ಮನೆಗೆ ಆಕಸ್ಮಿಕ ಬೆಂಕಿ: ಹಣ-ಚಿನ್ನ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ! | ಜನತಾ ನ್ಯೂಸ್
ಮಂಗಳೂರು, ಬಂಟ್ವಾಳ : ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಉಂಟಾಗಿ ಮನೆಯೊಳಗಿನ ಎಲ್ಲಾ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಪಾಣೆಮಂಗಳೂರು ಸಮೀಪದ ಆಲಡ್ಕ ಮಸೀದಿ ಸಮೀಪದ ವಸತಿ ಸಂಕೀರ್ಣ ಒಂದರಲ್ಲಿ ಸಂಭವಿಸಿದೆ.
ಮನೆ ಇರುವ ವಸತಿ ಸಂಕೀರ್ಣ ಇಸ್ಮಾಯಿಲ್ ಎಂಬವರಿಗೆ ಸೇರಿದೆ. ವಸತಿ ಸಂಕೀರ್ಣದಲ್ಲಿದ್ದ ಉದ್ಯಮಿ ಹನೀಫ್ ಹಾಸ್ಕೋ ಎಂಬುವರ ಕುಟುಂಬ ಸಂಬಂಧಿರೊಬ್ಬರ ಅಂತ್ಯಕ್ರಿಯೆಗೆ ತೆರಳಿತ್ತು. ಈ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ 50 ಸಾವಿರ ನಗದು, 20 ಪವನ್ ಚಿನ್ನಾಭರಣ, ಪಿಠೋಪಕರಣಗಳು ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಭಸ್ಮವಾಗಿವೆ.
ತಕ್ಷಣ ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ ಅದಾಗಲೇ ಮನೆಯೊಳಗಿನ ಸೊತ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ವಿದ್ಯುತ್ ಶಾರ್ಟ್ ಸರ್ಕೂಟ್ ನಿಂದಾಗಿ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ