Sat,May18,2024
ಕನ್ನಡ / English

ಜನ್ಮದಿನಕ್ಕೆ ಬಟ್ಟೆ ಕೊಡಿಸಲಿಲ್ಲ ಅಂತ ನವವಿವಾಹಿತೆ ಆತ್ಮಹತ್ಯೆ: ಕೊಲೆ ಕೇಸು ದಾಖಲು! | ಜನತಾ ನ್ಯೂಸ್

26 May 2021
2718

ಚಿಕ್ಕಬಳ್ಳಾಪುರ : ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸದೇ ಗಂಡ ರೇಗಾಡಿದ್ದರಿಂದ ನೊಂದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಗ್ರಾಮದಲ್ಲಿ ನಡೆದಿದೆ.

ಗೌರಿಬಿದನೂರು ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ರಾಜು ಅವರ ಪುತ್ರಿ ಮಮತಾ (17) ಆತ್ಮಹತ್ಯೆ ಮಾಡಿಕೊಂಡ ಯುವತಿ. 17 ವರ್ಷದ ವಿವಾಹಿತೆ ಮಮತಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ಮಮತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದ್ದು ಮೃತ ಮಮತಾಳ ಪೋಷಕರು ಪತಿಯೇ ಕೊಲೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಬಂಧಿತ ಮಹಾದೇವ್ ಅಪ್ರಾಪ್ತೆಯನ್ನು ಪ್ರೀತಿಸಿ ಕಾನೂನುಬಾಹಿರವಾಗಿ ಬಲವಂತವಾಗಿ ಮದುವೆಯಾಗಿದ್ದನಂತೆ. ಮಹಾದೇವ್ ಅಲಿಯಾಸ್ ಮಣಿಕಂಠನೇ ನನ್ನ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ. ಪ್ರೀತಿ ಹೆಸರಲ್ಲಿ ಮದುವೆಯಾಗಿ ನಂಬಿಸಿ ಮೋಸ ಮಾಡಿ ಈಗ ಕೊಲೆನೂ ಮಾಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

2020 ಜನವರಿಯಲ್ಲಿ ಗೌರಿಬಿದನೂರು ತಾಲ್ಲೂಕಿನ ಆಲಿಪುರದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದದ ಮಮತಾಳನ್ನು ಮಹದೇವ ಅಲಿಯಾಸ್ ಮಣಿಕಂಠ ಪ್ರೀತಿ ಪ್ರೇಮದ ಹೆಸರಲ್ಲಿ ಅಪಪರಿಸಿ ಮದುವೆ ಆಗಿದ್ದಾನೆ ಎಂದು ಮಮತಾ ಪೋಷಕರು ಮಂಚೇನಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು.

ಮಮತಾಳನ್ನ ಸಾಂತ್ವಾನ ಕೇಂದ್ರದಲ್ಲಿ ಬಿಟ್ಟು ಬಳಿಕ ಪೋಷಕರು ಮನೆಗೆ ಕರೆದುಕೊಂಡು ಬಂದಿದ್ದರು. ಆದರೆ ಮಣಿಕಂಠ ಜೊತೆ ಮಮತಾ 3 ತಿಂಗಳ ಹಿಂದೆ ಮದುವೆ ಆಗಿದ್ದು, ಈ ಬಗ್ಗೆ ಬಾಯಿಬಿಟ್ಟರೆ ಮಮತಾಳನ್ನು ಸಾಯಿಸುವುದಾಗಿ ಪೋಷಕರಿಗೆ ಬೆದರಿಸಿದ್ದನಂತೆ.

ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಮತ ಗಂಡ ಮಣಿಕಂಠ, ಅತ್ತೆ ಮಾವನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

RELATED TOPICS:
English summary :Chikkaballapura

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...