Wed,May15,2024
ಕನ್ನಡ / English

ಪತ್ನಿಯನ್ನು ಕೊಲೆ ಮಾಡಿ ಸ್ಟ್ರೋಕ್ ಎಂದು ಬಿಂಬಿಸಿ ತಪ್ಪಿಸಿಕೊಳ್ಳುಲು ಯತ್ನಿಸಿದ ಪತಿ ಅರೆಸ್ಟ್ | ಜನತಾ ನ್ಯೂಸ್

04 Jul 2021
2438

ಬೆಂಗಳೂರು : ಕುಡಿದ ನಶೆಯಲ್ಲಿ ಪತ್ನಿಯನ್ನು ಕೊಲೆಗೈದು ಸ್ಟ್ರೋಕ್​ದಿಂದ ಸಾವನ್ನಪ್ಪಿದ್ದಾಳೆಂದು ನಾಟಕವಾಡಿದ್ದ ಪತಿರಾಯನ ಅಸಲಿ ಬಣ್ಣ ಬಯಲಾಗಿದೆ. ಆರೋಪಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಅಜಿತ್ ಹಾಗೂ ಸಾನಿಯಾ ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಇಬ್ಬರು ಅನ್ಯೋನ್ಯವಾಗಿದ್ದರು. ಆದರೆ ಕೆಲ ತಿಂಗಳಿನಿಂದ ಆರೋಪಿ ಕುಡಿದು ಬಂದು ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯೊಂದಿಗೆ ಜಗಳವಾಡುತ್ತಿದ್ದ.

ಕಳೆದ ತಿಂಗಳು ಮೇ 29ರಂದು ಸಹ ದಂಪತಿ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ಮನೆಯಲ್ಲಿದ್ದ ದೊಣ್ಣೆಯಿಂದ ಸಾನಿಯಾ ತಲೆಗೆ ಬಲವಾಗಿ ಹೊಡೆದು ಅಜಿತ್​ ಮಾರಣಾಂತಿಕ ಹಲ್ಲೆ ನಡೆಸಿದ್ದ. ತೀವ್ರ ಗಾಯಗೊಂಡು ಕುಸಿದು ಬಿದ್ದ ಪತ್ನಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾನೆ.

ಜೂ.29ರಂದು ಪತಿ ಅಜಿತ್, ಸಾನಿಯಾ ಮಧ್ಯೆ ಜಗಳ ನಡೆದಿತ್ತು. ಜಗಳದ ವೇಳೆ ಅಜಿತ್ ತನ್ನ ಪತ್ನಿ ತಲೆಗೆ ಬಲವಾಗಿ ಹೊಡೆದಿದ್ದ. ಬಳಿಕ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಸ್ಟ್ರೋಕ್ ಎಂದಿದ್ದ. ಸಾನಿಯಾ ಅಂತ್ಯಕ್ರಿಯೆಗೆ ಬಂದಿದ್ದ ತಾಯಿಗೆ ಈ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಮೈಕೋಲೇಔಟ್ ಪೊಲೀಸರಿಗೆ ಮಾಹಿತಿ ನೀಡಿ ದೂರು ದಾಖಲಿಸಿದ್ದರು.

ಮರಣೋತ್ತರ ಪರೀಕ್ಷೆಯಲ್ಲಿ ಕೊಲೆಯಾಗಿದ್ದಾಗಿ ಮಾಹಿತಿ ಸಿಕ್ಕಿದೆ. ಬಳಿಕ ಪತಿ ಅಜಿತ್ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ಕೃತ್ಯ ನಡೆದಿರುವುದು ಬಯಲಾಗಿದೆ.

ಈ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಸಂಗತಿ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED TOPICS:
English summary :Bangalore

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...