Thu,May09,2024
ಕನ್ನಡ / English

ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ರೂ 2000 ಕೋಟಿ ನೀರಾವರಿ ಕಿಕ್‍ಬ್ಯಾಕ್ ಆರೋಪ ಮಾಡಿದ್ದಾರೆ. ಈಗ ತನಿಖೆ ಯಾಕಿಲ್ಲ? | ಜನತಾ ನ್ಯೂಸ್

19 Jun 2021
1228

ಬೆಂಗಳೂರು : ಸರ್ಕಾರದ ವಿರುದ್ಧ ಸ್ವಪಕ್ಷೀಯರೇ ರೂ 2000 ಕೋಟಿ ನೀರಾವರಿ ಕಿಕ್‍ಬ್ಯಾಕ್ ಆರೋಪ ಮಾಡಿದ್ದಾರೆ. ಈಗ ತನಿಖೆ ಯಾಕಿಲ್ಲ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

2006ರಲ್ಲಿ ಸಿಎಂ ಆಗಿದ್ದ ನನ್ನ ವಿರುದ್ಧ ಬಿಜೆಪಿ ನಾಯಕರೇ ರೂ 150 ಕೋಟಿ ಗಣಿ ಲಂಚ ಆರೋಪ ಮಾಡಿದ್ದರು. ಸರ್ಕಾರದ ಪಾಲುದಾರ ಪಕ್ಷದವರೇ ದೂರಿದ್ದರಿಂದ ನಾನು ಅದನ್ನು ಲೋಕಾಯುಕ್ತಕ್ಕೆ ವಹಿಸಿ ಪಾರದರ್ಶಕತೆ ಕಾದುಕೊಂಡಿದ್ದೆ. ರಾಕ್ಷಸ ಸರ್ಕಾರವೊಂದನ್ನು ಕೆಡವಿ ಅತ್ಯಂತ ಸಜ್ಜನ, ಸ್ವಚ್ಛ ಸರ್ಕಾರವನ್ನು ಪ್ರತಿಷ್ಠಾಪಿಸಿದವರೇ ಈ ಆರೋಪ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು ಎಂದಿದ್ದಾರೆ.

ಮೇಕೆದಾಟು ಯೋಜನೆ ವಿಚಾರವಾಗಿ ಎನ್‌ಜಿಟಿ ದಕ್ಷಿಣ ಪೀಠ ಆರಂಭಿಸಿದ್ದ ಸ್ವಯಂ ಪ್ರೇರಿತ ವಿಚಾರಣೆಯನ್ನು ಪ್ರಧಾನ ಪೀಠ ಇತ್ಯರ್ಥಪಡಿಸಿದೆ. ಯೋಜನೆಗಿದ್ದ ಅಡ್ಡಿಯೊಂದು ನಿವಾರಣೆಯಾಗಿದೆ. ಈಗ ಕೇಂದ್ರದಿಂದ ಶೀಘ್ರವೇ ಅನುಮತಿ ಪಡೆದು ಯೋಜನೆ ಜಾರಿಗೊಳಿಸುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು. ಕೇಂದ್ರವೂ ಪರಿಸರ ಅನುಮತಿಯನ್ನು ಶೀಘ್ರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ-ರಾಜ್ಯದಲ್ಲಿ ಒಂದೇ ಸರ್ಕಾರ ಇದ್ದರೆ ಸ್ವರ್ಗ ಸೃಷ್ಟಿಯಾಗುವುದಾಗಿ ಬಿಜೆಪಿ ಹೇಳಿತ್ತು. ಸ್ವರ್ಗ ಬೇಡ, ಅನಿಶ್ಚಿತತೆಯಲ್ಲಿ ತೂಗುತ್ತಿರುವ ಮೇಕೆದಾಟು ಯೋಜನೆಗೆ ಪರಿಸರ ಅನುಮತಿಯನ್ನು ಶೀಘ್ರ ಪಡೆದುಕೊಂಡರೆ ಸಾಕು. ನಮ್ಮ ನೆಲ, ಜಲ, ಧನ ಬಳಸಿ ನಮ್ಮವರ ದಾಹ ನೀಗಿಸುವ ಯೋಜನೆ ವಿಚಾರದಲ್ಲಿ ಬಿಜೆಪಿ ಸರ್ಕಾರ ಇನ್ನು ನಿರ್ಲಕ್ಷ್ಯ ತೋರಬಾರದು ಎಂದು ಹೇಳಿದ್ದಾರೆ.

ಹೊಗೇನಕಲ್‌ ಕುಡಿಯುವ ನೀರಿನ ಯೋಜನೆ ವಿಚಾರದಲ್ಲಿ ತಮಿಳುನಾಡು ಯಾವ ರೀತಿ ನಡೆದುಕೊಂಡಿತು ಎಂದು ನಾನು ಹೇಳಬೇಕಿಲ್ಲ. ಆ ಯೋಜನೆ ಆಗಿದ್ದು ಸ್ಟ್ಯಾಲಿನ್ ಉಪಮುಖ್ಯಮಂತ್ರಿ ಆಗಿದ್ದ ಕಾಲದಲ್ಲೇ. ಕುಡಿಯುವ ನೀರಿನ ನೆಪವೊಡ್ಡಿ ತಮಿಳುನಾಡು ಕರ್ನಾಟಕದ ಗಡಿ ದಾಟಿ ಬಂದಿತ್ತು.ಸಮರ್ಥನೆಯನ್ನೂ ಮಾಡಿಕೊಂಡಿತ್ತು. ಮೇಕೆದಾಟು ಕೂಡ ಕುಡಿಯುವ ನೀರಿನ ಯೋಜನೆಯೇ ಎಂದು ಟ್ವಿಟ್ ಮಾಡಿದ್ದಾರೆ.

RELATED TOPICS:
English summary :HD Kumaraswamy

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...