Thu,May16,2024
ಕನ್ನಡ / English

ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ - ಡಿಸಿಎಂ ಸ್ಪಷ್ಟನೆ | ಜನತಾ ನ್ಯೂಸ್

17 Jun 2021
1593

ಬೆಂಗಳೂರು : ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಮೊಟಕುಗೊಳಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

“ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೇ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ ಹೆಚ್ಚು ಒತ್ತು ನೀಡಲಾಗಿದೆ” ಎಂದಿದ್ದಾರೆ.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ, ಪದವಿ ಶಿಕ್ಷಣ ಸಂರಚನೆ ಹೀಗಿರುತ್ತದೆ. ಮೂರು ವರ್ಷ ವ್ಯಾಸಂಗ ಮಾಡಿದರೆ ಪದವಿ ಮುಗಿಯುತ್ತದೆ. ನಾಲ್ಕು ವರ್ಷ ಓದಿದರೆ ಅದನ್ನು "ಡಿಗ್ರಿ ಆನರ್ಸ್‌" ಎಂದು ಪರಿಗಣಿಸಲಾಗುತ್ತದೆ, ಮತ್ತೂ ಐದು ವರ್ಷ ವ್ಯಾಸಂಗ ಮಾಡಿದರೆ ಸ್ನಾತಕೋತ್ತರ ಪದವಿಯೇ ಪೂರ್ಣಗೊಳಿಸಿದಂತೆ ಆಗುತ್ತದೆ. ಇದು ಪೂರ್ವ ವ್ಯವಸ್ಥೆಯ ಸುಧಾರಣಾ ಕ್ರಮವಷ್ಟೇ ಎಂದು ಡಿಸಿಎಂ ವಿವರಿಸಿದ್ದಾರೆ.

ಈ ವಿಷಯ ಇನ್ನು ಕರಡು ತಯಾರಿಕೆ ಹಂತದಲ್ಲಿದೆ. ಈಗಲೇ ಅದರ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ. ಮುಖ್ಯವಾಗಿ ಪದವಿ ಶಿಕ್ಷಣದಲ್ಲಿ ಎರಡು ವರ್ಷ ಕನ್ನಡ ಬೋಧನೆ ಆಗುತ್ತಿರುವ ಹಾಲಿ ವ್ಯವಸ್ಥೆಯಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. ಮಾತೃಭಾಷೆ ಕಲಿಕೆಯನ್ನು ಒಂದು ವರ್ಷಕ್ಕೆ ಸೀಮಿತಗೊಳಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟವಾಗಿ ಪುನುರುಚ್ಛರಿಸಿದ್ದಾರೆ.

RELATED TOPICS:
English summary :Ashwath Narayan

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...