Tue,May14,2024
ಕನ್ನಡ / English

ಬೆಂಗಳೂರಿನಲ್ಲಿ 2 ಸಾವಿರ ಮನೆಗಳ ಮೇಲೆ ದಾಳಿ, 1500 ರೌಡಿಗಳು ವಶಕ್ಕೆ. | ಜನತಾ ನ್ಯೂಸ್

10 Jul 2021
3397

ಬೆಂಗಳೂರು : ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಸಿಸಿಬಿ ಪೊಲೀಸರು ದಾಳಿ ಮಾಡಿ, ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಅಲ್ಲದೇ ಅವರಿಂದ ಮಾರಕಾಸ್ತ್ರ ಸೇರಿದಂತೆ ಜಮೀನಿನ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಗೂಂಡಾ ಆಯಕ್ಟ್ ಅಡಿಯಲ್ಲಿ 31 ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿರುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು ಬೆಳ್ಳಂಬೆಳಗ್ಗೆ 2 ಸಾವಿರ ಮನೆಗಳ ಮೇಲೆ ದಾಳಿ ನಡೆಸಿದ್ದು, 1500 ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಕಾನೂನುಸುವ್ಯವಸ್ಥೆ ನಿಟ್ಟಿನಲ್ಲಿ ವಿಶೇಷ ಅಭಿಯಾನ ಅಂಗವಾಗಿ ಬೆಂಗಳೂರಿನ ಪೊಲೀಸರು ಈ ದಾಳಿ ಕೈಗೊಂಡಿದ್ದಾರೆ.

ರಾಜಧಾನಿಯ ಎಲ್ಲ ಡಿಸಿಪಿಗಳ ನೇತೃತ್ವದಲ್ಲಿ ಮಹಾನಗರದಾದ್ಯಂತ ಬೆಳಗಿನ ಜಾವವೇ ಈ ದಾಳಿಯನ್ನು ನಡೆಸಿದ್ದು, ರೌಡಿ ಶೀಟರ್​ಗಳಿಗೆ ಸಂಬಂಧಿಸಿದ 2000 ಮನೆಗಳ ಮೇಲೆ ಏಕಾಏಕಿ ದಾಳಿ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ 1,500 ರೌಡಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

ಇಂದು ಬೆಂಗಳೂರಿನ ಬೆಂಗಳೂರು ಸಿಟಿ ಹಾಗೂ ಸೆಂಟ್ರಲ್ ಜೈಲ್ ಮೇಲೆ ರೌಡಿ ಚಟುವಟಿಕೆಗಳ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. 1,548 ರೌಡಿಗಳನ್ನು ಠಾಣೆಗೆ ಕರೆಸಿ, ರೌಡಿ ಚಟುವಟಿಕೆಗಳಿಂದ ದೂರ ಇರುವಂತೆ ವಾರ್ನಿಂಗ್ ಮಾಡಲಾಗಿದೆ ಎಂದರು.

ಇಂದಿನ ದಾಳಿಯಲ್ಲಿ 91 ಲಾಂಗ್, ಮಚ್ಚು, ಮಾರಕಾಸ್ತ್ರ, ಡ್ರಗ್ಸ್ ಹಾಗೂ ಜಮೀನಿನ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಜಮೀನಿನ ದಾಖಲೆಗಳನ್ನು ಯಾಕೆ ಇಟ್ಟುಕೊಂಡಿದ್ದಾಗಿಯೂ ರೌಡಿಗಳನ್ನು ಪ್ರಶ್ನಿಸಲಾಗಿದೆ. ಮಾರಕಾಸ್ತ್ರಗಳನ್ನು ಇಟ್ಟುಕೊಂಡು ರೌಡಿ ಚಟುವಟಿಕೆಗಳಿಗೆ ಮುಂದಾಗಿದ್ದಂತ 48 ಜನರನ್ನು ಬಂಧಿಸಲಾಗಿದೆ ಎಂದರು.

ಇವೆಲ್ಲದರ ಸಂಬಂಧ ವಿಸ್ತೃತ ವಿಚಾರಣೆ ನಡೆಯಲಿದ್ದು, ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು ಕಂಡುಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡು ಜೈಲಿಗೆ ತಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಮಾತ್ರವಲ್ಲ ಬೆಂಗಳೂರು ಪೊಲೀಸರ ವ್ಯವಸ್ಥಿತವಾದ ಈ ಮಹಾ ಕಾರ್ಯಾಚರಣೆಗೆ ಮೆಚ್ಚುಗೆಯನ್ನೂ ಸೂಚಿಸಿದ್ದಾರೆ.

RELATED TOPICS:
English summary :Bangalore

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...