ಪತ್ನಿ ಗೀತಾ ಹುಟ್ಟುಹಬ್ಬದ ಅಂಗವಾಗಿ ಸಂಕಷ್ಟದಲ್ಲಿರುವ ಸಿನಿ ಕಾರ್ಮಿಕರಿಗಾಗಿ 10 ಲಕ್ಷ ನೆರವು ನೀಡಿದ ಶಿವಣ್ಣ | ಜನತಾ ನ್ಯೂಸ್
ಬೆಂಗಳೂರು : ಸ್ಯಾಂಡಲ್ವುಡ್ ನಟ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್ರವರು ಸಂಕಷ್ಟದಲ್ಲಿರುವ ಸಿನಿಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ. ಕೊರೊನಾ ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಅನೇಕ ಸಿನಿಮಾ ಕಾರ್ಮಿಕರಿಗೆ ಡಾ. ಶಿವರಾಜ್ ಕುಮಾರ್ರವರು 10 ಲಕ್ಷ ರೂ. ಚೆಕ್ ನೀಡುವ ಮೂಲಕ ನೆರವು ನೀಡಿದ್ದಾರೆ.
ಗೀತಾ ಶಿವರಾಜ್ಕುಮಾರ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಶಿವರಾಜ್ಕುಮಾರ್ ಅವರು ಈ ಸಹಾಯ ಮಾಡಿದ್ದಾರೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂ. ನೀಡಲಾಗಿದೆ. ನಿರ್ಮಾಪಕ ಕೆ.ಪಿ. ಶ್ರೀಕಾಂತ್, ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಮುಂತಾದವರ ಸಮ್ಮುಖದಲ್ಲಿ ಚೆಕ್ ಹಸ್ತಾಂತರಿಸಲಾಯಿತು.
RELATED TOPICS:
English summary :Shivarajkumar