Sat,May18,2024
ಕನ್ನಡ / English

ಒಂದು ಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್ ನೀತಿ: ಡಿಸಿಎಂ ಡಾ.ಅಶ್ವತ್ಥ ನಾರಾಯಣ ಕಿಡಿ | ಜನತಾ ನ್ಯೂಸ್

25 Jun 2021
2288

ಬೆಂಗಳೂರು : ದೇಶದಲ್ಲಿ 60 ವರ್ಷಕ್ಕೂ ಹೆಚ್ಚು ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಪಕ್ಷ ಎಲ್ಲ ಜ್ವಲಂತ ಸಮಸ್ಯೆಗಳನ್ನು ಜೀವಂತವಾಗಿ ಇಡಲು ಪ್ರಯತ್ನ ಮಾಡಿತೇ ವಿನಾ ಅವುಗಳಿಗೆ ಪರಿಹಾರ ಕಂಡುಕೊಳ್ಳಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥ ನಾರಾಯಣ ಟೀಕಿಸಿದ್ದಾರೆ.

ಬಳ್ಳಾರಿ ಬಿಜೆಪಿ ಘಟಕ ಶುಕ್ರವಾರ ಹಮ್ಮಿಕೊಂಡಿದ್ದ ಈ-ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಮೋದಿ ಸರಕಾರದ 7 ವರ್ಷಗಳ ಸಾಧನೆ ವಿಷಯದ ಬಗ್ಗೆ ವರ್ಚುವಲ್ ಮೂಲಕ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಸಮಸ್ಯೆಗಳನ್ನು ನಿರಂತರವಾಗಿ ಬದುಕಿರುವಂತೆ ನೋಡಿಕೊಳ್ಳುತ್ತಿತ್ತು. ಆದರೆ, ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರ ಅಂಥ ಸಮಸ್ಯೆಗಳಿಗೆ ಚರಮಗೀತೆ ಹಾಡುತ್ತಾ ಬರುತ್ತಿದೆ ಎಂದರು.

ಒಂದು ಭಾರತ- ಎರಡು ರಾಷ್ಟ್ರ ಎನ್ನುವುದು ಕಾಂಗ್ರೆಸ್ ನೀತಿ. ಒಂದೇ ಭಾರತ-ಒಂದೇ ದೇಶ ಎನ್ನುವುದು ಬಿಜೆಪಿಯ ನೀತಿ. ಈ ಕಾರಣಕ್ಕಾಗಿಯೇ ಜಮ್ಮು ಮತ್ತು ಕಾಶ್ಮೀರಕ್ಕಿದ್ದ 370ನೇ ವಿಧಿಯನ್ನು ತೆಗೆಯಲಾಯಿತು. ಈಗ ಕಾಶ್ಮೀರವೂ ಭಾರತದ ಅಂತರ್ಭಾಗ. ಕಾಂಗ್ರೆಸ್‍ಗೆ ಇಂಥ ಇಚ್ಛಾಶಕ್ತಿ ಇರಲಿಲ್ಲ ಎಂದು ಅವರು ಕಿಡಿಕಾರಿದರು.

ಕೋವಿಡ್‌ ಸಂಕಷ್ಟ ಭಾರತಕ್ಕೆ ಬಂದಾಗ ಅದನ್ನೇ ಅವಕಾಶ ಮಾಡಿಕೊಂಡ ಮೋದಿ ಅವರು ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿ ಕೈಗಾರಿಕೆ, ಉತ್ಪಾದನೆ, ಉದ್ಯೋಗ ಸೃಷ್ಠಿಗೆ ಉತ್ತೇಜನ ನೀಡಿದರು.

ಕೇವಲ ಒಂದು ಪಿಪಿಇ ಕಿಟ್‌, ಮಾತ್ರೆ, ಔಷಧಿ, ಸ್ಯಾನಿಟೈಸರ್‌ ವಿಷಯದಲ್ಲಿ ಪರ ದೇಶಗಳ ಮೇಲೆ ಅವಲಂಭಿತವಾಗುತ್ತಿದ್ದ ಭಾರತವು ಕೇವಲ ಒಂದೂವರೆ ವರ್ಷದಲ್ಲೇ ಸಂಪೂರ್ಣ ಸ್ವಾವಲಂಭನೆ ಸಾಧಿಸಿತು.

ಲಸಿಕೆ ತಯಾರಿಕೆಯಲ್ಲಿ ಜಗತ್ತಿನ ಅಗ್ರಮಾನ್ಯ ದೇಶವಾಗಿ ಹೊರಹೊಮ್ಮಿತು. ಇದು ಭಾರತದ ಸಾಧನೆ ಎಂದು ಡಿಸಿಎಂ ಒತ್ತಿ ಹೇಳಿದರು.

RELATED TOPICS:
English summary :Ashwath Narayan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...