Sun,May19,2024
ಕನ್ನಡ / English

ಬಿಜೆಪಿಗರು ಗುಲಾಮಗಿರಿ ಬಿಡಬೇಕು, ರಾಜ್ಯದ ವಿಚಾರದಲ್ಲಿ ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು | ಜನತಾ ನ್ಯೂಸ್

13 May 2021
1449

ಬೆಂಗಳೂರು : ಕೋರ್ಟ್‌ ಆದೇಶದ ನಂತರವೂ ಆಮ್ಲಜನಕ ಪೂರೈಕೆ ವಿಚಾರದಲ್ಲಿ ತಾರತಮ್ಯ ಎಸಗಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ದಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದು ಅರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್‌ ಟನ್‌(MT) ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್‌ ಆದೇಶದ ನಂತರವೂ ಕೇಂದ್ರ ರಾಜ್ಯಕ್ಕೆ ಪೂರೈಸಿದ್ದು 120MT ಮಾತ್ರ. ಅತ್ತ, ನಮಗಿಂತ ಕಡಿಮೆ ಪ್ರಕರಣಗಳಿರುವ ಉತ್ತರ ಪ್ರದೇಶಕ್ಕೆ 1680MT ಪೂರೈಸಿರುವ ಕೇಂದ್ರ ಸರ್ಕಾರ ತಾರತಮ್ಯದಲ್ಲಿ ಪಾರಮ್ಯ ಮೆರೆದಿದೆ. ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ? ಎಂದು ಪ್ರಶ್ನಿಸಿರುವ ಎಚ್‌ಡಿಕೆ, ಕರ್ನಾಟಕದ ವಿಚಾರದಲ್ಲಿ ಹೇಳತೀರದ ತಾರತಮ್ಯ ಮಾಡುತ್ತಿರುವ ಕೇಂದ್ರ ಸರ್ಕಾರ ಒಂದು ವಿಷಯ ಸ್ಪಷ್ಟವಾಗಿ ಅರಿಯಬೇಕು.

ಇದು ಒಕ್ಕೂಟ ವ್ಯವಸ್ಥೆ. ಒಕ್ಕೂಟ ಸರ್ಕಾರ ನಡೆಸುತ್ತಿರುವವರು ಎಲ್ಲ ರಾಜ್ಯಗಳಿಗೂ ಸಮಾನ ಆದ್ಯತೆ ನೀಡಬೇಕು. ಅನಿವಾರ್ಯದಲ್ಲಿರುವವರ ಅಗತ್ಯಗಳನ್ನು ಮೊದಲು ಪೂರೈಸಬೇಕು. ಅದನ್ನು ಬಿಟ್ಟು ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಸಿಕೆ ವಿಚಾರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. 3ಕೋಟಿ ಲಸಿಕೆಗೆ ಕೇಳಿದ್ದೇವೆ. 7 ಲಕ್ಷ ಡೋಸ್‌ ಸಿಕ್ಕಿದೆ. ಎರಡನೇ ಡೋಸ್‌ ಪಡೆಯುವವರಿಗೆ ಮಾತ್ರ ಆದ್ಯತೆ. ಮೊದಲ ಡೋಸ್‌ ಪಡೆಯುವವರು ಕಾಯಬೇಕು, ಎಂದಿದ್ದಾರೆ. ಲಸಿಕೆಯ ವಿಚಾರದಲ್ಲಿಯೂ ಕೇಂದ್ರ ತಾರತಮ್ಯ ಮಾಡುತ್ತಿರುವುದು ಇದರಿಂದ ಸ್ಪಷ್ಟವಾಗಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿಯ ಪ್ರತಿಯೊಂದು ಧೋರಣೆಯನ್ನೂ ಬೆಂಬಲಿಸುವವರು, ಸಮರ್ಥಿಸಿಕೊಳ್ಳುತ್ತಿರುವವರು, ವಿರೋಧ ಪಕ್ಷಗಳ ನ್ಯಾಯಯುತ ಸಲಹೆ, ಬೇಡಿಕೆಗಳನ್ನು ಅಡಿಗಡಿಗೂ ಟೀಕಿಸುವವರು ಕರ್ನಾಟಕಕ್ಕೆ, ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯವನ್ನು ಸಮರ್ಥಿಸಿಕೊಳ್ಳುವರೇ? ಆಮ್ಲಜನಕವಿಲ್ಲದೇ ಪ್ರಾಣ ಕಳೆದುಕೊಳ್ಳುತ್ತಿರುವ ಕನ್ನಡಿಗರ ಸಾವಿನ ಹೊಣೆಯನ್ನು ಹೊರುವರೇ? ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :HD Kumaraswamy

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...