Mon,May20,2024
ಕನ್ನಡ / English

ಬ್ಲ್ಯಾಕ್ ಫಂಗಸ್ ಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ವ್ಯವಸ್ಥೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್ | ಜನತಾ ನ್ಯೂಸ್

16 May 2021
1184

ಬೆಂಗಳೂರು : ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ಅವರು, ನಾಳೆ ಬೌರಿಂಗ್ ಆಸ್ಪತ್ರೆಯಲ್ಲಿ ಆರಂಭವಾಗುವ ವಿಶೇಷ ಚಿಕಿತ್ಸೆ ಪ್ರಾಯೋಗಿಕವಾಗಿದ್ದು ಚಿಕಿತ್ಸೆಗೆ 7 ವಾರಗಳು ಬೇಕಾಗುತ್ತದೆ. 2ರಿಂದ ಮೂರು ಲಕ್ಷ ರೂಪಾಯಿ ಖರ್ಚಾಗುವ ಅಂದಾಜು ಇದೆ ಎಂದು ಹೇಳಿದರು.

ಕೊರೋನಾ ಗೆದ್ದರೂ ಅಧಿಕ ಸ್ಟಿರಾಯ್ಡ್ ತೆಗೆದುಕೊಂಡವರಿಗೆ ಬ್ಲಾಕ್ ಫಂಗಸ್ ದಾಳಿಯಾಗುವ ಸಾಧ್ಯತೆಯಿದೆ. ಕಿಡ್ನಿ ಪ್ಲ್ಯಾಂಟೇಶನ್ ಮಾಡಿಸಿಕೊಂಡವರು ಬ್ಲ್ಯಾಕ್ ಫಂಗಸ್ ಬಗ್ಗೆ ಎಚ್ಚರವಿರಬೇಕು.

ರೋಗನಿರೋಧಕ ಶಕ್ತಿ ಕಡಿಮೆಯಿರುವವರಿಗೆ, ಮಧುಮೇಹ ಕಾಯಿಲೆಯಿದ್ದು ಕೊರೋನಾ ಸೋಂಕಿಗೆ ತುತ್ತಾಗಿದ್ದರೆ ಅದರಿಂದ ಗುಣಮುಖರಾಗಿ 10-15 ದಿನಗಳಲ್ಲಿ ಮೂಗಿನ ಮೂಲಕ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತದೆ.

ಕಣ್ಣಿನ ನರಗಳು, ಕಣ್ಣಿನ ಹಿಂದೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡು ಕೊನೆಗೆ ದೃಷ್ಟಿ ಹೋಗುವ ಅಪಾಯ ಕೂಡ ಇದೆ ಎಂದು ಡಾ ಕೆ ಸುಧಾಕರ್ ವಿವರಿಸಿದರು.

ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ಸರಿಯಾಗಿ ಆಗದೇ ಹೋದರೆ ಸಾವು ಕೂಡ ಸಂಭವಿಸಬಹುದು. ಹಾಗಾಗಿ ಇದು ಕಾಣಿಸಿಕೊಂಡ ಕೂಡಲೇ ನೇತ್ರ ತಜ್ಞರ ಜೊತೆ ಸಮಾಲೋಚನೆ ಮಾಡಿ ಬೌರಿಂಗ್ ಆಸ್ಪತ್ರೆಯಲ್ಲಿ ವಿಶೇಷವಾಗಿ ಚಿಕಿತ್ಸೆಯನ್ನು ಉನ್ನತ ಮಟ್ಟದಲ್ಲಿ ಪ್ರಾಯೋಗಿಕವಾಗಿ ಪ್ರಾರಂಭ ಮಾಡುತ್ತೇವೆ ಎಂದರು.

ನೇತ್ರ ತಜ್ಞರು ಸೇರಿದಂತೆ ಮೂರ್ನಾಲ್ಕು ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗುತ್ತಿದೆ. ಇದಕ್ಕೆ ಯಾವ ಬಗೆಯ ಚಿಕಿತ್ಸೆ ನೀಡಬೇಕೆಂದು ಈ ಸಮಿತಿ ಸಲಹೆ ನೀಡಲಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಸತತ ಏಳು ವಾರಗಳ ಕಾಲ ನೀಡಬೇಕಿದ್ದು, 2-3 ಲಕ್ಷ ರೂ. ಖರ್ಚಾಗುತ್ತದೆ. ಇದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

RELATED TOPICS:
English summary :Sudhakar

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...