Sun,May19,2024
ಕನ್ನಡ / English

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜಯವಾಗಲಿ ಎಂಬ ಜೈಕಾರ | ಜನತಾ ನ್ಯೂಸ್

02 Jul 2021
1994

ದಾವಣಗೆರೆ : "ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜೈ" ಎಂಬ ಘೋಷಣೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಕೇಳಿ ಬಂದಿದೆ.

ಹರಿಹರ ಶಾಸಕ ಎಸ್. ರಾಮಪ್ಪನವರ ಮಗಳ ಮದುವೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆಗಮಿಸಿದ್ದರು. ಕಲ್ಯಾಣ ಮಂಟಪಕ್ಕೆ ಸಿದ್ದರಾಮಯ್ಯ ಬರುತ್ತಿದ್ದಂತೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜಯವಾಗಲಿ ಎಂದು ಅಭಿಮಾನಿಗಳು ಜೈಕಾರ ಕೂಗಿದರು.

ಹರಿಹರದಲ್ಲಿ ಕಾರು ಇಳಿಯುತ್ತಿದ್ದಂತೆ ಕೆಲವರು ಮುಂದಿನ ಮುಖ್ಯಮಂತ್ರಿ ಘೋಷಣೆ ಹಾಕಿರುವುದು ಕುತೂಹಲ ಕೆರಳಿಸಿದೆ. ಇನ್ನು ಮೊದಲಿನಿಂದಲೂ ಸಿದ್ದರಾಮಯ್ಯಗೆ ರಾಮಪ್ಪ ಆಪ್ತರು. ಈ ಹಿನ್ನೆಲೆಯಲ್ಲಿ ರಾಮಪ್ಪ ಮಗಳ ವಿವಾಹಕ್ಕೆ ಸಿದ್ದರಾಮಯ್ಯ ಆಗಮಿಸಿ ವಧು- ವರರನ್ನು ಆಶೀರ್ವದಿಸಿದರು.

ರಾಜ್ಯ ಸರ್ಕಾರ ಕೇವಲ 40 ಮಂದಿ ಮಾತ್ರ ಕೋವಿಡ್ ಮಾರ್ಗಸೂಚಿ ಪಾಲಿಸಿ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದೆ.

ಆದರೆ ರಾಮಪ್ಪ ಪುತ್ರಿಯ ವಿವಾಹದಲ್ಲಿ ಯಾವ ಕೋವಿಡ್ ಮಾರ್ಗಸೂಚಿ ಪಾಲಿಸಲಿಲ್ಲ. ಸಾಮಾಜಿಕ ಅಂತರ ಇರಲಿಲ್ಲ. ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ನೂಕುನುಗ್ಗಲು ಹೆಚ್ಚಾಯಿತು.

ಜಿಲ್ಲೆಯ ಮಾಜಿ ಸಚಿವರು, ಮುಖಂಡರು, ಕಾರ್ಯಕರ್ತರು ಸಿದ್ದರಾಮಯ್ಯ ವೇದಿಕೆಗೆ ಬರುತ್ತಿದ್ದಂತೆ ಮುಗಿಬಿದ್ದರು. ತಳ್ಳಾಟ, ನೂಕಾಟವೂ ಆಯ್ತು. ಇದೇ ವೇಳೆಯಲ್ಲಿ ಕೆಲವರು ಸೆಲ್ಫೀ ತೆಗೆದುಕೊಳ್ಳಲು ಸಹ ಮುಂದಾದರು. ರಾಜಕಾರಣಿಗಳಿಗೆ ಕೋವಿಡ್ ಮಾರ್ಗಸೂಚಿ ಅನ್ವಯ ಆಗುವುದಿಲ್ಲವೇ? ಎಂಬ ಪ್ರಶ್ನೆ ಜನರಲ್ಲಿ ಎದ್ದಿದೆ ? ಮದುವೆಯಲ್ಲಿ ಜನಪ್ರತಿನಿಧಿಗಳು ಕೋವಿಡ್ ನಿಯಮಾವಳಿಯನ್ನು ಗಾಳಿಗೆ ತೂರಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

RELATED TOPICS:
English summary :Siddaramaiah

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...