Sun,May19,2024
ಕನ್ನಡ / English

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ಪ್ರತಿಭಟನೆ ಕುರಿತು ಪತ್ರಿಕಾಗೋಷ್ಠಿ | ಜನತಾ ನ್ಯೂಸ್

08 Jul 2021
3123

ಬೆಂಗಳೂರು : 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ, ಎಲ್ಲರಿಗೂ ಉಚಿತ ವ್ಯಾಕ್ಸೀನ್, ಎನ್.ಪಿ.ಎಸ್ ರದ್ದುಗೊಳಿಸಿ ನಿಶ್ಚಿತ ಪಿಂಚಣಿ ವ್ಯವಸ್ಥೆ, ಖಾಲಿ ಹುದ್ದೆಗಳ ಭರ್ತಿ ಇತರೆ ಬೇಡಿಕೆಗಳಿಗಾಗಿ ಒತ್ತಾಯಿಸಿ ರಾಷ್ಟ್ರ ಮಟ್ಟದ ಪ್ರತಿಭಟನಾ ದಿನಾಚರಣೆ ದಿನಾಂಕ: 15.07.2021, ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ಪ್ರತಿಭಟನೆ ನಡೆಸಲು ಕರೆ ನೀಡಿದೆ, ಎಂದು ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಒಕ್ಕೂಟದ ಪಧಾದಿಕಾರಿಗಳು ತಿಳಿಸಿದ್ದಾರೆ.

ದೇಶದಾದ್ಯಂತ ಕೋವಿಡ್-19 ರೋಗಾಣು ಹರಡುವಿಕೆಯ ಎರಡನೇ ಅಲೆಯಲ್ಲಿ ಲಕ್ಷಾಂತರ ಜನರು ಸಾವನ್ನಪಿದ್ದಾರೆ. ಕರ್ನಾಟಕದಲ್ಲಿ ಕೂಡ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಅನೇಕ ಫ್ರಂಟ್ ಲೈನ್ ಕೆಲಸಗಾರರು, ನೌಕರರು ಮತ್ತು ಶಿಕ್ಷಕರು ಈ ಖಾಯಿಲೆಗೆ ತುತ್ತಾಗಿದ್ದಾರೆ.

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ, ಅನೇಕ ವರ್ಷಗಳಿಂದ ಹುದ್ದೆಗಳ ಕಡಿತ, ಹುದ್ದೆಗಳ ರದ್ಧತಿ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದು, ಇಲಾಖೆಯ ಕೆಲಸ ಕಾರ್ಯಗಳನ್ನು ಖಾಸಗಿಯವರಿಗೆ ವಹಿಸುವುದು, ನಡೆದೇ ಇದೆ. ಇಂತಹ ಆಘಾತಕಾರಿ ಆಡಳಿತ ಸುಧಾರಣೆ ಹಾಗೂ ವೆಚ್ಚಗಳ ಕಡಿತದ ನೀತಿಯಿಂದಾಗಿ ಇಂದು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು 2.80ಲಕ್ಷ ಹುದ್ದೆಗಳು ಖಾಲಿ ಇಡಲಾಗಿದೆ. ಇಂದು ಒಟ್ಟು ಸುಮಾರು 60 ಲಕ್ಷಗಳಷ್ಟು ಸರ್ಕಾರಿ ಹುದ್ದೆಗಳು ದೇಶಾದ್ಯಂತ ಖಾಲಿ ಇವೆ ಎಂದು ಅಂದಾಜಿಸಲಾಗಿದೆ. ಸೇವೆಗಳ ಖಾಸಗೀಕರಣ ಇನ್ನಷ್ಟು ತೀವ್ರಗೊಳಿಸಲು ಈಗ 2ನೇ ಆಡಳಿತ ಸುಧಾರಣಾ ಆಯೋಗವನ್ನು ನಿವೃತ್ತ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿದೆ.

ಈಗಾಗಲೇ 2006ರ ನಂತರ ನೇಮಕಾತಿ ಹೊಂದಿದ ಖಾಯಂ ನೌಕರರ ಪಿಂಚಣಿ ಖಾಸಗೀಕರಣವಾಗಿದ್ದು, ನಿಶ್ಚಿತ ಪಿಂಚಣಿಯನ್ನು ಕಳೆದುಕೊಂಡಿದ್ದಾರೆ. ಜೂಜಾಟದ ಶೇರು ಮಾರುಕಟ್ಟೆಯ ಅವಲಂಬಿತ ಪಿಂಚಣಿ, ಅನಿಶ್ಚಿತ ಹಾಗೂ ಅಪೂರ್ಣವಾಗಿರುವುದನ್ನು ನಾವು ಈಗಾಗಲೇ ಕಾಣುತ್ತಿದ್ದೇವೆ. ಈಗಾಗಲೇ ಕೆಲವು ಓPS ನೌಕರರು ನಿವೃತ್ತರಾಗಿದ್ದು, ಅವರಿಗೆ ರೂ. 600 ರಿಂದ ರೂ.2,000 ದವರೆಗೆ ಪಿಂಚಣಿ ದೊರೆಯುತ್ತಿದೆ. ಇನ್ನು ಕೆಲವು ಮೃತರ ಕುಟುಂಬಗಳಿಗೆ ಕುಟುಂಬ ಪಿಂಚಣಿ ಇಲ್ಲವೇ ಇಲ್ಲ. ಇದರಿಂದಾಗಿ ಅನೇಕ ನಿವೃತ್ತ ನೌಕರರು ಹಾಗೂ ಕುಟುಂಬಗಳು ಬೀದಿಗೆ ಬಿದ್ದಿವೆ.
ಸರ್ಕಾರವೇ ಮನಸೋ ಇಚ್ಚೆಯಂತೆ ನೌಕರರ ತುಟ್ಟಿ ಭತ್ಯೆಯನ್ನು ದಿನಾಂಕ:01.01.2020 ರಿಂದ 30.06.2021 ರವರೆಗಿನ 18 ತಿಂಗಳ ತುಟ್ಟಿ ಭತ್ಯೆಯನ್ನು ಹಿಡಿದು ಮುಟ್ಟುಗೋಲು ಹಾಕಿಕೊಂಡಿವೆ.
ಇತ್ತೀಚಿನ ದಿನಗಳಲ್ಲಿ ನೌಕರರ ಕೆ.ಸಿ.ಎಸ್.ಆರ್, ನಡತೆ ನಿಯಮಗಳನ್ನು ತಿದ್ದುಪಡಿ ಮಾಡಿ ಅವರ ಎಲ್ಲ ಪ್ರಜಾಪ್ರಭುತ್ವ ಹಕ್ಕುಗಳನ್ನು ಮೊಟಕುಗೊಳಿಸಿದ್ದಲ್ಲದೇ ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿ ನೌಕರರ ದಕ್ಷತೆಯ ನೆಪದಲ್ಲಿ ನೌಕರರನ್ನು 50 ವರ್ಷಗಳ ವಯಸ್ಸಿನ ನಂತರ ಅವರ ದಕ್ಷತೆಯ ಅನುಗುಣವಾಗಿ, ಅವರಿಗೆ ಕಡ್ಡಾಯ ನಿವೃತ್ತಿ ಮಾಡುವ ಬಗ್ಗೆ ಅಧಿಕೃತ ಜ್ಞಾಪನ ಹೊರಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಕರೆಯ ಮೇರೆಗೆ ದಿನಾಂಕ:15.07.2021 ರಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಊಟದ ವಿರಾಮದಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.

RELATED TOPICS:
English summary :Karnataka State employee union press meet

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...