Sat,May18,2024
ಕನ್ನಡ / English

ಯುವತಿಯ ಮೇಲೆ ಗ್ಯಾಂಗ್ ರೇಪ್: ಗುಪ್ತಾಂಗದಲ್ಲಿ ಬೀಯರ್ ಬಾಟಲ್ ಹಾಕಿ ವಿಡಿಯೋ ಮಾಡಿದ ನೀಚರು | ಜನತಾ ನ್ಯೂಸ್

28 May 2021
2267

ಬೆಂಗಳೂರು : ಬೆಂಗಳೂರು ಹೊರವಲಯದಲ್ಲಿ 22 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿ ವಿಡಿಯೋ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟೆಲ್ ಇರಿಸಿ ವಿಕೃತಿ ಮರೆದಿದ್ದಾರೆ.

ಸುಮಾರು 10 ದಿನಗಳ ಹಿಂದೆ ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ಈ ಅತ್ಯಾಚಾರ ನಡೆದಿದೆ. ನಾಲ್ವರು ಕಾಮುಕರಿಗೆ ಇಬ್ಬರು ಯುವತಿಯರು ಸಾಥ್ ನೀಡಿದ್ದಾರೆ. ಸಂತ್ರಸ್ಥೆ ಮತ್ತು ಆರೋಪಿಗಳು ಬಾಂಗ್ಲಾ ದೇಶದ ಮೂಲದವರು ಎನ್ನಲಾಗಿದೆ. ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಬಂಧಿತ ಆರೋಪಿಗಳು ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು.

ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು. ರಾಮಮೂರ್ತಿ ನಗರದ ಎನ್ ಆರ್ ಐ ಕಾಲೋನಿಯಲ್ಲಿ ವಾಸವಾಗಿದ್ದರು. ಅಲ್ಲಿಯೇ ವೇಶ್ಯಾವಾಟಿಕೆ ದಂದೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.

ಸಂತ್ರಸ್ಥೆ ಸೇರಿದಂತೆ ಆರೋಪಿಗಳು ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ನಲ್ಲಿ ವಾಸವಾಗಿದ್ದರು. ಯುವತಿಯನ್ನು ಅತ್ಯಾಚಾರಗೈದು, ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಯನ್ನು ಕಿರಾತಕರು ವೀಡಿಯೋ ಮಾಡಿದ್ದಾರೆ. ಯುವತಿಯ ಮೇಲೆ ದ್ವೇಷಕ್ಕಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಬಾಂಗ್ಲಾ ದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ಆ ವಿಡಿಯೋ ವೈರಲ್ ಆಗಿತ್ತು. ಆರೋಪಿಗಳೆಲ್ಲರೂ ಸಂತ್ರಸ್ತೆಗೆ ಪರಿಚಯಸ್ಥರೇ ಎನ್ನಲಾಗಿದೆ.

ಸಂತ್ರಸ್ಥೆಯ ವಿಡಿಯೋ ವೈರಲ್​ ಆದ ನಂತರ ಅಸ್ಸಾಂ ರಾಜ್ಯದ ಪೊಲೀಸರು ವಿಡಿಯೋ ಬಗ್ಗೆ ತನಿಖೆ ನಡೆಸಿದ್ದರು. ಕೃತ್ಯದಲ್ಲಿ ಬಾಂಗ್ಲಾ ಮೂಲದವರು ಇರುವುದು ತಿಳಿದುಬಂದ ನಂತರ ಬಾಂಗ್ಲಾ ದೇಶದ ಪೊಲೀಸರಿಗೆ ಮಾಹಿತಿ ರವಾನೆ ಮಾಡಲಾಗಿತ್ತು. ಆ ಬಳಿಕ ಬಾಂಗ್ಲಾ ಪೊಲೀಸರು ಸಂತ್ರಸ್ಥೆ ಕುಟುಂಬದ ಸದಸ್ಯರನ್ನ ಪತ್ತೆಮಾಡಿದ್ದರು. ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.

ಪ್ರಕರಣವನ್ನು ದಾಖಲಿಸಿಕೊಂಡಿರುವ ರಾಮಮೂರ್ತಿ ನಗರ ಠಾಣೆ ಪೊಲೀಸರು ನಾಲ್ಕು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಹಾಗೂ ಇನ್ನಿಬ್ಬರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆರೋಪಿಗಳು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.

RELATED TOPICS:
English summary :Bangalore

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...