Fri,Apr26,2024
ಕನ್ನಡ / English

ಹೈಕಮಾಂಡ್ ಮತ್ತು ಬಿಎಸ್‌ವೈ ಜತೆಗಿನ ಒಪ್ಪಂದದಂತೆ ಬಿಎಸ್‌ವೈ ರಾಜೀನಾಮೆ! | ಜನತಾ ನ್ಯೂಸ್

23 Jul 2021
3608

ಚಾಮರಾಜನಗರ : ಬಿಜೆಪಿ ಹೈಕಮಾಂಡ್ ಮತ್ತು ಸಿಎಂ ಯಡಿಯೂರಪ್ಪ ನಡುವೆ ಎರಡು ವರ್ಷಗಳ ಅಗ್ರಿಮೆಂಟ್ ಆಗಿತ್ತು, ಎಂದು ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 75 ವರ್ಷ ಆದವರು ಮುಖ್ಯ ಹುದ್ದೆಗಳಲ್ಲಿ ಇರಬಾರದು ಎಂಬುದು ಪಕ್ಷದ ನಿಲುವು. ಹಾಗಿದ್ದರೂ ಸಮ್ಮಿಶ್ರ ಸರ್ಕಾರ ಪತನವಾದಾಗ ಯಡಿಯೂರಪ್ಪ ಮುಖ್ಯಮಂತ್ರಿ ಆದರು. ವಯಸ್ಸಾಗಿದ್ದರೂ, ಎರಡು ವರ್ಷಗಳ ಕಾಲ ಮುಖ್ಯಮಂತ್ರಿಯಾಗಲು ಅವಕಾಶ ಕೊಡುವುದಾಗಿ ಹೈಕಮಾಂಡ್‌ ಹೇಳಿತ್ತು. ಅಂದು ನಡೆದ ಮಾತುಕತೆಯಂತೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದುವರೆಗೆ ಇದ್ದ ಊಹಾಪೋಹಕ್ಕೆ ಈಗ ತೆರೆ ಬಿದ್ದಿದೆ ಎಂದರು.

"ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್ ನಡುವೆ ಆಗಿದ್ದ ಮಾತುಕತೆಯಂತೆ ಈಗ ಯಡಿಯೂರಪ್ಪ ನಡೆದುಕೊಂಡಿದ್ದಾರೆ. ಈಗ ಒಂದು ಹಂತಕ್ಕೆ ಬಂದಿದೆ,' ಎಂದು ಚಾಮರಾಜನಗರದಲ್ಲಿ ಸಂಸದ ಶ್ರೀನಿವಾಸ್ ಪ್ರಸಾದ್ ಸ್ಪೋಟಕ ಮಾಹಿತಿ ಹಂಚಿಕೊಂಡರು.

ಯಡಿಯೂರಪ್ಪ ಅವರಿಗೆ ಸ್ವಾಮೀಜಿಗಳು ಬೆಂಬಲ ವ್ಯಕ್ತಪಡಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಂಸದರು, ಸ್ವಾಮೀಜಿಗಳು ಸೂಪರ್‌ ಹೈಕಮಾಂಡ್‌ಗಳಲ್ಲ. ಸ್ವಾಮೀಜಿಗಳು, ಹಿತೈಷಿಗಳು, ಬೆಂಬಲಿಗರು ಪಕ್ಷಕ್ಕೆ ಧಕ್ಕೆ ತರುವಂತೆ ಯಾರೂ ನಡೆದುಕೊಳ್ಳಬಾರದು, ಹೇಳಿಕೆ ನೀಡಬಾರದು ಎಂದು ಯಡಿಯೂರಪ್ಪ ಅವರೇ ಹೇಳಿದ್ದಾರೆ. ಪಕ್ಷವನ್ನು ರಾಜ್ಯದಲ್ಲಿ ಸಂಘಟಿಸಿದ ಯಡಿಯೂರಪ್ಪ ಅವರನ್ನು ಹೈಕಮಾಂಡ್‌ ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದೆ ಎಂದರು.

ಹೊಸ ಮುಖ್ಯಮಂತ್ರಿ ಯಾರು ಎಂಬುದು ಇನ್ನು ಎರಡು ದಿನಗಳಲ್ಲಿ ಗೊತ್ತಾಗಲಿದೆ. ಇದನ್ನು ಈಗಲೇ ಊಹಿಸಲು ಸಾಧ್ಯವಿಲ್ಲ. ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್‌ ನಿರ್ಧರಿಸುತ್ತದೆ ಎಂದರು.

"ಬಾಂಬೆ ಫ್ರೆಂಡ್ಸ್‌ಗೆ ಮಂತ್ರಿ ಸ್ಥಾನ ಕೊಡಬಾರದೆಂಬ ಎಂಎಲ್‌ಸಿ ಎಚ್. ವಿಶ್ವನಾಥ್ ಹೇಳಿಕೆಗೆ ಶ್ರೀನಿವಾಸ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿ, ವಿಶ್ವನಾಥ್ ಹೇಳಿಕೆಗೆ ಚಿಕ್ಕಾಸಿನ ಬೆಲೆ ಇಲ್ಲ. ವಿಶ್ವನಾಥ್ ಹತಾಶವಾದ ಹೇಳಿಕೆ ಕೊಡುತ್ತಿದ್ದಾರೆ. ವಿಶ್ವನಾಥ್ ಏನ್ ಹೈಕಮಾಂಡ? ತಮ್ಮ ತೇವಲಿಗೆ ಈ ರೀತಿಯ ಹೇಳಿಕೆ ಕೊಡಬಾರದು. ನಾನು ವಿಶ್ವನಾಥ್ ಬಿಜೆಪಿ ಪಕ್ಷ ಕಟ್ಟಿದ್ದವರಲ್ಲ. ಬಿಜೆಪಿಗೆ ಬಂದಿದ್ದೇವೆ, ನಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕೇ ಹೊರತು ಈ ರೀತಿ ಮಾತನಾಡಬಾರದು" ಎಂದು ವಿಶ್ವನಾಥ್ ವಿರುದ್ಧ ಸಂಸದ ಶ್ರೀನಿವಾಸ ಪ್ರಸಾದ್ ವಾಗ್ಧಾಳಿ ನಡೆಸಿದರು.

RELATED TOPICS:
English summary :Shrinivas prasad

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...