Mon,May13,2024
ಕನ್ನಡ / English

ಹುಂಡಿ ಕಾಣಿಕೆ ವೈದ್ಯ ಎಂದು ಖ್ಯಾತವಾದ ಡಾ.ಅಶೋಕ ಸೋನ್ನದ ನಿಧನ. | ಜನತಾ ನ್ಯೂಸ್

25 May 2021
2423

ಬಾಗಲಕೋಟೆ : ಹುಂಡಿ ಕಾಣಿಕೆ ವೈದ್ಯರೆಂದು ಖ್ಯಾತವಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ವೈದ್ಯ ಡಾ.ಅಶೋಕ ರಾಮನ್ನ. ಸೋನ್ನದ (83) ನಿಧನವಾಗಿದ್ದಾರೆ.

ಮೂಲತಃ ಮುಧೋಳ ತಾಲೂಕಿನ ಬಂಟನೂರು ಗ್ರಾಮದ ಡಾ.ಅಶೋಕ ಸೊನ್ನದ ಅವರು ಅಮೆರಿಕದಲ್ಲಿ 40 ವರ್ಷ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. ತದನಂತರ ಬಾಗಲಕೋಟೆ ನಗರದಲ್ಲಿಯೇ ಇದ್ದರು. ಇಲ್ಲಿನ ಜನರಿಗೆ ಉಚಿತ ಚಿಕಿತ್ಸೆ ನೀಡುತ್ತ ಸಮಾಜ ಸೇವೆ ಸಲ್ಲಿಸುತ್ತಿದ್ದರು. ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ ನಡೆಸಿದ್ದರು.

ಇವರ ಮನೆಯಲ್ಲಿ ಏಳು ಜನ ಪಿ.ಎಚ್.ಡಿ. ಪದವೀಧರರಿದ್ದು ಡಾಕ್ಟರೇಟ್ ಕುಟುಂಬ ಎಂಬ ಗಿನ್ನಿಸ್ ದಾಖಲೆಯೂ ಇವರ ಕುಟುಂಬಕ್ಕಿದೆ. ಇವರ ಸೇವೆಗೆ 2020ರಲ್ಲಿ ರಾಜ್ಯಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಒಲಿದಿತ್ತು.

ಇತ್ತೀಚಿಗೆ ಡಾ. ಅಶೋಕ ಅವರಿಗೆ ಕರೊನಾ ಸೋಂಕು ತಗುಲಿತ್ತು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಅಶೋಕ ಸೊನ್ನದ ಅವರ ಬಳಿ ಚಿಕಿತ್ಸೆ ಪಡೆಯಲು ಬಂದ ರೋಗಿಗಳಿಗೆ ಅವರ ಸೇವೆ ತೃಪ್ತಿಯಾದರೆ ಮಾತ್ರ ಕ್ಲಿನಿಕ್‌ನ ಪ್ರವೇಶ ದ್ವಾರದಲ್ಲಿ ಇಟ್ಟಿರುವ ಕಾಣಿಕೆ ಹುಂಡಿಗೆ ನಿಮ್ಮ ಕೈಲಾದಷ್ಟು ದುಡ್ಡು ಹಾಕಲು ಸೂಚಿಸುತ್ತಿದ್ದ ಕಾರಣ ಅವರು ಹುಂಡಿ ಕಾಣಿಕೆ ವೈದ್ಯ ಎಂದು ಜನಪ್ರಿಯವಾಗಿದ್ದರು.

ಡಾ. ಅಶೋಕ್ ಸೊನ್ನದ ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕುಟುಂಬ ಅಮೆರಿಕದಲ್ಲಿ ನೆಲೆಸಿದೆ.

RELATED TOPICS:
English summary :Bagalkote

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...