Thu,May16,2024
ಕನ್ನಡ / English

ಕೊರೊನಾ ಸೋಂಕಿತರಿಗೆ ಬೆಡ್ ಕಾಯ್ದಿರಿಸುವ ಹೊಸ ವ್ಯವಸ್ಥೆಗೆ ಚಾಲನೆ | ಜನತಾ ನ್ಯೂಸ್

10 Jun 2021
1315

ಬೆಂಗಳೂರು : ಕೊರೊನಾ ಸೋಂಕಿತರು ಸರತಿ ಸಾಲಿನಲ್ಲಿ ಬೆಡ್ ಕಾಯ್ದಿರುವ ನೂತನ ವ್ಯವಸ್ಥೆಯನ್ನು ಸಚಿವ ಅರವಿಂದ ಲಿಂಬಾವಳಿ ಇಂದು ಲೋಕಾರ್ಪಣೆಗೊಳಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಈ ಹೊಸ ವ್ಯವಸ್ಥೆ ಜಾರಿಗೆ ಬಂದಿದ್ದು ,ಮುಂದಿನ ಕೆಲವೇ ದಿನಗಳಲ್ಲಿ ಇದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲಾಗುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಈ ಹೊಸ ವ್ಯವಸ್ಥೆ ಜಾರಿಗೆ ಬಂದಿದ್ದು ,ಮುಂದಿನ ಕೆಲವೇ ದಿನಗಳಲ್ಲಿ ಇದನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲಾಗುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಈ ಹೊಸ ತಂತ್ರಾಂಶ ಸಿದ್ಧಪಡಿಸುವಲ್ಲಿ ನೆರವಾದ ನಂದನ್ ನಿಲೇಕಣಿ, ಐ-ಸ್ಪಿರಿಟ್ ಮತ್ತು ಫ್ರಾಕ್ಟಲ್ ಸಂಸ್ಥೆಗಳಿಗೆ ಹಾಗೂ ಸ್ವಯಂ ಮುಂದೆ ಬಂದ ಅನೇಕ ಐಟಿ ಪರಿಣಿತರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಹೊಸ ಸರತಿ ಸಾಲಿನ ವ್ಯವಸ್ಥೆಯು ಹಾಸಿಗೆ ಕಾಯ್ದಿರಿಸುವಿಕೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ನೆರವಾಗುತ್ತದೆ, ಇದು ಸಂಯೋಜಿತ ವ್ಯವಸ್ಥೆಯನ್ನು ಹೊಂದಿದ್ದು ಆಸ್ಪತ್ರೆ ಪ್ರವೇಶ ಪಡೆಯುವ ಎಲ್ಲ ರೋಗಿಗಳಿಗೆ ಸುಲಭವಾಗಿ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.

ಆಸ್ಪತ್ರೆಯ ಹಾಸಿಗೆ ಹಂಚಿಕೆ ಫಿಸಿಕಲ್ ಟ್ರಯಾಜಿಂಗ್ ಆಧರಿಸಿ ಮಾಡಲಾಗುವುದು,ಕ್ಯೂಯಿಂಗ್ ವ್ಯವಸ್ಥೆಯಿಂದ ಆಸ್ಪತ್ರೆ ಪ್ರವೇಶ ಪಡೆಯಲು ಬಯಸುವ ಎಲ್ಲಾ ರೋಗಿಗಳ ಟ್ರಯಾಜ್ ವಿವರಗಳನ್ನು ಎಲೆಕ್ಟ್ರಾನಿಕ್ ಪದ್ಧತಿ ಮೂಲಕ ದಾಖಲಿಸಲಾಗುತ್ತದೆ ಎಂದರು.

ಕ್ಲಿನಿಕಲ್ ಪರಿಸ್ಥಿತಿಗಳ ಆಧಾರದ ಮೇಲೆ ಸೊಂಕಿತರಿಗೆ ಆಸ್ಪತ್ರೆ / ಸಿಸಿಸಿ ಹಾಸಿಗೆ ಯನ್ನು ಶಿಫಾರಸು ಮಾಡಲಾಗುವುದು,ಈ ರೋಗಿಗಳಿಗೆ ನಿರ್ದಿಷ್ಟ ಹಾಸಿಗೆ ಮತ್ತು ವಲಯದ ಪ್ರಕಾರ ಕ್ಯೂ ಸಂಖ್ಯೆಯನ್ನು ನಿಗದಿ ಮಾಡಲಾಗುತ್ತದೆ ಎಂದು ಅವರು ವಿವರಿಸಿದರು.

ಚಿಕಿತ್ಸೆಯ ಸಮಯದ ಆಧಾರದ ಮೇಲೆ ಕ್ಯೂ ಸಂಖ್ಯೆಯನ್ನು ಸ್ವಯಂಚಾಲಿತವಾಗಿ ನಿಯೋಜಿಸುವುದು. ನಿರ್ದಿಷ್ಟ ಹಾಸಿಗೆ ಪ್ರಕಾರ ಮತ್ತು ವಲಯಕ್ಕೆ ಕ್ಯೂ ಸಂಖ್ಯೆಯನ್ನು ನಿಗದಿ ಪಡಿಸಲಾಗಿದೆ ಇದರಿಂದ ಅನಗತ್ಯ ಗೊಂದಲ ನಿವಾರಣೆಯಾಗುತ್ತದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, BBMP ವಾರ್ ರೂಮ್ ನಿರ್ವಹಣೆಯ ಹೊಣೆಹೊತ್ತಿರುವ ತುಷಾರ್ ಗಿರಿನಾಥ್, ವಿ ಪೊನ್ನುರಾಜ್, ಕುಮಾರ್ ಪುಷ್ಕರ್, ಬಿಸ್ವಜಿತ್ ಸಿಂಗ್, ವಿಶೇಷ ಆಯುಕ್ತ ರಣದೀಪ್ ಹಾಗು ಡಾ. ಭಾಸ್ಕರ್ ಸೇರಿದಂತೆ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

RELATED TOPICS:
English summary :Bangalore

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...