Fri,May10,2024
ಕನ್ನಡ / English

ಗೃಹಸಚಿವ ಬಸವರಾಜ ಬೊಮ್ಮಾಯಿ ಮನೆ ಮುಂದೆಯೇ ನಿರ್ಮಾಣವಾಯ್ತು ಕೊರೊನಾ ಸೆಂಟರ್! | ಜನತಾ ನ್ಯೂಸ್

14 May 2021
1905

ಹಾವೇರಿ : ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿಯಲ್ಲಿರುವ ತಮ್ಮ ಮನೆಯ ಆವರಣವನ್ನು ಈಗ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿರುವ ತಮ್ಮ ಮನೆಯ ಮುಂದಿನ ಜಾಗದಲ್ಲೇ 50 ಹಾಸಿಗೆಗಳ ಕೊರೊನಾ ಸೆಂಟರ್​ ನಿರ್ಮಿಸಿದ್ದಾರೆ. ನಿನ್ನೆ ತಾಲೂಕಾ ಆಸ್ಪತ್ರೆಗೆ ಭೇಟಿ ನೀಡಿದಾಗ ಈ ವಿಷಯವನ್ನ ಬಹಿರಂಗಪಡಿಸಿದ್ದಾರೆ.

ಉಸಿರಾಟದ ಸಮಸ್ಯೆಯಿಂದ ಬಳಲುವ ಕೋವಿಡ್ ಸೋಂಕಿತರ ಪ್ರಾಣ ಕಾಪಾಡುವ 25 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಗೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಹಸ್ತಾಂತರಿಸಿದರು.

ಗುರುವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ಸ್ಥಿತಿಗತಿ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಮಾಡಲಾದ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅವರು ಆಕ್ಸಿಜನ್ ಕನ್ಸೆಂಟ್ರೇಟರ್ ಗಳನ್ನು ಶಿಗ್ಗಾವಿ ತಾಲೂಕು ವೈದ್ಯಾಧಿಕಾರಿಗಳಿಗೆ ಸಾಂಕೇತಿಕವಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಸವಣೂರಿನಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಸವಣೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 20 ಹಾಸಿಗೆಗಳನ್ನು ಸಿದ್ಧಪಡಿಸಿ.‌ ಮುಂದಿನ ನಾಲ್ಕು ದಿನಗಳಲ್ಲಿ 25 ಆಕ್ಸಿಜನ್ ಕನ್ಸೆಂಟ್ರೇಟರ್ ಗಳನ್ನು ಸವಣೂರು ಆಸ್ಪತ್ರೆಗೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದರು.

ಸಚಿವರ ಈ ಜನಸೇವೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

RELATED TOPICS:
English summary :Basavaraj Bommai

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...