Wed,May15,2024
ಕನ್ನಡ / English

ಬಿಎಸ್​ವೈಗೆ ಸಿದ್ದರಾಮಯ್ಯರಿಂದ ಪತ್ರ: ಅವರಿಗೆ 10 ಸಾವಿರ ರೂ. ನೀಡಿ.. ಇವರಿಗೆ 6 ಸಾವಿರ ಕೊಡಿ. 10 ಕೆಜಿ ಅಕ್ಕಿ ನೀಡಿ! | ಜನತಾ ನ್ಯೂಸ್

09 May 2021
1165

ಬೆಂಗಳೂರು : ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ನಾಳೆಯಿಂದ ರಾಜ್ಯದಲ್ಲಿ ಸಂಪೂರ್ಣ​ ಲಾಕ್​ಡೌನ್ ಜಾರಿಯಾಗಲಿದೆ. ಈ ಹಿನ್ನೆಲೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಪತ್ರ ಬರೆದಿದ್ದು, ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯಲ್ಲಿ ವ್ಯಕ್ತವಾದ ಸಲಹೆಗಳನ್ನು ಸರ್ಕಾರಕ್ಕೆ ನೀಡಿದ್ದಾರೆ.

ರಾಜ್ಯದಲ್ಲಿ ಸದ್ಯ ಬೇಡಿಕೆ ಇರುವುದಕ್ಕಿಂತ ಹೆಚ್ಚಿನ ಆಕ್ಸಿಜನ್ ಉತ್ಪಾದನೆಯಾಗುತ್ತಿದೆ. ನಮ್ಮಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಇಲ್ಲಿಯೇ ಉಳಿಸಿಕೊಳ್ಳಬೇಕು. ಜಿಲ್ಲಾವಾರು ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಬೇಕು. ಆಕ್ಸಿಜನ್ ಸಿಲಿಂಡರುಗಳ ಕಾಳಸಂತೆಯಲ್ಲಿ ಮಾರಾಟ ಮಾಡುವ ದಂಧೆ ನಿಲ್ಲಿಸಿ ಮನೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೂ ಸುಲಭವಾಗಿ ಆಕ್ಸಿಜನ್ ಸಿಗುವಂತೆ ಮಾಡಬೇಕು.

ಆಕ್ಸಿಜನ್ ಉತ್ಪಾದನೆ ಆಗುತ್ತಿರುವ ಪ್ರದೇಶಗಳಲ್ಲೇ ಆಕ್ಸಿಜನ್ ಲಭ್ಯತೆಯ ಆಧಾರದ ಮೇಲೆ ತಾತ್ಕಾಲಿಕ ಕೋವಿಡ್ ಆಸ್ಪತ್ರೆಯನ್ನು ಸ್ಥಾಪಿಸಬೇಕು. ಜಿಲ್ಲಾವಾರು ಚಿಕಿತ್ಸೆ ಎಂಬ ಅವೈಜ್ಞಾನಿಕ ವಿಧಾನವನ್ನು ಕೈಬಿಟ್ಟು ಸುತ್ತಮುತ್ತಲ ಏಳೆಂಟು ಜಿಲ್ಲೆಗಳ ರೋಗಿಗಳನ್ನು ಒಂದು ಕಡೆ ತಂದು ಆಕ್ಸಿಜನ್ ನೀಡಿ ರಕ್ಷಿಸಬೇಕು. ಇದರಿಂದ ಒತ್ತಡ ಕಡಿಮೆಯಾಗುತ್ತದೆ.

ಈ ಜೀವರಕ್ಷಕ ಔಷಧಿಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವವರ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಪ್ರತಿ ರೋಗಿಗೆ ಕನಿಷ್ಟ ಮಟ್ಟದ ಮೊತ್ತವನ್ನು ನಿಗಧಿ ಪಡಿಸಲಾಗಿದೆ. ಅದರಿಂದ ಸಮರ್ಪಕವಾಗಿ ರೆಮ್‍ಡಿಸಿವಿರ್ ನಂಥ ಔಷಧಗಳನ್ನೂ ನೀಡಲಾಗುತ್ತಿಲ್ಲ ಎಂಬ ಮಾಹಿತಿ ಇದೆ. ಈ ಅವ್ಯವಸ್ಥೆಯನ್ನು ಸರಿ ಮಾಡಬೇಕು.

ರಾಜ್ಯದ ಅಸಹಾಯಕ ರೋಗಿಗಳಿಗೆ ಸಾಮಾನ್ಯ, ಐ.ಸಿ.ಯು, ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಇರುವ ಸಾಕಷ್ಟು ಬೆಡ್‍ಗಳನ್ನು ಸ್ಥಾಪಿಸಲು ಯಾವ ಸಮಸ್ಯೆ ಇದೆ? ಬೆಡ್‍ಗಳು ಎಷ್ಟು ಬೇಕಾಗಬಹುದು ಎಂಬುದನ್ನು ಮೊದಲೇ ಅಂದಾಜಿಸಿ ಕಾರ್ಯೋನ್ಮಖರಾಗಬೇಕು.

ವೈದ್ಯರುಗಳಿಗೆ ಸಂಬಂಧಿಸಿದಂತೆ, ಖಾಸಗಿ, ನಿವೃತ್ತರಾದವರನ್ನು ಅಗತ್ಯ ಬಿದ್ದರೆ ನೇಮಿಸಿಕೊಳ್ಳಬೇಕು. ದಾದಿಯರ ವಿಷಯದಲ್ಲೂ ಹಾಗೆ ಮಾಡಬೇಕು.

ಈಗಾಗಲೇ ಕೋವಿಡ್ ನಿರೋಧಕ ಲಸಿಕೆ ಹಾಕಿಸಿಕೊಂಡಿರುವ ಅಂತಿಮ ವರ್ಷಗಳಲ್ಲಿರುವ ವಿದ್ಯಾರ್ಥಿಗಳನ್ನು ಚಿಕಿತ್ಸೆಗೆ ನಿಯೋಜಿಸಬೇಕು.

ಪ್ರತಿಯೊಬ್ಬರಿಗೂ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿ ನೀಡಬೇಕು. ಬೇಳೆ, ಅಡುಗೆ ಎಣ್ಣೆ, ಮುಂತಾದ ದಿನಸಿ ಪದಾರ್ಥಗಳುಳ್ಳ ಕಿಟ್​ಗಳನ್ನು ನೀಡಬೇಕು

ಪ್ರತಿ ಬಿ.ಪಿ.ಎಲ್ ಕುಟುಂಬಕ್ಕೆ ಮೊದಲಿಗೆ 10,000 ರೂಪಾಯಿ ನೀಡಬೇಕು, ತಿಂಗಳಿಗೆ 6,000 ರೂಪಾಯಿಗಳನ್ನು ನೀಡಬೇಕು.

ರಾಜ್ಯದ ರೈತರಿಗೆ, ಕುಶಲಕರ್ಮಿ ಸಮುದಾಯಗಳಿಗೆ, ಕಾರ್ಮಿಕರಿಗೆ, ಡ್ರೈವರ್​ಗಳಾದಿಯಾಗಿ ಎಲ್ಲ ದುಡಿಯುವ ವರ್ಗಗಳಿಗೆ 10,000 ರೂಪಾಯಿಗಳನ್ನು ನೀಡಬೇಕು.

ಸಣ್ಣ, ಅತಿ ಸಣ್ಣ, ಸೂಕ್ಷ್ಮ, ಗೃಹ ಕೈಗಾರಿಕೆಗಳಿಗೆ, ವಾಹನಗಳ ಮಾಲೀಕರ ಸಭೆಗಳನ್ನು ನಡೆಸಿ ಸೂಕ್ತ ಪ್ಯಾಕೇಜ್ ನೀಡಬೇಕು

ಕನಿಷ್ಟ 200 ಮಾನವ ದಿನಗಳ ಯೋಜನೆಯನ್ನು ಜಾರಿಗೊಳಿಸಬೇಕು. ಅಗತ್ಯ ಇರುವ ಕಡೆ ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕು.

ಪ್ರಸ್ತುತ ಇರುವ ಹಣದುಬ್ಬರವನ್ನು ಆಧರಿಸಿ ನರೇಗಾ ಕೂಲಿ ಮೊತ್ತವನ್ನು ಪರಿಷ್ಕರಿಸಬೇಕು ಮತ್ತು ಹೆಚ್ಚಿಸಬೇಕು.

ನರೇಗಾ ಯೋಜನೆಯಡಿ ಕೆಲಸ ಮಾಡಿದವರಿಗೆ 4 ತಿಂಗಳಿಂದ ಹಣ ಬಿಡುಗಡೆ ಮಾಡಿಲ್ಲ. ಈ ಬಾಕಿ ಉಳಿಸಿಕೊಂಡಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು.

RELATED TOPICS:
English summary :Siddaramaiah

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...