Sun,May19,2024
ಕನ್ನಡ / English

ಮದುವೆ ಬಳಿಕವೂ ಪ್ರೀತಿ​ ಮುಂದುವರಿಸಿದ್ದ ಜೋಡಿ, ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ | ಜನತಾ ನ್ಯೂಸ್

03 Jun 2021
1380

ಬೆಳಗಾವಿ : ಐದು ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದ ಜೋಡಿ, ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿಂಧೋಗಿಯಲ್ಲಿ ನಡೆದಿದೆ.

ಪಂಚಪ್ಪ ಕಣವಿ(25) ಮತ್ತು ಸಕ್ಕುಬಾಯಿ ಕರಿಗಾರ(23) ಮೃತ ಪ್ರೇಮಿಗಳು.

ಪಂಚಪ್ಪ ಮತ್ತು ಸಕ್ಕುಬಾಯಿ 5 ವರ್ಷದಿಂದ ಪ್ರೀತಿಸುತ್ತಿದ್ದರು. ಆದರೂ ಮತ್ತೊಬ್ಬನೊಂದಿಗೆ ಕುಟುಂಬಸ್ಥರು ಸಕ್ಕುಬಾಯಿಗೆ ಒಂದು ತಿಂಗಳ ಹಿಂದೆ ಮದುವೆ ಮಾಡಿದ್ದರು. ಸಕ್ಕುಬಾಯಿ ಮಾತ್ರ ಗಂಡನ ಮನೆಗೆ ಹೋಗದೆ ತವರಿನಲ್ಲೇ ಇದ್ದಳು. ಪಂಚಪ್ಪ ಹಾಗೂ ಸಕ್ಕೂಬಾಯಿ ಮದುವೆ ನಂತರವೂ ತಮ್ಮ ಪ್ರೀತಿ ಮುಂದುವರಿಸಿದ್ದರು.

ವಿವಾಹವಾದರೂ ಸಕ್ಕೂಬಾಯಿಯೊಂದಿಗೆ ಪಂಚಪ್ಪ ಕಣವಿ ಸಲುಗೆಯಿಂದ‌ ಇದ್ದನು. ಈ ಪ್ರೀತಿ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದರು ಎನ್ನಲಾಗಿದೆ.

ಗಂಡನ ಮನೆಗೆ ಹೋದರೆ ನಾವಿಬ್ಬರೂ ಬೇರೆ ಆಗುತ್ತೇವೆ ಎಂಬ ಭಯದಿಂದ ಇಬ್ಬರೂ ಒಂದೇ ಗಿಡಕ್ಕೆ ಒಂದೇ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾರೆ.

ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Belagavi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...