TOPICS:
English summary :Prajwal Revanna

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...