ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ | ಜನತಾ ನ್ಯೂಸ್
ತುಮಕೂರು : ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಶಿರಾ ನಗರದ ಹೊರ ವಲಯದಲ್ಲಿ ನಡೆದಿದೆ.
ಸಾದಿಕ್ ಕೊಲೆಯಾದ ವ್ಯಕ್ತಿ. ಶಿರಾ ಬೈಪಾಸ್ ರಸ್ತೆ ಸೇರುವ ಪ್ರದೇಶದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ 28 ವರ್ಷ ವಯಸ್ಸಿನ ಸಾದಿಕ್ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕೃತ್ಯ ನಡೆದಿದೆ ಎನ್ನಲಾಗಿದೆ . ಅಪರಿಚಿತ ಯುವಕರ ಗುಂಪಿನಿಂದ ಸಾದಿಕ್ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Bangalore