Sat,May11,2024
ಕನ್ನಡ / English

ತೋಟಗಾರಿಕಾ ಬೆಳೆಗಾರರಿಗೆ ನೆರವಾಗುವಂತೆ ಕೋರಿ ಕೇಂದ್ರಕ್ಕೆ ದೇವೇಗೌಡ ಒತ್ತಾಯ | ಜನತಾ ನ್ಯೂಸ್

25 May 2021
1313

ಬೆಂಗಳೂರು : ದೇಶದಲ್ಲಿ ಉಲ್ಬಣಿಸಿರುವ ಕೊರೊನಾ ಸಾಂಕ್ರಾಮಿಕದಿಂದಾಗಿ ತೋಟಗಾರಿಕಾ ಉತ್ಪನ್ನಗಳ ಬೆಲೆ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಬರಬೇಕೆಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ತೋಟಗಾರಿಕಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಇಲ್ಲ. ಜತೆಗೆ ತೋಟಗಾರಿಕಾ ಬೆಳೆಗಳ ಬೆಲೆ ತೀವ್ರ ಪ್ರಮಾಣದಲ್ಲಿ ಕುಸಿದಿದೆ. ಹೂವು, ಹಣ್ಣು, ತರಕಾರಿ ಖರೀದಿ ಮಾಡುವವರಿಲ್ಲದೇ ಹಾಳಾಗುತ್ತಿವೆ. ಇಂತಹ ದುರಿತ ಕಾಲದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ರೈತರಿಗೆ ನೆರವಿಗೆ ಧಾವಿಸಬೇಕು. ತೋಟಗಾರಿಕಾ ಬೆಳೆಗಳ ಬೆಳೆಗಾರರಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ಸಹಾಯ ಮಾಡುವಂತೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಸಣ್ಣ, ಮಧ್ಯಮ ಮತ್ತು ಅತಿ ಸಣ್ಣ ರೈತರ ಜೀವನೋಪಾಯದ ಮೇಲೆಯೂ ದೊಡ್ಡ ಪರಿಣಾಮ ಬೀರಿದೆ. ಹಾಗಾಗಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ತೋಟಗಾರಿಕಾ ಬೆಳೆಗಾರರಿಗೆ ನೆರವು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಟೊಮ್ಯಾಟೋ, ಹೂವು, ತರಕಾರಿ ಹಾಗೂ ಹಣ್ಣು ಸೇರಿದಂತೆ ವಿವಿಧ ತೋಟಗಾರಿಕೆ ಉತ್ಪನಗಳ ಬೆಲೆ ಕುಸಿತವಾಗಿದೆ. ಯೋಗ್ಯ ಬೆಲೆ ಸಿಗದೆ ಕಂಗೆಟ್ಟ ರೈತರು ಹಣ್ಣು, ತರಕಾರಿ ರಸ್ತೆಗೆ ಸುರಿದು ನಾಶಪಡಿಸಿರುವ ವರದಿಗಳು ಪ್ರಕಟವಾಗಿವೆ. ಕೋಲಾರದ ಎಪಿಎಂಸಿ ಮಾರುಕಟ್ಟೆಗೆ ಐದಾರು ಜಿಲ್ಲೆಗಳಿಂದ ಹಣ್ಣು, ತರಕಾರಿ ಬರುತ್ತದೆ. ಇತ್ತೀಚೆಗೆ ಬೆಲೆ ಕುಸಿತದಿಂದ ರೈತರು ಟೊಮ್ಯಾಟೋ ಸುರಿದು ನಾಶಪಡಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಹತ್ತು ಸಾವಿರ ಎಕರೆ ಪ್ರದೇಶದಲ್ಲಿ ಹೂವು, ಹಣ್ಣು, ತರಕಾರಿ ಬೆಳೆಯಲಾಗುತ್ತಿದೆ. ಕೋವಿಡ್​ನಿಂದಾಗಿ ಮಾರುಕಟ್ಟೆ ಜಾಲವೇ ಅಸ್ತವ್ಯಸ್ತಗೊಂಡಿದೆ ಎಂದು ಗೌಡರು ಹೇಳಿದ್ದಾರೆ.

ಇನ್ನು ಕೊರೊನಾ ಎರಡನೇ ಅಲೆ ಗ್ರಾಮೀಣ ಭಾಗದಲ್ಲೂ ವ್ಯಾಪಕವಾಗಿ ಹರಡಿರುವುದರಿಂದ ಜನರು ತೀವ್ರ ಸಂಕಷ್ಡ ಎದುರಿಸುವಂತಾಗಿದೆ. ಲಾಕ್​ಡೌನ್​ನಿಂದಾಗಿ ನಗರ ಪ್ರದೇಶಗಳಿಂದ ಜನರು ಗ್ರಾಮೀಣ ಭಾಗಕ್ಕೆ ಮರು ವಲಸೆ ಬಂದಿದ್ದಾರೆ. ಇದರಿಂದ ಗ್ರಾಮೀಣ ಭಾಗದ ಮೇಲೆ ಒತ್ತಡ ಹೆಚ್ಚಾಗಿದೆ.

ಅಲ್ಲದೆ, ನಿರುದ್ಯೋಗದ ಪ್ರಮಾಣವೂ ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯೂ ರೈತರ ನೆರವಿಗೆ ಬರುತ್ತಿಲ್ಲ.

ಶೀಘ್ರವಾಗಿ ಹಾಳಾಗುವ ಹಣ್ಣು, ತರಕಾರಿ ದಾಸ್ತಾನು ಮಾಡಲು ಸೂಕ್ತ ಶೀಥಲ ಗೃಹಗಳ ವ್ಯವಸ್ಥೆಯೂ ಇಲ್ಲ. ಇಂತಹ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಮೂಲಕ ಸೂಕ್ತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪತ್ರದ ಮೂಲಕ ಪ್ರಧಾನಿ ಅವರನ್ನು ಕೋರಿದ್ದಾರೆ.

RELATED TOPICS:
English summary :HD Deve Gowda asks PM Modi to look into crashing prices of horticulture produce

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...