Tue,May14,2024
ಕನ್ನಡ / English

ಅಪ್ರಾಪ್ತ ಬಾಲಕಿಯನ್ನು ವೇಶ್ಯಾವಾಟಿಕೆಗೆ ದೂಡಿದ ಪರಿಚಿತ ಮಹಿಳೆ​! ಹೆತ್ತವರ ಸಾಥ್​ | ಜನತಾ ನ್ಯೂಸ್

02 Jul 2021
2027

ಚಿಕ್ಕಬಳ್ಳಾಪುರ : 14 ವರ್ಷದ ಬಾಲಕಿಯನ್ನ ಪರಿಚಿತ ಮಹಿಳೆಯೊಬ್ಬಳು ವೇಶ್ಯಾವಾಟಿಕೆಗೆ ದೂಡಿದ್ದು, ಆಕೆ ಈಗ 4 ತಿಂಗಳ ಗರ್ಭಿಣಿ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಂಚೇನಹಳ್ಳಿ ಗ್ರಾಮವೊಂದರ 14 ವರ್ಷದ ಬಾಲಕಿ ದಲಿತ ಸಮುದಾಯಕ್ಕೆ ಸೇರಿದ್ದು, ಈಕೆಯ ತಂದೆ-ತಾಯಿ ಕುಡಿತ ಚಟ ಅಂಟಿಸಿಕೊಂಡಿದ್ದರು. ತಂದೆ-ತಾಯಿ ನಡುವೆ ಮನೆಯಲ್ಲಿ ಜಗಳ ಮಾಮೂಲಿಯಾಗಿತ್ತು. ಈ ಗ್ರಾಮಕ್ಕೆ ಸಂಬಂಧಿಕರ ಮನೆಗೆಂದು ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಗೌರಿ ಎಂಬಾಕೆ ಬರುತ್ತಿದ್ದಳು.

ಬಾಲಕಿಯ ಪಾಲಕರು ಕುಡಿದ ಅಮಲಿನಲ್ಲಿ ಕಿತ್ತಾಡುವುದನ್ನೇ ಬಂಡವಾಳ ಮಾಡಿಕೊಂಡ ಗೌರಿ, ಬಾಲಕಿಯನ್ನ ಪುಸಲಾಯಿಸಿ ತನ್ನ ಬಲೆಗೆ ಬೀಳಿಸಿಕೊಂಡಿದ್ದಾಳೆ.

ನಂತರ ಬೇರೆಯವರೊಂದಿಗೆ ಮಲಗಿದರೆ ಹಣ ಸಿಗುತ್ತೆ ಎಂದು ಬಾಲಕಿಯ ತಲೆಕೆಡಿಸಿದ ಗೌರಿ, ಪುರುಷರೊಂದಿಗೆ ಬಿಟ್ಟಿದ್ದಾಳೆ. ಹೀಗೆ ಐದಾರು ತಿಂಗಳಿಂದ ನಿರಂತರವಾಗಿ ಗ್ರಾಮದ ಆರೇಳು ಮಂದಿ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಗೌರಿ ಆ ವೇಳೆ ಬಾಲಕಿಗೆ 200ರಿಂದ 300 ರೂಪಾಯಿ ಕೊಡುತ್ತಿದ್ದಳಂತೆ. ಆ ಹಣದಲ್ಲಿ ಆಕೆಯ ಅಪ್ಪ-ಅಮ್ಮ ಸ್ವಲ್ಪ ಪಡೆದು, ಉಳಿದದ್ದನ್ನು ಬಾಲಕಿಗೆ ಕೊಡುತ್ತಿದ್ದರು.

ಬಾಲಕಿಯ ತಾಯಿಗೆ ಕರೊನಾ ಬಂದಿದ್ದ ಕಾರಣ ಮುದುಗೆರೆ ಗ್ರಾಮದ ಸಂಬಂಧಿಕರೊಬ್ಬರ ಮನೆಗೆ ಬಾಲಕಿಯನ್ನು ಪಾಲಕರು ಕಳುಹಿಸಿದ್ದರು. ಅಲ್ಲಿ ವಾಂತಿ ಮಾಡಿಕೊಳ್ಳುತ್ತಿದ್ದ ಬಾಲಕಿಯನ್ನ ಆಶಾ ಕಾರ್ಯಕರ್ತೆಯರು ಪರಿಶೀಲಿಸಿದ್ದು, ಆ ವೇಳೆ ಬಾಲಕಿ ವೇಶ್ಯಾವಾಟಿಕೆ ದಂಧೆ ಬಗ್ಗೆ ಬಾಯ್ಬಿಟ್ಟಿದ್ದಾಳೆ.

ಸದ್ಯ ಬಾಲಕಿಯನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಾಲಕಿ ಕೊಟ್ಟ ದೂರಿನಂತೆ ಆರೋಪಿಗಳಾದ ಗೌರಿ ದೊಡ್ಡಬ್ಯಾಲ, ಮೂರ್ತಿ, ಬಶೀರ್, ದೇವಾ, ವಿನೂದ್ ಎಂಬುವವರ ವಿರುದ್ಧ ಕೇಸ್​ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

RELATED TOPICS:
English summary :Chikkaballapura

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...