Wed,May15,2024
ಕನ್ನಡ / English

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2021 ದಿನಾಂಕ ಪ್ರಕಟಿಸಿದ ಸಚಿವ ಸುರೇಶ್ ಕುಮಾರ್ | ಜನತಾ ನ್ಯೂಸ್

28 Jun 2021
1940

ಬೆಂಗಳೂರು : ರಾಜ್ಯದ ಎಸ್‌ಎಸ್‌ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟಿಸಿದ ಸಚಿವ ಸುರೇಶ್ ಕುಮಾರ್, ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆಯಂತೆ ಜುಲೈ 19 ಮತ್ತು 22 ರಂದು ರಾಜ್ಯದ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯದಲ್ಲಿ ಕಳೆದ ವರ್ಷವೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿ ಪ್ರಶಂಸೆಗೆ ಒಳಗಾಗಿದ್ದೇವೆ. ಕಳೆದ ವರ್ಷ 8 ಲಕ್ಷ ಮಂದಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದರು. ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಕಳೆದ ವರ್ಷ 40 ಸಾವಿರ ಕೊಠಡಿಗಳನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಬಳಸಲಾಗಿತ್ತು.

ಈ ಬಾರಿ 73 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಆತ್ಮ ವಿಶ್ವಾಸ ಹೆಚ್ಚಿಸುವ ಸಲುವಾಗಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸುರೇಶ್ ಕುಮಾರ್ ಹೇಳಿದರು.

ಜುಲೈ 19ರಂದು(ಸೋಮವಾರ) ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಅದೇ ದಿನ ಮಧ್ಯಾಹ್ನ ಕಿರಿಯ ತಾಂತ್ರಿಕ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.
ಜುಲೈ 22ರಂದು (ಗುರುವಾರ) ಬೆಳಗ್ಗೆ 10.30ರಿಂದ 1.30ರ ತನಕ ಭಾಷಾ ವಿಷಯಗಳ (ಪ್ರಥಮ ಭಾಷೆ ಕನ್ನಡ, ಪ್ರಥಮ ಭಾಷೆ ಉರ್ದು, ಪ್ರಥಮ ಭಾಷೆ ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ, ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ, ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್) ಪರೀಕ್ಷೆ ನಡೆಯಲಿದೆ. ಅದೇ ದಿನ ಮಧ್ಯಾಹ್ನ NSQF ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

ಜೂನ್ 30 ರಿಂದ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಯಾವುದಾದರೂ ಮಗುವಿಗೆ ಪಾಸಿಟಿವ್​ ಇದ್ದರೂ ಪರೀಕ್ಷೆ ಬರೆಯುವ ಆಸೆ ಇದ್ದರೆ, ಹತ್ತಿರದ ಕೊವಿಡ್​ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗುವುದು. ಜತೆಗೆ, ಪರೀಕ್ಷೆ ಬರೆಯುವಾಗ ಯಾವುದಾದರೂ ರೋಗ ಲಕ್ಷಣಗಳಿದ್ದರೆ ಅವರಿಗೆ ಪ್ರತ್ಯೇಕ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು.

ಮಕ್ಕಳಿಗೆ ಎನ್​ 95 ಮಾಸ್ಕ್​ ಅಗತ್ಯವಿಲ್ಲ, ಉತ್ತಮ ಬಟ್ಟೆಯ ಮಾಸ್ಕ್​ ಸಾಕು ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಸ್ವಚ್ಛವಾದ ಬಟ್ಟೆಯ ಮಾಸ್ಕ್​ ಅಥವಾ ಸರ್ಜಿಕಲ್​ ಮಾಸ್ಕ್​ ಬಳಕೆ ಮಾಡಬಹುದು. ಯಾರಿಗಾದರೂ ರೋಗ ಲಕ್ಷಣಗಳಿದ್ದರೆ ಅವರಿಗೆ ಎನ್​95 ಕಡ್ಡಾಯ ಎಂದು ಸೂಚಿಸಿದ್ದಾರೆ.

ಕೊವಿಡ್​ ಕಾರಣಕ್ಕೆ ಯಾವುದಾದರೂ ವಿದ್ಯಾರ್ಥಿ ಪರೀಕ್ಷೆ ಬರೆಯಲಾಗದಿದ್ದರೆ ಅವರಿಗೆ ಮತ್ತೊಮ್ಮೆ ಪರೀಕ್ಷೆ ನೀಡಿ, ಹೊಸಬರೆಂದೇ ಪರಿಗಣಿಸಿ ಪರೀಕ್ಷೆ ಬರೆಸಲಾಗುವುದು ಇದರಲ್ಲಿ ಭಯಬೇಡ ಎಂದು ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪ್ರಶ್ನೆ ಪತ್ರಿಕೆ ಲೀಕ್ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬಾರದು. ಪ್ರಶ್ನೆ ಪತ್ರಿಕೆ ಸುರಕ್ಷತೆ, ಭದ್ರತೆ ಕುರಿತು ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಹೀಗಾಗಿ ಈ ಬಾರಿಯ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದರು.

RELATED TOPICS:
English summary :Suresh Kumar

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...