ನೇಣು ಬಿಗಿದುಕೊಂಡು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ | ಜನತಾ ನ್ಯೂಸ್
ಕೋಲಾರ : ನೇಣು ಬಿಗಿದುಕೊಂಡು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಲಾರದ ಕೋಲಾರಮ್ಮ ಬಡಾವಣೆಯಲ್ಲಿ ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕಾವ್ಯಾ(23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾವ್ಯ ಮೃತ ದುರ್ದೈವಿ. 23 ವರ್ಷದ ಯುವತಿ ಕಾವ್ಯಾ, ಕೋಲಾರ ತಾಲೂಕು ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಆಗಿದ್ದರು. ಕೋಲಾರ ನಗರದ ಕೋಲಾರಮ್ಮ ಬಡಾವಣೆಯಲ್ಲಿ ವಾಸವಿದ್ದ ಕಾವ್ಯಾ, ನಿನ್ನೆ ರಾತ್ರಿ ನೇಣಿಗೆ ಕೊರಳೊಡ್ಡಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
RELATED TOPICS:
English summary :Kolar