Thu,May16,2024
ಕನ್ನಡ / English

ರಾಜ್ಯದ 17 ಡಿಸಿಗಳ ಜೊತೆ ಪ್ರಧಾನಿ ಮೋದಿ ವಿಡಿಯೋ ಸಂವಾದ: ಜಿಲ್ಲಾಧಿಕಾರಿಗಳೇ ಕೋವಿಡ್ ವಿರುದ್ಧ ಹೋರಾಟದ ಯುದ್ಧ ಕಮಾಂಡರ್ ಗಳು! | ಜನತಾ ನ್ಯೂಸ್

18 May 2021
1325

ನವದೆಹಲಿ: : ಕೊರೊನಾ ಸೋಂಕು ಇಡೀ ದೇಶವ್ಯಾಪಿಯಾಗಿ ಕಾಡುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶದ ನಾನಾ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ನಲ್ಲಿ ರಾಜ್ಯದ 17 ಜಿಲ್ಲಾಧಿಕಾರಿಗಳು ಭಾಗಿಯಾಗಿದ್ದರು.

ಭಾರತಕ್ಕೆ ಕೋವಿಡ್ ಎರಡನೇ ಅಲೆ ಹರಡುತ್ತಿದ್ದು, ಈ ಸಂದರ್ಭದಲ್ಲಿ ಕೋವಿಡ್ ವಿರುದ್ಧ ಹೋರಾಟ ನಡೆಸಲು ನಿಮ್ಮೆಲ್ಲರ ಪಾತ್ರ ತುಂಬಾ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಈ ಹೋರಾಟದಲ್ಲಿ ನೀವು(ಜಿಲ್ಲಾಧಿಕಾರಿಗಳು) ಯುದ್ಧ ಕಮಾಂಡರ್ ಗಳಾಗಬೇಕು ಎಂದು ಪ್ರಧಾನಿ ಹೇಳಿದರು.

ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಕೃಷಿ ಕ್ಷೇತ್ರವನ್ನು ಬಂದ್ ಮಾಡಿರಲಿಲ್ಲವಾಗಿತ್ತು. ಈ ವೇಳೆ ಗ್ರಾಮಸ್ಥರು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕಾರ್ಯನಿರ್ವಹಿಸುವುದನ್ನು ಕಂಡು ಅಚ್ಚರಿಗೊಳಗಾಗಿರುವುದಾಗಿ ಪ್ರಧಾನಿ ತಿಳಿಸಿದರು.

janata

ಇದೇ ವೇಳೆ 17 ಜಿಲ್ಲೆಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ಸಂವಾದದಲ್ಲಿ ಪಾಲ್ಗೊಂಡಿದ್ದು, ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಕೊಡಗು, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲಬುರಗಿ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ, ಜಿಲ್ಲೆಗಳ ಕೊರೊನಾ ಸ್ಥಿತಿಗತಿ, ನಿರ್ವಹಣೆ ಬಗ್ಗೆ ಪ್ರಧಾನಿ ಮಾಹಿತಿ ಪಡೆದು ಕೊಂಡಿದ್ದಾರೆ.

ಕೋವಿಡ್‌ ವಿರುದ್ಧ ಅಧಿಕಾರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೆಲವರು ಅಧಿಕಾರಿಗಳು ಸ್ವತಃ ಕೋವಿಡ್‌ ಪೀಡಿತರಾಗಿದ್ದಾರೆ. ಇನ್ನೂ ಕೆಲವರು ತಮ್ಮ ಕುಟುಂಬದವರನ್ನು ಕಳೆದುಕೊಂಡಿದ್ದಾರೆ. ಆದರೂ ಅವರ‍್ಯಾರೂ ಧೃತಿಗೆಡದೆ ಕೋವಿಡ್‌ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಆಯಾ ಸ್ಥಳೀಯ ಸಂದರ್ಭಗಳಿಗೆ ಹೊಂದುವ, ನವೀನ ರೀತಿಯ ಕ್ರಮಗಳನ್ನು ಕೈಗೊಳ್ಳಲು ನೀವು ಸ್ವತಂತ್ರರು. ಈಗ ಜಾರಿಗೊಳಿಸಿರುವ ನೀತಿಯಲ್ಲಿ ಏನಾದರೂ ಬದಲಾವಣೆಗಳು ಅಗತ್ಯವಿದೆ ಎಂದು ಅನಿಸಿದಲ್ಲಿ, ಯಾವುದೇ ಹಿಂಜರಿಕೆ ಇಲ್ಲದೇ ತಿಳಿಸಬೇಕು ಎಂದು ಅವರು ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದರು.

ಲಸಿಕೆ ವ್ಯರ್ಥವಾಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಸುತ್ತಾ ಕರೊನಾ ವಿಚಾರದಲ್ಲಿ ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳುತ್ತಾ ಜಿಲ್ಲಾಧಿಕಾರಿಗಳಿಗೆ ಫ್ರೀ ಹ್ಯಾಂಡ್​ ಕೊಟ್ಟರು. ಪಿಎಂ ಕೇರ್ಸ್ ಫಂಡ್‌ನಿಂದ ದೇಶದ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಪ್ಲಾಂಟ್ ಸ್ಥಾಪನೆ ಮಾಡಿ, ಲಸಿಕೆ ನೀಡಿಕೆ ಶೆಡ್ಯೂಲ್ 15 ದಿನ ಮುಂಚಿತವಾಗಿ ರಾಜ್ಯಗಳಿಗೆ ತಿಳಿಸಲು ಸೂಚನೆ ನೀಡಿದರು. ಕೊವಿಡ್ ಲಸಿಕೆ ಪೋಲಾಗದಂತೆ ತಡೆಯಬೇಕು. ಆಸ್ಪತ್ರೆಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತವಾಗದಂತೆ ನೋಡಿಕೊಳ್ಳಿ. ದೇಶವನ್ನು ಈ ಸಂಕಷ್ಟದಿಂದ ಹೊರಗೆ ತರಬೇಕೆಂಬುದು ನನ್ನ ಸೂಚನೆ ಎಂದು ತಿಳಿಸಿದರು.

RELATED TOPICS:
English summary :Karnataka Chief Minister BS Yediyurappa attends an interaction called by PM Modi to converse about the experience of officials from States & Districts in handling the #COVID19 pandemic

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...