Sun,May19,2024
ಕನ್ನಡ / English

ಪಕ್ಷವನ್ನು ಮುಜುಗರಕ್ಕೀಡುಮಾಡುವ ಮತ್ತು ಅಗೌರವ ತೋರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬಾರದು - ಬಿಎಸ್‌ವೈ ಮನವಿ | ಜನತಾ ನ್ಯೂಸ್

21 Jul 2021
2924

ಬೆಂಗಳೂರು : ಪಕ್ಷದ ಗೌರವಕ್ಕೆ ಚ್ಯುತಿ ತರುವ ಮತ್ತು ಮುಜುಗರ ತರುವಂತಹ ಪ್ರತಿಭಟನೆ / ಅಶಿಸ್ತುಗಳಲ್ಲಿ ಪಾಲ್ಗೊಳ್ಳಬಾರದು. ಇಂತಹ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ, ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ, ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಮ್ಮ ಅಧಿಕೃತ ಸಾಮಾಜಿಕ ಮಾದ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಬಿಜೆಪಿಯ ನಿಷ್ಠಾವಂತ ಕೆಲಸಗಾರನಾಗಲು ನಾನು ಸವಲತ್ತು ಹೊಂದಿದ್ದೇನೆ. ನೀತಿ ಮತ್ತು ನಡವಳಿಕೆಯ ಉನ್ನತ ಗುಣಮಟ್ಟವನ್ನು ಹೊಂದಿರುವ ಪಕ್ಷಕ್ಕೆ ಸೇವೆ ಸಲ್ಲಿಸುವುದು ನನ್ನ ಅತ್ಯಂತ ಗೌರವವಾಗಿದೆ. ಪಕ್ಷದ ನೀತಿಗೆ ಅನುಗುಣವಾಗಿ ವರ್ತಿಸಬೇಕು ಮತ್ತು ಪಕ್ಷಕ್ಕೆ ಅಗೌರವ ಮತ್ತು ಮುಜುಗರ ತರುವಂತಹ ಪ್ರತಿಭಟನೆ / ಅಶಿಸ್ತುಗಳಲ್ಲಿ ಪಾಲ್ಗೊಳ್ಳಬಾರದು ಎಂದು ನಾನು ಪ್ರತಿಯೊಬ್ಬರನ್ನು ಕೋರುತ್ತೇನೆ, ಎಂದು ಬಿಎಸ್‌ವೈ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಕುರಿತಾದ ಚರ್ಚೆ ತಾರಕಕ್ಕೆರಿದ್ದು, ರಾಜ್ಯ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆ ವಿಪರಿತವಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಒಂದೆಡೆ ಸಿಎಂ ಸ್ಥಾನದ ಆಕಾಂಕ್ಷಿಗಳ ಓಡಾಟ ಹೆಚ್ಚಾಗಿದ್ದರೆ, ಮುಖ್ಯಮಂತ್ರಿ ಬಿಎಸ್‌ವೈ ಪರ ಬಣದವರು ಪ್ರತಿಭಟನೆ ಸೇರಿದಂತೆ ಇತರೆ ಪ್ರತಿತಂತ್ರಗಳನ್ನು ಹಮ್ಮಿಕೊಂಡಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ, ಮಠಾದೀಶರು ರಾಜಕೀಯ ಅಖಾಡಕ್ಕೆ ಧುಮುಕಿದಂತೆ ಕಂಡುಬಂದಿದ್ದು, ಬಿಎಸ್‌ವೈ ಬೆಂಬಲಕ್ಕೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೇ, ಪಕ್ಷದ ವರಿಷ್ಠರಿಗೆ ಕೆಲವು ಮಠಾದೀಶರು ನೇರವಾಗಿ ಎಚ್ಚರಿಕೆ ರವಾನಿಸಿದ್ದಾರೆ.

RELATED TOPICS:
English summary :BSY requested not to indulge in protest which will embarrass & disrespect party

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...