Sun,May12,2024
ಕನ್ನಡ / English

ಬೆಂಗಳೂರಿಗೆ ವಾಪಸ್ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಿಎಸ್​​ವೈ | ಜನತಾ ನ್ಯೂಸ್

13 Jun 2021
1909

ಬೆಂಗಳೂರು : ಅನ್‌ಲಾಕ್ ಪ್ರಕ್ರಿಯೆ ಆರಂಭಗೊಳ್ಳುತ್ತಿದ್ದಂತೆ ಬೆಂಗಳೂರಿಗೆ ವಾಪಸಾಗುವವರಿಗೆ ಕೊರೊನಾ ತಪಾಸಣೆ ನಡೆಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಜಿಲ್ಲಾ ಪ್ರವಾಸ ಮುಗಿಸಿ ವಾಪಸಾದ ಸಿಎಂ, ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಾಸನ, ಶಿವಮೊಗ್ಗ ಜಿಲ್ಲೆ ಅಭಿವೃದ್ಧಿ, ಕೋವಿಡ್ ಬಗ್ಗೆ ಪರಿಶೀಲನೆ ಮುಗಿಸಿದ್ದೇನೆ. ಜಿಲ್ಲೆಯ ಅಭಿವೃದ್ಧಿ ಕೆಲಸ ಮತ್ತು ಕೋವಿಡ್ ಸ್ಥಿತಿಗತಿ ಬಗ್ಗೆ ಚರ್ಚೆ ಮಾಡಿದ್ದೇವೆ. ಯಶಸ್ವಿ ಪ್ರವಾಸ ಆಗಿದೆ ಎಂದರು.

ಜಿಲ್ಲೆಯ ವಾಸ್ತವಿಕ ಸ್ಥಿತಿ ತಿಳಿಯೋಕೆ ಅವಕಾಶ ಆಯ್ತು. ಹಾಸನದಲ್ಲಿ ಏರ್ಪೋರ್ಟ್ ಕೆಲಸ ನಡೆಯುತ್ತಿದೆ. ಆದಷ್ಟು ಬೇಗ ದೇವೇಗೌಡರ ಜೊತೆ ಶಂಕುಸ್ಥಾಪನೆ ಕಾರ್ಯ ಮಾಡ್ತೇನೆ. ಅಭಿವೃದ್ಧಿ ಕಾರ್ಯ ಕೂಡ ಮಾಡಲಾಗುವುದು ಎಂದು ತಿಳಿಸಿದರು.

ಅನ್‌ಲಾಕ್ ಬಳಿಕ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಳವಾಗಲಿದೆ. ಸೋಂಕು ಹರಡುವ ಸಾಧ್ಯತೆ ಕೂಡ ಇದೆ. ಹೀಗಾಗಿ, ನಾನು ಅಧಿಕಾರಿಗಳ ಜೊತೆ ಮಾತನಾಡಿ ಬೆಂಗಳೂರಿಗೆ ಬರುವವರಿಗೆ ಕಠಿಣ ಪರೀಕ್ಷೆ ಮಾಡಲು ಸೂಚಿಸುತ್ತೇನೆ. ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ದಿಗ್ವಿಜಯ ಸಿಂಗ್ ಆರ್ಟಿಕಲ್ 370 ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿದ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ತಿರುಕನ ಕನಸು ಕಾಣುವವರಿಗೆ ನಾನು ಏನೂ ಹೇಳೋದಿಲ್ಲ. ಅವರ ನಾಯಕತ್ವದ ಕೊರತೆಯಿಂದ ಪಕ್ಷ ಎಲ್ಲಿದೆ ಅನ್ನೋದು ಗೊತ್ತಿದೆ. ಕಾಂಗ್ರೆಸ್ ಪರಿಸ್ಥಿತಿ ಹೇಗಿದೆ ಅನ್ನೋದು ಎಲ್ಲರೂ ಗಮನಿಸಿದ್ದಾರೆ ಎಂದು ಟಾಂಗ್ ನೀಡಿದರು. ‌

ಖಾಸಗಿ ಶಾಲೆಗಳ ಫೀಸ್ ಕಡಿಮೆ ಮಾಡದ ವಿಚಾರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಮಾತನಾಡುತ್ತೇನೆ. ಆ ಬಗ್ಗೆ ಪರಿಶೀಲನೆ ಮಾಡಲು ಸೂಚಿಸುತ್ತೇನೆ ಎಂದರು.

RELATED TOPICS:
English summary :BSYediyurappa

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...