Mon,May20,2024
ಕನ್ನಡ / English

ರಾಜ್ಯದಲ್ಲೂ ಡಿಆರ್ ಡಿಒ ವತಿಯಿಂದ ಕೋವಿಡ್ ಕೇಂದ್ರ ಪ್ರಾರಂಭಿಸಲು ರಕ್ಷಣಾ ಸಚಿವರಿಗೆ ಡಿಸಿಎಂ ಸವದಿ ಪತ್ರ! | ಜನತಾ ನ್ಯೂಸ್

18 May 2021
1483

ಬೆಂಗಳೂರು : ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ಕೇಂದ್ರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರಿಗೆ ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಬರೆದಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಪತ್ರ ಬರೆದು ಮನವಿ ಮಾಡಿದ್ದಾರೆ.

ದೆಹಲಿ, ವಾರಾಣಸಿ, ಅಹಮದಾಬಾದ್, ಮತ್ತು ಲಖನೌ ಗಳಲ್ಲಿ ಡಿ.ಆರ್.ಡಿ. ಒ. ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸುವುದಕ್ಕೆ ಕೇಂದ್ರದ ರಕ್ಷಣಾ ಸಚಿವರನ್ನು ಸವದಿಯವರು ಅಭಿನಂದಿಸಿದ್ದಾರೆ.

ಕರ್ನಾಟಕದಲ್ಲಿಯೂ ಪ್ರಸ್ತುತ ಕೋವಿಡ್ ಅಪಾಯಕಾರಿ ಪ್ರಮಾಣದಲ್ಲಿ ಹೆಚ್ಚಿರುವುದರಿಂದ ಇಲ್ಲಿನ ಆಸ್ಪತ್ರೆಗಳಲ್ಲಿ ರೋಗಿಗಳ ದಟ್ಟಣೆ ಅಧಿಕವಾಗಿದೆ. ವೈದ್ಯರುಗಳ ಮೇಲೆ ಒತ್ತಡವೂ ತೀವ್ರವಾಗಿದೆ. ಆದ್ದರಿಂದ ಕರ್ನಾಟಕದಲ್ಲಿಯೂ ಆದಷ್ಟು ಶೀಘ್ರವಾಗಿ ಸುಸಜ್ಜಿತ ಕೋವಿಡ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುವುದು ಸೂಕ್ತ.

ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಸ್ವಾಮ್ಯದಲ್ಲಿ ಸಾಕಷ್ಟು ಖಾಲಿ ಜಾಗಗಳೂ ಈಗ ಲಭ್ಯವಿದೆ. ಇದನ್ನು ಬಳಕೆ ಮಾಡಿಕೊಂಡು ರಕ್ಷಣಾ ಇಲಾಖೆಯಿಂದ ತಕ್ಷಣವೇ ಕೋವಿಡ್ ಕೇಂದ್ರಗಳನ್ನು ಪ್ರಾರಂಭಿಸಿದರೆ ಸಾಕಷ್ಟು ರೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಗ್ಗೆ ಆದ್ಯತೆಯ ಮೇರೆಗೆ ಕ್ರಮಕೈಗೊಳ್ಳಬೇಕೆಂದು ಸವದಿಯವರು ರಕ್ಷಣಾ ಸಚಿವರಲ್ಲಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

RELATED TOPICS:
English summary :Laxman Savadi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...