Mon,May20,2024
ಕನ್ನಡ / English

25 ಲಕ್ಷ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ಆರ್ಥಿಕ ನೆರವು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ | ಜನತಾ ನ್ಯೂಸ್

05 Jun 2021
1769

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ತಲಾ ₹ 3 ಸಾವಿರ ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಿ. ಕಲ್ಪನಾ, ಇ-ಆಡಳಿತ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಮಣರೆಡ್ಡಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಕಾರ್ಮಿಕ ಇಲಾಖೆ ಆಯುಕ್ತ ಅಕ್ರಮ್ ಪಾಷಾ ಮತ್ತು ಇತರ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕೊವಿಡ್ 19 ಸಾಂಕ್ರಾಮಿಕದ ಎರಡನೇ ಅಲೆಯ ಹಿನ್ನೆಲೆಯಲ್ಲಿ ಘೋಷಿಸಲಾದ ಪ್ಯಾಕೇಜ್​ನಡಿ ಈ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಇದಕ್ಕಾಗಿ 749.55 ಕೋಟಿ ಪರಿಹಾರ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ.

ಕ್ಷೌರಿಕರು, ಅಗಸರು, ಟೈಲರುಗಳು, ಹಮಾಲರು, ಗೃಹ ಕಾರ್ಮಿಕರು, ಮೆಕ್ಯಾನಿಕ್ ಗಳು, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರುಉ, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಸೇರಿದಂತೆ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ತಲಾ 2 ಸಾವಿರ ರೂ. ನೆರವು ಘೋಷಿಸಲಾಗಿದ್ದು, ಇದಕ್ಕಾಗಿ ಸೇವಾ ಸಿಂಧುವಿನಡಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು. ಸುಮಾರು 3.3 ಲಕ್ಷ ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕಾಗಿ ವಿಧಿಸಲಾದ ನಿರ್ಬಂಧಗಳಿಂದ ಸಂಕಷ್ಟಕ್ಕೊಳಗಾದ ದುರ್ಬಲ ವರ್ಗದವರು, ಅಸಂಘಟಿತ ವಲಯದ ಕಾರ್ಮಿಕರಿಗೆ, ಶ್ರಮಿಕರಿಗೆ 1250 ಕೋಟಿ ರೂ. ಪರಿಹಾರ ಪ್ಯಾಕೇಜ್ ಘೋಷಿಸಿದೆ. ಇದರೊಂದಿಗೆ ಮೀನುಗಾರರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೂ ಪರಿಹಾರ ಘೋಷಿಸಲಾಗಿದೆ.

RELATED TOPICS:
English summary :BSYediyurappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...