Sat,May11,2024
ಕನ್ನಡ / English

ಮಂಗಳೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್‌ ಜಾಲ: ಮತ್ತಿಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್​ | ಜನತಾ ನ್ಯೂಸ್

29 Jun 2021
2372

ಮಂಗಳೂರು : ಡ್ರಗ್ ಪೆಡ್ಲಿಂಗ್ ಪ್ರಕರಣ ಸಂಬಂಧ ಮತ್ತಿಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಈವರೆಗೆ ಒಂಬತ್ತು ಮಂದಿಯ ಬಂಧನವಾಗಿದೆ.

ವಿದೇಶದಿಂದ ಮಾದಕ ವಸ್ತುಗಳನ್ನು ತರಿಸಿ ರಾಜ್ಯದ ನಾನಾ ಕಡೆ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಬೆಂಗಳೂರಿನ ಬಿದರಹಳ್ಳಿಯಲ್ಲಿ ನೈಜೀರಿಯಾ ಮೂಲದ ಮತ್ತಿಬ್ಬರು ಆರೋಪಿಗಳನ್ನು ಜೂನ್ 28ರಂದು ಬಂಧಿಸಿದ್ದಾರೆ. ಈ ಮೂಲಕ ಸಿಂಥೆಟಿಕ್‌ ಡ್ರಗ್ಸ್‌ ಜಾಲದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಿದಂತಾಗಿದೆ.

ನೈಜಿರೀಯಾ ಪ್ರಜೆಗಳಾದ ಪೌಲ್‌ ಒಹಮೋಬಿ ಯಾನೆ ಇಫೆಚುಕು ಮತ್ತು ಉಚೆಚುಕು ಮಲಾಕಿ ಎಲಕ್ವಾಚಿ ಬಂಧಿತ ಆರೊಪಿಗಳು. ಇವರು ಬೆಂಗಳೂರನ್ನು ಕೇಂದ್ರವನ್ನಾಗಿಸಿ ನಾನಾ ಜಿಲ್ಲೆಗಳ ಜತೆ ವಹಿವಾಟು ನಡೆಸುವುದರ ಜತೆ ಮಂಗಳೂರು ಹಾಗೂ ಕೇರಳದ ನಾನಾ ಕಡೆಯ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ ದಂಧೆಯಲ್ಲಿ ತೊಡಗಿದ್ದರು.

ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಮಾತನಾಡಿ, ಬಂಧಿತ ನೈಜೀರಿಯಾ ಪ್ರಜೆಗಳು ವೀಸಾ ಅವಧಿ ಮುಗಿದ ಬಳಿಕವೂ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಇವರು ಈ ಹಿಂದೆ ಬಂಧಿತನಾದ ಡ್ರಗ್ ಪೆಡ್ಲರ್ ಕಾಸರಗೋಡು ಮೂಲದ ವ್ಯಕ್ತಿಯ ಸಂಪರ್ಕದಲ್ಲಿದ್ದರು‌.

ಬಂಧಿತ ನೈಜೀರಿಯಾ ಪ್ರಜೆಗಳು ವೀಸಾ ಅವಧಿ ಮುಗಿದ ಬಳಿಕವೂ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ವಿದ್ಯಾಭ್ಯಾಸ ಉದ್ದೇಶದಿಂದ ಬೆಂಗಳೂರಿಗೆ ಆಗಮಿಸಿದ್ದ ಇವರು, ಬಳಿಕ ಬೆಂಗಳೂರಿನಲ್ಲಿ ಟಿ ಶರ್ಟ್‌ ರಫ್ತು ಮಾಡುವ ಉದ್ಯೋಗದ ನೆಪದಲ್ಲಿ ರಾಜ್ಯದ ನಾನಾ ಜಿಲ್ಲೆಯ ಜತೆ ಸಂಪರ್ಕವಿಟ್ಟು ಡ್ರಗ್ಸ್‌ ವ್ಯವಹಾರವನ್ನೂ ನಡೆಸುತ್ತಿದ್ದರೆಂದು ತಿಳಿದು ಬಂದಿದೆ.

ಈ ಆರೋಪದ ಮೇಲೆ ಇವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಇವರ ವಿರುದ್ಧ ಬೇರೆ ಪ್ರಕರಣ ದಾಖಲಾಗಿದೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಬಂಧಿತರ ಬಗ್ಗೆ ಈಗಾಗಲೇ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

RELATED TOPICS:
English summary :Mangalore

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...