ಎರಡು ಕಂದಮ್ಮಗಳ ಜೀವ ತೆಗೆದ ಜೋಕಾಲಿ? ಸಂಶಯಾಸ್ಪದ ಸಾವು! | ಜನತಾ ನ್ಯೂಸ್

01 Jul 2021
943

ಕೊಡಗು : ಜೋಕಾಲಿಯೇ ಉರುಳಾಗಿ ಎರಡು ಕಂದಮ್ಮಗಳ ಜೀವ ತೆಗೆದ ಮನಕಲಕುವ ದುರ್ಘನೆ ನಡೆದಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಉಂಜಿಗನಹಳ್ಳಿಯ ಕಾಂತರಾಜು ಮತ್ತು ಜಯಂತಿ ದಂಪತಿಯ ಮಕ್ಕಳಾದ 14 ವರ್ಷದ ಮಣಿಕ್ ಶಾ ಮತ್ತು 12 ವರ್ಷದ ಪೂರ್ಣೇಶ್ ದಾರುಣವಾಗಿ ಜೀವ ಬಿಟ್ಟಿದ್ದಾರೆ.

ಇಂದು ಸಂಜೆ ಮನೆಯಲ್ಲಿ ಇವರು ಇಬ್ಬರೇ ಇದ್ದರು. ಈ ವೇಳೆ ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಜೋಕಾಲಿ ಕೊರಳಿಗೆ ಉರುಳಾಗಿ ಸುತ್ತಿಕೊಂಡ ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ಪಕ್ಕದಲ್ಲಿರುವ ತಮ್ಮ ಅಜ್ಜಿ ಅಜ್ಜನ ಮನೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ತೋಟದಿಂದ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಕಾಂತರಾಜು ಮತ್ತು ಜಯಂತಿ ಇಬ್ಬರು ಕೂಲಿ ಕಾರ್ಮಿಕರಾಗಿದ್ದು, ಎಂದಿನಂತೆ ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೂಲಿಗೆ ಹೋಗಿದ್ದಾರೆ. ತಾತ ರಾಮಯ್ಯ ಕೂಡ ಕೂಲಿ ಮಾಡುವವರಾಗಿದ್ದು ಕೂಲಿಗೆ ಹೋಗಿದ್ದಾರೆ.

ಈ ವೇಳೆ ಅಕ್ಕ ತಮ್ಮ ಇಬ್ಬರು ತಮ್ಮ ಬೇಸರ ನೀಗಿಸಿಕೊಳ್ಳಲು ತಮ್ಮ ತಾಯಿಯ ಸೀರೆಯಿಂದ ಮನೆಯಲ್ಲೇ ಜೋಕಾಲಿ ಕಟ್ಟಿ ಆಟವಾಡಲು ಹೋಗಿದ್ದಾರೆ. ಆದರೆ ಅದೇ ಸೀರೆಯ ಜೋಕಾಲಿ ಇಬ್ಬರ ಕೊರಳಿಗೆ ಸುತ್ತಿಕೊಂಡಿದೆ. ಕೊರಳಿಗೆ ಸುತ್ತಿಕೊಳ್ಳುತ್ತಿದ್ದಂತೆ ಆತಂಕಕ್ಕೆ ಒಳಗಾದ ಮಕ್ಕಳು ಒದ್ದಾಡಿರಬಹುದಾದ ಸಾಧ್ಯತೆ ಇದೆ ಎನ್ನಲಾಗಿದೆ. ಜೊತೆಗೆ ಯಾರು ಮನೆಯಲ್ಲಿ ಇಲ್ಲದಿದ್ದರಿಂದ ಉಸಿರುಗಟ್ಟಿ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ತಂದೆ ತಾಯಿಗಳು ಮನೆಗೆ ಬರುವುದಕ್ಕೂ ಮೊದಲೇ ತಾತ ರಾಮಯ್ಯ ಕೂಲಿ ಮುಗಿಸಿಕೊಂಡು ಮನೆಗೆ ಬಂದು ದಾರುಣ ಘಟನೆಯನ್ನು ನೋಡಿದ್ದಾರೆ. ಈ ವೇಳೆ ಇಬ್ಬರು ಮಕ್ಕಳ ಕೊರಳಿಗೆ ಸೀರೆ ಸುತ್ತಿಕೊಂಡು ನೇಣು ಬಿಗಿದ ಸ್ಥಿತಿಯಲ್ಲಿ ಕಾಣಿಸಿದ್ದಾರೆ. ಈ ಹೃದಯ ವಿದ್ರಾವಕ ದೃಶ್ಯವನ್ನು ಕಂಡ ತಾತ ರಾಮಯ್ಯ ಕೂಗಾಡುತ್ತಲೇ ಎಚ್ಚೆತ್ತುಕೊಂಡು ತಕ್ಷಣವೇ ಕುಡುಗೋಲಿನಿಂದ ಮಕ್ಕಳ ಕೊರಳಿಗೆ ಸುತ್ತಿಕೊಂಡಿದ್ದ ಸೀರೆಯನ್ನು ತುಂಡರಿಸಿದ್ದಾರೆ.

ಮನೆಯೊಳಗೆ ಜೋಕಾಲಿ ಕಟ್ಟಿಕೊಂಡು ಆಟವಾಡುತ್ತಿದ್ದರು. ಜೋಕಾಲಿ ಕುತ್ತಿಗೆಗೆ ಸುತ್ತಿಕೊಂಡು ಮೃತಪಟ್ಟಿದ್ದಾರೆ ಎಂದು ಗಿರೀಶ್ ಅವರು ಸೋಮವಾರಪೇಟೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Kodagu

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...