Sun,May12,2024
ಕನ್ನಡ / English

ಪ್ರಿಯಾಂಕಾ ಗಾಂಧಿ ವಾಡ್ರಾ ಭೇಟಿ ಮಾಡಿದ ಪಂಜಾಬ್ ಕಾಂಗ್ರೆಸ್ ಬಂಡಾಯ ನಾಯಕ ನವಜೋತ್ ಸಿಂಗ್ ಸಿಧು | ಜನತಾ ನ್ಯೂಸ್

30 Jun 2021
1630

ನವದೆಹಲಿ : ಪಂಜಾಬ್ ಕಾಂಗ್ರೆಸ್ ನ ಅತ್ರಪ್ತ ಬಣದ ನಾಯಕ ನವಜೋತ್ ಸಿಂಗ್ ಸಿಧು ನವದೆಹಲಿಯಲ್ಲಿ ಇಂದು ಬುಧವಾರ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಡ್ರಾರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಪಂಜಾಬ್ ಕಾಂಗ್ರೆಸ್ ನಲ್ಲಿನ ಬಂಡಾಯ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್‌ ಯೋಜಿಸುತ್ತಿದ್ದು, ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ಮಗಳು ಪ್ರಿಯಾಂಕ ಗಾಂಧಿ ಜೊತೆಗೆ ನವಜೋತ್ ಸಿಂಗ್‌ ಸಿಧು ಭೇಟಿಯು ಕಾಂಗ್ರೆಸ್ ವಲಯದಲ್ಲಿ ಮಹತ್ವದ್ದಾಗಿದೆ.

ಸುಮಾರು ಮೂರು ಗಂಟೆಗಳ ಕಾಲ ಇಬ್ಬರ ಸಭೆ ನಡೆದಿದೆ ಎಂದು ನವಜೋತ್ ಸಿಂಗ್ ಸಿಧು ಆಪ್ತ ಮೂಲಗಳು ತಿಳಿಸಿವೆ. "ಪ್ರಿಯಾಂಕಾ ಗಾಂಧಿ ಜೊತೆಗೆ ಸುದೀರ್ಘ ಸಭೆ ನಡೆಸಿದ್ದೇನೆ" ಎಂದು ಬರೆದು ಚಿತ್ರವೊಂದನ್ನು ನವಜೋತ್ ಸಿಂಗ್ ಟ್ವೀಟ್‌ ಮಾಡಿದ್ದಾರೆ.

ಮೊದಲು ಬಿಜೆಪಿಯಲ್ಲಿದ್ದ ಸಿಧು ಅಲ್ಲಿ ಬಂಡಾಯ ಎದ್ದು, ಕಾಂಗ್ರೆಸ್ ಸೇರಿದ್ದರು. ಇದೀಗ ಸಿಧು ಬಣದಿಂದ ಪಂಜಾಬ್ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಎದುರಾಗಿ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ. ಇದರ ಬೆನ್ನಲ್ಲೇ ಪಂಜಾಬ್‌ನ ಕಾಂಗ್ರೆಸ್‌ನ ನವಜೋತ್ ಸಿಂಗ್ ಸಿಧು ತಾವು ಹಿರಿಯ ನಾಯಕರನ್ನು ಭೇಟಿಯಾಗುವುದಾಗಿ ತಿಳಿಸಿದ್ದರು. ಆದರೆ, ಸಿಧು ಅವರನ್ನು ರಾಹುಲ್ ಗಾಂಧಿ ಭೇಟಿಯಾಗಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಸಿಧು ತಂಡವು ಸೋಮವಾರ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗುವುದಾಗಿ ಮಾಧ್ಯಮಗಳಿಗೆ ತಿಳಿಸಿತ್ತು. ಮಂಗಳವಾರ ಬೆಳಿಗ್ಗೆ ತಮ್ಮ ಪಟಿಯಾಲ ನಿವಾಸದಿಂದ ತೆರಳಿದ್ದರು. ಆದರೆ, ಯಾವುದೇ ಸಭೆ ನಡೆದಿರಲಿಲ್ಲ. "ಸಿಧು ಜೊತೆಗೆ ಯಾವುದೇ ಸಭೆ ನಡೆದಿಲ್ಲ" ಎಂದು ರಾಹುಲ್ ಮಂಗಳವಾರ ಮಾಧ್ಯಮಗಳಿಗೆ ತಿಳಿಸಿದ್ದರು.

ಈ ಸಭೆ ಪಕ್ಷದಲ್ಲಿ ಸಿಧು ಭವಿಷ್ಯದ ಮೇಲೆ ಹಾಗೆಯೇ ಆಡಳಿತರೂಡ ರಾಜ್ಯ ಕಾಂಗ್ರೆಸ್ ಭವಿಷ್ಯದ ಮೇಲೂ ಪರಿಣಾಮ ಬೀರಲಿದೆ. ಸಿಧು ಇತ್ತೀಚಿಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

English summary :Panjab rebel cong leader Sidhu meets Priyanka Gandhi Vadra

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...