Wed,May15,2024
ಕನ್ನಡ / English

ದೆಹಲಿ ಭೇಟಿ ನೀಡಿದ ಸಿಎಂ ಯೋಗಿ : ಉ.ಪ್ರ. ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ | ಜನತಾ ನ್ಯೂಸ್

10 Jun 2021
1873

ನವದೆಹಲಿ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಗುರುವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಅವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ. ಮುಂಬರುವ ಉತ್ತರ ಪ್ರದೇಶದ ಚುನಾವಣೆಗೂ ಮುಂಚೆ ಪಕ್ಷದ ಚುನಾವಣಾ ತಂತ್ರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಕೇಂದ್ರದ ನಾಯಕರೊಂದಿಗೆ ಯೋಗಿ ಅವರು ಚರ್ಚಿಸುವ ಸಾದ್ಯತೆಗಳಿವೆ.

ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜಕೀಯವಾಗಿ ಅತ್ಯಂತ ನಿರ್ಣಾಯಕವಾದ ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ತೀವ್ರವಾದ ವದಂತಿಗಳ ಹಿನ್ನೆಲೆಯಲ್ಲಿ ಈ ಸಭೆ ನಡೆಯುತ್ತಿದೆ. ಉತ್ತರ ಪ್ರದೇಶದ ಪ್ರಸಿದ್ಧ ಬ್ರಾಹ್ಮಣ ಕುಟುಂಬದಿಂದ ಬಂದ ಮಾಜಿ ಕಾಂಗ್ರೆಸ್ ಮುಖಂಡ ಜಿತಿನ್ ಪ್ರಸಾದ ಅವರು ಬಿಜೆಪಿಗೆ ಸೇರಲು ಕಾಂಗ್ರೆಸ್ ಪಕ್ಷವನ್ನು ತೊರೆದ ಒಂದು ದಿನದ ನಂತರ ಸಿಎಂ ಯೋಗಿಯ ದೆಹಲಿ ಭೇಟಿ ಬಂದಿದೆ.

ರಾಷ್ಟ್ರ ರಾಜಧಾನಿಗೆ ಬಂದ ಸ್ವಲ್ಪ ಸಮಯದ ನಂತರ ಸಿಎಂ ಯೋಗಿ ನೇರವಾಗಿ ಅಮಿತ್ ಷಾ ಅವರ ನಿವಾಸಕ್ಕೆ ತೆರಳಿ ಗೃಹ ಸಚಿವರನ್ನು ಭೇಟಿಯಾದರು. ಈ ಕುರಿತು ಹೇಳಿರುವ ಸಿಎಂ ಯೋಗಿ ಅವರು, ಇಂದು ಗೌರವಾನ್ವಿತ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರನ್ನು ನವದೆಹಲಿಯ ಸೌಜನ್ಯ ಕರೆಯಲ್ಲಿ ಭೇಟಿ ಮಾಡುವ ಮೂಲಕ ಅವರ ಮಾರ್ಗದರ್ಶನ ಪಡೆದಿರುವುದಾಗಿ ತಿಳಿಸಿದ್ದಾರೆ.

ಸಿಎಂ ಯೋಗಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ನಂತರ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪಕ್ಷದ ಉನ್ನತ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ಕೇಂದ್ರ ನಾಯಕತ್ವವು ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ಅವರ ಮೇಲೆ ಎಲ್ಲಾ ಭಾರ ಹಾಕಿದೆ ಮತ್ತು ಮುಖ್ಯಮಂತ್ರಿಯನ್ನು ಬೆಂಬಲಿಸಿದೆ, ರಾಜ್ಯದಲ್ಲಿ ಎದ್ದಿರುವ ನಾಯಕತ್ವದ ಬದಲಾವಣೆಯ ಕುರಿತಾದ ವದಂತಿಗಳನ್ನು ಹತ್ತಿಕ್ಕಿದೆ.

RELATED TOPICS:
English summary :CM Yogi visits Delhi : Politics on high in UP BJP

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...