Fri,May17,2024
ಕನ್ನಡ / English

ತಾವು ಗೆದ್ದರೆ ಪ್ರತಿವರ್ಷ ಹೊಸ ಮುಖ್ಯಮಂತ್ರಿ - ಉತ್ತರ ಪ್ರದೇಶ ಚುನಾವಣೆ ಕುರಿತು ಎಸ್‌ಬಿಎಸ್‌ಪಿ ಅಧ್ಯಕ್ಷ | ಜನತಾ ನ್ಯೂಸ್

01 Jul 2021
1521

ಲಕ್ನೋ : ಉತ್ತರ ಪ್ರದೇಶ(ಯುಪಿ) ವಿಧಾನಸಭಾ ಚುನಾವಣೆಯ ಮುನ್ನ ರಾಷ್ಟೀಯ ಪಕ್ಷಗಳು ಸೇರಿದಂತೆ ಸ್ಥಳೀಯ ಪಕ್ಷಗಳು ಸಾಕಷ್ಟು ರಾಜಕೀಯ ಕಸರತ್ತು ನಡೆಸುತ್ತಿದೆ. ಹಿಂದೆದು ಕೇಳರಿಯದ ರೀತಿಯಲ್ಲಿ, ಸುಹೇಲ್-ದೇವ್ ಭಾರತೀಯ ಸಮಾಜ ಪಕ್ಷದ(ಎಸ್‌ಬಿಎಸ್‌ಪಿ) ಅಧ್ಯಕ್ಷ ಓಂ ಪ್ರಕಾಶ್ ರಾಜ್‌ಭರ್ ಯುಪಿಗೆ ವಿಚಿತ್ರವಾದ ಅಧಿಕಾರ ಹಂಚಿಕೆ ಸೂತ್ರವನ್ನು ತಂದಿದ್ದಾರೆ.

ಇಲ್ಲಿಯ ವರೆಗೆ ಮೈತ್ರಿ ಸರ್ಕಾರದಲ್ಲಿ 50:50 ಅಂದರೆ 2.5ವರ್ಷಗಳ ಸಿಎಂ ಸ್ಥಾನ ಹಂಚಿಕೆ ನಡೆದಿದೆ, ಆದರೆ ಇದೀಗ ಅಧಿಕಾರಕ್ಕಾಗಿ ಒಬ್ಬ ಮುಖ್ಯಮಂತ್ರಿ ಅವಧಿಯನ್ನು ಕೇವಲ 1 ವರ್ಷಕ್ಕೆ ಸ್ಥಿಮಿತಗೊಳಿಸುವ ಹೊಸ ಯೋಜನೆಯನ್ನು ರಾಜ್‌ಭರ್ ಮುಂದಿಟ್ಟಿದ್ದಾರೆ.

ಮುಂದಿನ ವರ್ಷದ ಯುಪಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ 10 ಪಕ್ಷಗಳ "ಭಾಗಿದಾರಿ ಸಂಕಲ್ಪ ಮೋರ್ಚಾ" ಗೆದ್ದರೆ, "ಪ್ರತಿವರ್ಷ ಹೊಸ ಮುಖ್ಯಮಂತ್ರಿ ಇರುತ್ತಾರೆ, ಬೇರೆ ಜಾತಿಯನ್ನು ಪ್ರತಿನಿಧಿಸುತ್ತಾರೆ" ಎಂದು ಉತ್ತರ ಪ್ರದೇಶದ ಮಾಜಿ ಕ್ಯಾಬಿನೆಟ್ ಸಚಿವರಾದ ರಾಜ್‌ಭರ್ ಹೇಳಿದ್ದಾರೆ.

ಚುನಾವಣೆಯಲ್ಲಿ ಆರಾಮದಾಯಕ ಗೆಲುವು ಸಾಧಿಸುವುದಾಗಿ, ಭಗಿದಾರಿ ಸಂಕಲ್ಪ ಮೋರ್ಚಾದ ಸಾಮರ್ಥ್ಯದ ಬಗ್ಗೆಯೂ ಅವರು ವಿಶ್ವಾಸ ವ್ಯಕ್ತಪಡಿಸಿದರು. 2017ರ ಯುಪಿ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಬಿಎಸ್‌ಪಿ ಬಿಜೆಪಿಯೊಂದಿಗೆ ಕೈಜೋಡಿಸಿ 8 ಸ್ಥಾನಗಳಿಗೆ ಸ್ಪರ್ಧಿಸಿತ್ತು. ಅದರಲ್ಲಿ, ಎಸ್‌ಬಿಎಸ್‌ಪಿ 4 ಸ್ಥಾನಗಳಲ್ಲಿ ಜಯ ದಾಖಲಿಸಿದ್ದು, ಶೇಕಡಾ 0.7 ರಷ್ಟು ಮತಗಳನ್ನು ಗಳಿಸಿತ್ತು.

"ಬಡ ಮತ್ತು ದೀನ ದಲಿತರಲ್ಲಿರುವ ಪ್ರತಿಯೊಂದು ಪ್ರಮುಖ ಜಾತಿ ಗುಂಪುಗಳು ಅಧಿಕಾರದಲ್ಲಿ ಪಾಲು ಪಡೆಯುವುದನ್ನು ನಾನು ಖಚಿತಪಡಿಸುತ್ತೇನೆ. ಎಲ್ಲಾ ಹುದ್ದೆಗಳನ್ನು ನಾನೇ ಹಿಡಿದಿಡಲು ಮತ್ತು ಇತರರನ್ನು ವಂಚಿಸಲು ನಾನು ಆಸಕ್ತಿ ಹೊಂದಿಲ್ಲ", ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಕಳೆದ ವರ್ಷದ ಲೋಕಸಭಾ ಚುನಾವಣೆಯವರೆಗೂ ಎಸ್‌ಬಿಎಸ್‌ಪಿ ಆಡಳಿತಾರೂಡ ಬಿಜೆಪಿಯ ಮಿತ್ರಪಕ್ಷವಾಗಿತ್ತು ಎಂದು ಇದನ್ನು ನೆನಪಿಸಿಕೊಳ್ಳಬಹುದು. ಆದಾಗ್ಯೂ, ಇದು ಈಗ 2022ರ ಯುಪಿ ಚುನಾವಣೆಯಲ್ಲಿ ಮೋರ್ಚಾ ಆಗಿ ಚುನಾವಣೆ ಎದುರಿಸಲಿದೆ.

ಅಸದುದ್ದೀನ್ ಒವೈಸಿ ಯವರ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್ ಮುಸ್ಲೀಮೀನ್ (ಎಐಐಎಂಐಎಂ) ಪಕ್ಷದೊಂದಿಗೆ ಸೀಟು ಹಂಚಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಆವರು, ಯುಪಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ)ವನ್ನು ಎದುರಿಸಲು ಅವರ ಸನ್ನದ್ಧತೆಯನ್ನು ನಿರ್ಣಯಿಸಿದ ನಂತರ ಮುಂದಿನ ದಿನಗಳಲ್ಲಿ "ಭಾಗಿದಾರಿ ಮೋರ್ಚಾ" ಅದರ ಬಗ್ಗೆ ಚರ್ಚೆ ನಡೆಸಲಿದೆ, ಎಂದು ಹೇಳಿದರು.

RELATED TOPICS:
English summary :Every year new CM if we win - SBSP president says on UP election

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...