Wed,May15,2024
ಕನ್ನಡ / English

SSLC ಪರೀಕ್ಷೆಗೆ ಸಿದ್ಧತೆ ಪೂರ್ಣ: ಸಚಿವ ಸುರೇಶ್ ಕುಮಾರ್ | ಜನತಾ ನ್ಯೂಸ್

14 Jul 2021
1567

ಬೆಂಗಳೂರು : ಜುಲೈ 19 ಮತ್ತು 22ರಂದು ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಈಗಾಗಲೇ ಸಿದ್ಧತೆಗಳ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಸಿದ್ಧತೆ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ನಿರ್ದೇಶಕರ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾರ್ಗದರ್ಶನ ನೀಡಿದ ಸಚಿವರು, ಯಾವುದೇ ಒಂದು ಮಗುವಿಗೂ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕೆಂದು ಸಲಹೆ ನೀಡಿದರು.

ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪರೀಕ್ಷಾ ಸಿದ್ಧತೆ ಕುರಿತು ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಗಳು ನಡೆದಿವೆ. ಡಿಸಿಗಳ ನೇತೃತ್ವದಲ್ಲಿ ಸಿಇಒ, ಎಸ್.ಪಿ ಡಿಎಚ್‌ಒ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಭೆಗಳು ನಡೆದಿದ್ದು, ಪರೀಕ್ಷಾ ಸಿದ್ಧತೆ ಮತ್ತು ಎಸ್‌ಒಪಿ ಪಾಲನೆ ಕುರಿತಂತೆ ನಿರ್ದೇಶನ ನೀಡಿದ್ದು, ಆಯಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಿದ್ದಾರೆಂದು ಸಚಿವರು ಹೇಳಿದರು.

ಪರೀಕ್ಷೆಗೂ ಎರಡು ದಿನಗಳ ಮೊದಲು ಪರೀಕ್ಷಾ ಪ್ರಕ್ರಿಯೆಗೆ ನೇಮಕವಾಗಿರುವ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು ಪರೀಕ್ಷಾ ಕೇಂದ್ರದಲ್ಲಿ ಅಣಕು ಪರೀಕ್ಷಾ ಪ್ರಕ್ರಿಯೆ ನಡೆಸಲಿದ್ದಾರೆ.

ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ಯಾನರ್ ಪೂರೈಕೆ ಸೇರಿದಂತೆ ಎಲ್ಲ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು, ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರದ ಅಧೀಕ್ಷಕರು ಸೇರಿದಂತೆ ಅಗತ್ಯವಿರುವ ಎಲ್ಲ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗಿದ್ದು, ಅವರೆಲ್ಲರಿಗೂ ತಂತಮ್ಮ ಕರ್ತವ್ಯದ ಪಟ್ಟಿಯನ್ನು ನೀಡಲಾಗಿದೆ.

ಪೂರ್ಣ ಶುಲ್ಕ ಪಾವತಿಸದೇ ಇರುವುದರಿಂದ ಹಾಲ್ ಟಿಕೆಟ್ ನೀಡಿಲ್ಲ ಎಂಬ ವಿಚಾರದ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ಹಾಲ್ ಟಿಕೆಟ್ ನೀಡದ ಶಾಲೆಗಳ ವಿಚಾರವಾಗಿ ಬಿಇಒಗಳಿಗೆ ಸೂಚನೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಮಕ್ಕಳಿಗೆ ಪರೀಕ್ಷಾಂಗಣ ಸುರಕ್ಷತೆ ಮತ್ತು ಆತ್ಮವಿಶ್ವಾಸದ ಭಾವಗಳನ್ನು ಮೂಡಿಸುವಂತೆ ಕ್ರಮ ವಹಿಸಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಈಗಾಗಲೇ ಒಎಂಆರ್ ಶೀಟ್ ಕುರಿತು ಹತ್ತಾರು ಬಾರಿ ತಿಳಿವಳಿಕೆ ಮೂಡಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲೂ ಪ್ರತಿ ವಿದ್ಯಾರ್ಥಿಗೂ ಕೊಠಡಿ ಮೇಲ್ವಿಚಾರಕರು ಈ ಕುರಿತು ಸೂಕ್ತ ಮಾರ್ಗದರ್ಶನ ನೀಡಲು ಸೂಚನೆ ನೀಡಲಾಗಿದೆ. ಯಾವುದೇ ರೀತಿಯಲ್ಲೂ ಗೊಂದಲವಾಗದಂತೆ ಗಮನ ಹರಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಯಾವುದೇ ಶಾಲೆಯೂ ಶುಲ್ಕ ವಿಷಯಕ್ಕೆ ಸಂಬಂಧಿಸಿ, ಪರೀಕ್ಷೆಗೆ ಮಕ್ಕಳಿಗೆ ಪ್ರವೇಶ ಪತ್ರ ನಿರಾಕರಿಸಬಾರದು. ಅದಕ್ಕಾಗಿ ಪರೀಕ್ಷಾ ಮಂಡಳಿ ಇಂದು ಅಗತ್ಯ ಸುತ್ತೋಲೆ ಹೊರಡಿಸಲಿದೆ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

RELATED TOPICS:
English summary :Suresh Kumar

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...