Sun,May19,2024
ಕನ್ನಡ / English

ಕೊರೋನಾದಿಂದ ಕವಿ ಸಿದ್ದಲಿಂಗಯ್ಯ ನಿಧನ! | ಜನತಾ ನ್ಯೂಸ್

11 Jun 2021
1817

ಬೆಂಗಳೂರು : ಕರೊನಾ ಸೋಂಕಿನಿಂದ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಲಿತ ಕವಿ ಡಾ. ಸಿದ್ದಲಿಂಗಯ್ಯ (67) ಇಂದು ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಇವರಿಗೆ ಉಸಿರಾಟದ ಸಮಸ್ಯೆ ಮತ್ತು ಕೆಮ್ಮು ಕಾಣಿಸಿಕೊಂಡಿತ್ತು. ಕೃತಕ ಉಸಿರಾಟದ ಮೂಲಕ ಚಿಕಿತ್ಸೆ ನೀಡಲಾಗಿತ್ತು.

ನಿಮೋನಿಯಾ ತೀವ್ರಾಗಿದ್ದ ಹಿನ್ನಲೆ ಅವರು ಆರೋಗ್ಯ ಸ್ಥಿತಿ ಬಿಗಾಡಾಯಿಸಿದ್ದು, ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರ ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ.

ಕಳೆದ ಮಂಗಳವಾರ ಆಸ್ಪತ್ರೆಗೆ ದಾಖಲಾಗುವ ಮುನ್ನ ಬೆಡ್​ ಸಿಗದೇ ಅವರು ಪರದಾಡಿದ್ದರು. ಈ ಘಟನೆ ಗಮನಕ್ಕೆ ಬರುತ್ತಿದ್ದಂತೆ ಡಿಸಿಎಂ ಅಶ್ವತ್ಥ್​ ನಾರಾಯಣ್​ ಅವರು ಅವರಿಗೆ ಬೆಡ್​ ವ್ಯವಸ್ಥೆ ಮಾಡಿದ್ದರು.

ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದ ಸಿದ್ದಲಿಂಗಯ್ಯ ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿ ದಲಿತ ಕವಿ ಎಂದೇ ಹೆಸರು ಪಡೆದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದರು.

1954ರಲ್ಲಿ ಮಾಗಡಿ ತಾಲ್ಲೂಕಿನ "ಮಂಚನಬೆಲೆ" ಗ್ರಾಮದಲ್ಲಿ ಜನಿಸಿದ ಸಿದ್ದಲಿಂಗಯ್ಯ ಅವರು ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ಪಂಪ ಪ್ರಶಸ್ತಿ, ಕರ್ನಾಟಕ ಸಾಹಿತ್ಯು ಅಕಾಡೆಮಿ ಪ್ರಶಸ್ತಿ, ನಾಡೋಜ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಹಾಗೂ ಗೌರವಗಳು ಅವರಿಗೆ ದೊರೆತಿವೆ.

ಗೌರವ, ಪ್ರಶಸ್ತಿಗಳು:
ಉತ್ತಮ ಚಲನಚಿತ್ರಗೀತ ರಚನೆಗಾಗಿ ಕರ್ನಾಟಕ ಸರ್ಕಾರ ಪ್ರಶಸ್ತಿ-1984
ರಾಜ್ಯೋತ್ಸವ ಪ್ರಶಸ್ತಿ -ಕರ್ನಾಟಕ ಸರ್ಕಾರ-1986
ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ -1992
ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ -1996
ಜಾನಪದ ತಜ್ಞ ಪ್ರಶಸ್ತಿ -2001
2 ಬಾರಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ.
ಸಂದೇಶ್ ಪ್ರಶಸ್ತಿ -2001
ಡಾ.ಅಂಬೇಡ್ಕರ್ ಪ್ರಶಸ್ತಿ -2002
ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ -2002
ಬಾಬುಜಗಜೀವನರಾಮ್ ಪ್ರಶಸ್ತಿ -2005
ನಾಡೋಜ ಪ್ರಶಸ್ತಿ -2007
ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ -2012
ಆಳ್ವಾಸ್ ನುಡಿಸಿರಿ ಪ್ರಶಸ್ತಿ -2012
ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು.
ನೃಪತುಂಗ ಪ್ರಶಸ್ತಿ -2018
ಪಂಪ ಪ್ರಶಸ್ತಿ - 2019

RELATED TOPICS:
English summary :Siddalingaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...