Thu,May16,2024
ಕನ್ನಡ / English

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಳೆ ಹಾನಿ: ಡಿಸಿಗಳೊಂದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವೀಡಿಯೋ ಸಂವಾದ | ಜನತಾ ನ್ಯೂಸ್

16 Jul 2021
2693

ಉಡುಪಿ : ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ, ಕರಾವಳಿ, ಮಲೆನಾಡು ಭಾಗಗಳಲ್ಲಿನ ಭಾರಿ ಮಳೆ, ಪ್ರಕೃತಿ ವಿಕೋಪ ನಿಯಂತ್ರಣ ಕ್ರಮಗಳ ಕುರಿತಂತೆ ವೀಡಿಯೋ ಸಂವಾದ ನಡೆಸಿದರು.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಶುಕ್ರವಾರ ಉಡುಪಿ ಹಾಗೂ ಚಿಕ್ಕಮಗಳೂರು ಕ್ಷೇತ್ರದಲ್ಲಿ ಮಳೆ ಹಾನಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸಭೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಮಳೆಯಿಂದಾಗಲಿರುವ ಪೃಕತಿ ವಿಕೋಪಗಳ ಕುರಿತು, ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದರು.

ಜಿಲ್ಲೆಯಲ್ಲಿ ಸಾಗರಮಾಲಾ ಯೋಜನೆಯಡಿ ಬಾಕಿ ಇರುವ ಕಾಮಗಾರಿಗಳ ಬಗ್ಗೆ ವಿವರ ಸಲ್ಲಿಸಬೇಕು. ಉಪ್ಪುಂದದಲ್ಲಿ ₹ 130 ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣ ಮಾಡುವ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ. ಹೊಸ ಮೀನುಗಾರಿಕಾ ಮಸೂದೆಯೂ ಸಿದ್ಧವಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ 3ನೇ ಅಲೆ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಪಾಲನೆ, ಕಾರ್ಮಿಕರು ಕೆಲಸ ನಿರ್ವಹಿಸುವ ಕಡೆಗಳಲ್ಲಿ ಅಂತರ ಪಾಲನೆಯಾಗುತ್ತಿದೆಯೇ ಎಂದು ಪರಿಶೀಲಿಸಬೇಕು.

ಗ್ರಾಮೀಣ ಪ್ರದೇಶದಲ್ಲಿ ಆರಂಭವಾಗುತ್ತಿರುವ ಆಮ್ಲಜನಕ ಉತ್ಪಾದನಾ ಘಟಕಗಳು ಶೀಘ್ರ ಕಾರ್ಯಾರಂಭ ಮಾಡಬೇಕು. ದುರ್ಬಲ ವರ್ಗದವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ಹಾಕಬೇಕು. ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಪೌಷ್ಠಿಕ ಆಹಾರ ನೀಡಬೇಕು. ಗ್ರಾಮೀಣ ಪ್ರದೇಶಗಳಿಗೆ ‌ಸೋಂಕು ಹರಡದಂತೆ ಈ ಬಾರಿ ಎಚ್ಚರವಹಿಸಬೇಕು ಎಂದು ಸೂಚಿಸಿದರು.

RELATED TOPICS:
English summary :Shobha karandlaje

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...